ನೇತ್ರಾವತಿ ನದಿಯ ಶಂಭೂರು ಎ.ಎಂ‌ಆರ್.ಡ್ಯಾಂ ನ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Saturday, November 4th, 2023
AMR-Dam

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಎ.ಎಂ‌ಆರ್.ಡ್ಯಾಂ ನ ಬಳಿ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ನೇತ್ರಾವತಿ ನದಿಯಲ್ಲಿ ಶವವೊಂದು ತೇಲಾಡುವುದು ಕಂಡು ಬಂದಿದ್ದು, ಎ.ಎಂ‌.ಆರ್.ಡ್ಯಾಂ ನ ಕಾರ್ಮಿಕರು ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ನೀಡಿದ ಮಾಹಿತಿ ಪ್ರಕಾರ ಶವ ಸಂಪೂರ್ಣ ಕೊಳೆತು ಹೋಗಿದ್ದು ಸುಮಾರು 15 ದಿನಗಳ ಹಿಂದೆ ನದಿಗೆ ಬಿದ್ದಿರುವ ಬಗ್ಗೆ ಸಂಶಯವಿದೆ. ಮೃತ ವ್ಯಕ್ತಿ ಪುರುಷ ಅಥವಾ ಮಹಿಳೆಯಾ ಎಂಬುದನ್ನು ಗುರುತು ಹಿಡಿಯಲು ಅಸಾಧ್ಯವಾದ ಪರಿಸ್ಥಿತಿ […]

ಕಣ್ಣಿಗೆ ಬಟ್ಟೆ ಕಟ್ಟಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವೃದ್ಧ

Monday, October 18th, 2021
Muthappa Shetty

ಉಪ್ಪಿನಂಗಡಿ : ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವೃದ್ಧನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಗೇರುಕಟ್ಟೆಯ ಪರಪ್ಪು ನಿವಾಸಿ ಮುತ್ತಪ್ಪ ಶೆಟ್ಟಿ (70) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಿಂದ ಉಪ್ಪಿನಂಗಡಿಗೆ ಬಸ್ಸಿನಲ್ಲಿ ಬಂದು ನೇತ್ರಾವತಿ ನದಿ ಸೇತುವೆ ಮೇಲಿಂದ ಮುತ್ತಪ್ಪ ಹಾರಿದ್ದಾರೆ. ತಕ್ಷಣ ಸ್ಥಳೀಯ ನಿವಾಸಿಗಳು ರಕ್ಷಣೆಗಾಗಿ ನದಿಗೆ ಹಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು […]

ತ್ಯಾಜ್ಯದ ಪ್ಲಾಸ್ಟಿಕ್ ಬ್ಯಾಗನ್ನು ನೇತ್ರಾವತಿ ನದಿಗೆ ಎಸೆದ ಪ್ರಕರಣ, ಕೇಸು ದಾಖಲು

Saturday, May 1st, 2021
garbage

ಮಂಗಳೂರು :  ನೇತ್ರಾವತಿ ಸೇತುವೆಯಲ್ಲಿ ಕಾರು ನಿಲ್ಲಿಸಿ ತ್ಯಾಜ್ಯದ ಪ್ಲಾಸ್ಟಿಕ್ ಬ್ಯಾಗನ್ನು ನದಿಗೆ ಎಸೆಯುತ್ತಿದ್ದನ್ನು ಹಿಂಬದಿಯಲ್ಲಿದ್ದ ಇನ್ನೊಂದು  ಕಾರಿನವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದನ್ನು ಗಮನಿಸಿ  ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ಆರೋಗ್ಯ ನಿರೀಕ್ಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿ  ಕೆ.ಎ. 03 ಎನ್‌ಬಿ 4648 ಸಂಖ್ಯೆಯ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾ.ಹೆ.66ರ ಉಳ್ಳಾಲ ಸೇತುವೆಯಲ್ಲಿ ಶನಿವಾರ ಕಾರು ನಿಲ್ಲಿಸಿ ನದಿಗೆ ತ್ಯಾಜ್ಯ ಎಸೆಯುತ್ತಿದ್ದ ಶೈಲಜಾ ನಾಯಕ್, ರಚನಾ ನಾಯಕ್, ಸುಶೀಲಾ ಎಂಬವರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ […]

174 ಕೋಟಿ ರೂ. ವೆಚ್ಚದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ – ಜೆ.ಸಿ. ಮಾಧುಸ್ವಾಮಿ

Tuesday, November 24th, 2020
maduswami

ಮಂಗಳೂರು : ಗ್ರಾಮಗಳಿಗೆ ಕುಡಿಯುವ ನೀರು, ಕೃಷಿ ಚಟುವಟಿಕೆ ಹಾಗೂ ಅಂತರ್ಜಾಲ ಅಭಿವೃದ್ಧಿಗೆ ಪೂರಕವಾಗಿ ಅಂದಾಜು 174 ಕೋಟಿ ಮೊತ್ತದಲ್ಲಿ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣವಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಹಾಗೂ ಸಣ್ಣ ನೀರಾವರಿ ಸಚಿವರು ಜೆ.ಸಿ. ಮಾಧುಸ್ವಾಮಿ ಹೇಳಿದರು. ಅವರು ಮಂಗಳವಾರ ಹರೇಕಳ ಸಮೀಪವಿರುವ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿಯ ಪರಿವೀಕ್ಷಣೆ ಮಾಡಿ, ಬಳಿಕ ಪತ್ರಕರ್ತರೊಂದಿಗೆ […]

ಪಾಣೆಮಂಗಳೂರು ನೂತನ ಸೇತುವೆ ಬಳಿ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

Monday, July 13th, 2020
Panemangaluru

ಬಂಟ್ವಾಳ : ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಮಹಿಳೆ ಗೋಪಿ ಪೂಜಾರಿ(49) ಎಂಬುವರ ಮೃತದೇಹ ಸೋಮವಾರ ತುಂಬೆ ಸಮೀಪದಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಹಿಳೆ ಪಾಣೆಮಂಗಳೂರು ನೂತನ ಸೇತುವೆ ಬಳಿಯಿಂದ ಶನಿವಾರ ನಾಪತ್ತೆಯಾಗಿರುವ ಬಗ್ಗೆ ಗುಮಾನಿ ಇತ್ತು. ಸ್ಥಳೀಯ ಮುಳುಗು ತಜ್ಞರು, ಅಗ್ನಿಶಾಮಕ ದಳದ ಸಿಬ್ಬಂದಿ ಮಹಿಳೆಗಾಗಿ ಭಾನುವಾರ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಬಿ.ಸಿ.ರೋಡಿನ ಚಿಕ್ಕಯ್ಯಮಠದಲ್ಲಿರುವ ಅಕ್ಕನ ಮನೆಗೆ ಕೆಲವು ದಿನಗಳ ಹಿಂದೆ ಬಂದಿದ್ದ ಮಹಿಳೆ ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದರು. […]

ನೇತ್ರಾವತಿ ನದಿಗೆ ಹಾರಿದ ಹರೇಕಳದ ಯುವಕನ ಶವ ಜೆಪ್ಪುಪಟ್ನದಲ್ಲಿ ವಾರದ ಬಳಿಕ ಪತ್ತೆ

Wednesday, July 8th, 2020
Kishor

ಉಳ್ಳಾಲ :  ನಾಪತ್ತೆಯಾಗಿದ್ದ ಹರೇಕಳದ ಯುವಕನ ಶವ ಬುಧವಾರ ಜೆಪ್ಪುಪಟ್ನ ಸಮೀಪ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಹರೇಕಳ ದ ಕೊಲ್ಕೆ ಶಾಲೆ ಬಳಿಯ ಕಿಶೋರ್ ಅಡ್ಯಂತಾಯ (36) ಎಂದು ಪತ್ತೆಹಚ್ಚಲಾಗಿದೆ. ಮನೆಯಲ್ಲಿ ತಂದೆ ಮತ್ತು ಮಗ ಇಬ್ಬರೇ ಇದ್ದು ಜೀವನದಲ್ಲಿ ಜಿಗುಪ್ಸೆ ಹೊಂದಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇತ್ರಾವತಿ ಸೇತುವೆಯಲ್ಲಿ ಕೊಡೆ ಪತ್ತೆಯಾಗಿತ್ತು ಆದರೆ ಕೊಡೆ ಪತ್ತೆಯಾದ ಕುರಿತು ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಯುವಕ ನಾಪತ್ತೆಯಾಗಿ ಎರಡು ದಿನಗಳ […]

ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಹುಟ್ಟಿ ಧರ್ಮಸ್ಥಳದ ಮೂಲಕ ಸಾಗುವ ನೇತ್ರಾವತಿ ನದಿಗೆ ಕಾಯಕಲ್ಪ

Thursday, June 4th, 2020
netravathi

ಧರ್ಮಸ್ಥಳ : ನದಿಗಳು ನಿತ್ಯ ಚಲನಶೀಲವಾಗಿದ್ದು ಕ್ರಿಯಾಶೀಲ ವಾಗಿರುತ್ತವೆ. ನದಿಗಳ ಉಗಮ ಸ್ಥಾನದಿಂದ ಸಮುದ್ರ ಸೇರುವವರೆಗೂ ಹಲವು ನದಿ-ತೊರೆಗಳನ್ನು ಸೇರಿಸಿಕೊಂಡು ತಮ್ಮಉಭಯ ಮಗ್ಗುಲುಗಳಲ್ಲಿ ಜನರಿಗೆ ಉಪಯುಕ್ತ ವಾಗುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಎಂದೇ ಕರೆಯಲ್ಪಡುವ ನೇತ್ರಾವತಿ ನದಿಯ ಉಗಮಸ್ಥಾನ ಕುದುರೆಮುಖ ಪರ್ವತ ಶ್ರೇಣಿಯ ಎಳನೀರು ಘಾಟಿಯ ಬ೦ಗ್ರ ಬಲಿಗೆ ಕಣಿವೆ ಆಗಿದೆ. ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದ ಮೂಲಕ ಹರಿದು ಹೋಗುವ ನೇತ್ರಾವತಿ ನದಿ ಪುಣ್ಯನದಿ ಎಂದು ಮಾನ್ಯತೆ ಹೊಂದಿದ್ದು ಧರ್ಮಸ್ಥಳಕ್ಕೆ ಬರುವ ಭಕ್ತರು ನದಿಸ್ನಾನ ಮಾಡಿ ದೇವರ […]

ಧರ್ಮಸ್ಥಳದಲ್ಲಿ ನೇತ್ರಾವತಿ ನದಿಯಲ್ಲಿ ಸ್ವಚ್ಛತಾ ಕಾರ್ಯ

Monday, February 3rd, 2020
dharmastala

ಉಜಿರೆ : ಆರುನೂರು ಮಂದಿ ಸಕ್ರಿಯ ಸ್ವಯಂ ಸೇವಕರತಂಡ ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ ಉಜಿರೆಯಲ್ಲಿ ಕಳೆದ ಜನವರಿ 21ರಂದುಉಜಿರೆಜಾತ್ರೆ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆಗೊಂಡಿತ್ತು. ಕಳೆದ ಜೂನ್ ತಿಂಗಳಿನಲ್ಲಿ ಮುಂಡಾಜೆ, ಚಾರ್ಮಾಡಿ ಪರಿಸರದಲ್ಲಿ ನೆರೆ ಪೀಡಿತರಿಗೆ ಸಂಕಷ್ಟದ ಸಂದರ್ಭಅಭಯಹಸ್ತ ನೀಡಿ ಸಹಕರಿಸಿದ ತಂಡ ಪ್ರಾಕೃತಿಕ ವಿಕೋಪಗಳು ಮುಂದೆ ಸಂಭವಿಸಿದಾಗ ನೆರವು ನೀಡಲು ಹಾಗೂ ಸೇವೆ ನೀಡಲು 600 ಜನರ ವ್ಯವಸ್ಥಿತ ಸ್ವಯಂ ಸೇವಕರತಂಡವನ್ನು ರಚಿಸಿದೆ. ಸೇವಾ ಸಮಿತಿಯ ಪ್ರಥಮ ಸೇವೆಯಾಗಿ ಭಾನುವಾರ ಧರ್ಮಸ್ಥಳದಲ್ಲಿ […]

ಹೊಸ ವರ್ಷದ ಶುಭಾರಂಭ : ಧರ್ಮಸ್ಥಳದಲ್ಲಿ ಭಕ್ತರ ಗಡಣ

Wednesday, January 1st, 2020
ujire

ಉಜಿರೆ : ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವ ಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ದೇವರದರ್ಶನ ಪಡೆದು ಸೇವೆ ಸಲ್ಲಿಸಿದರು. ಹಲವು ಮಂದಿ ಪಾದಯಾತ್ರೆಯಲ್ಲಿ ಬಂದರೆ, ಕೆಲವರು ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದು ತಮ್ಮಸೇವೆ ಸಲ್ಲಿಸಿದ್ದಾರೆ. ಅನೇಕ ಮಂದಿ ಮುಡಿ ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ […]

ಬಂಟ್ವಾಳ : ನೇತ್ರಾವತಿ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ

Tuesday, October 15th, 2019
netravati-nadi

ಬಂಟ್ವಾಳ :ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ, ಲಿಂಗಪ್ಪ ಪೂಜಾರಿ ಎಂಬವರ ಪುತ್ರಿ ತುಳಸಿ (30) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಿದ್ದ ತುಳಸಿ ಸೋಮವಾರ ಮುಂಜಾನೆ ವೇಳೆಗೆ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಬರಿಮಾರು ಗ್ರಾಮದ ಪಾಪೆತ್ತಿಮಾರು ಕಡವಿ ಬಳಿಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಎಸ್ಸೈ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. […]