ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆದ ರೈತರಿಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು: ಸಂಸದ ನಳಿನ್‌ ಕುಮಾರ್‌

Saturday, October 7th, 2017
nalin kumar

ಮಂಗಳೂರು:   ಬ್ಯಾಂಕ್‌ಗಳಿಂದ ನಾಲ್ಕೈದು ವರ್ಷ ಗಳ ಅವಧಿಯಲ್ಲಿ 83,291 ಮಂದಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ಗಳನ್ನು ಜಿಲ್ಲೆಯಲ್ಲಿ ವಿತರಿಸಲಾಗಿದೆ ಯಾದರೂ, ಅದರಿಂದ ಒಬ್ಬರಿಗೂ ಪ್ರಯೋಜನವಾಗಿಲ್ಲ. ರೈತರಿಗೆ ಅತ್ಯಂತ ಉಪಯುಕ್ತವಾದ ಈ ಯೋಜನೆಯ ಬಗ್ಗೆ ಕೃಷಿಕರಿಗೆ ಮಾಹಿತಿ ಇಲ್ಲವಾದ್ದರಿಂದ ಅದರ ಪ್ರಯೋಜನ ಸಿಗುತ್ತಿಲ್ಲ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಜಿಲ್ಲೆಯ ಬ್ಯಾಂಕ್‌ಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ನಳಿನ್‌ ಕುಮಾರ್‌ ಅವರಿಗೆ ಬ್ಯಾಂಕ್‌ ಅಧಿಕಾರಿಗಳಿಂದ ಇಂಥ ಮಾಹಿತಿ ಸಿಕ್ಕಿತು! ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಪಡೆದ […]

ಕೃಷಿಗೆ ಆದ್ಯತೆ ನೀಡಿ-ಪಿ.ಶಿವಶಂಕರ್

Wednesday, April 6th, 2011
ಪಿ.ಶಿವಶಂಕರ್

ಮಂಗಳೂರು : ಜಿಲ್ಲೆಯಲ್ಲಿ ಕೃಷಿ ಹಾಗೂ ಕೃಷಿ ಪೂರಕ ಚಟುವಟಿಕೆಗಳ ಪ್ರೋತ್ಸಾಹಕ್ಕಾಗಿ ಜಿಲ್ಲಾ ಸಾಲ ಯೋಜನೆ 2011-12 ರಲ್ಲಿ ಹೆಚ್ಚಿನ ಅನುದಾನವನ್ನು ನಿಗಧಿಪಡಿಸುವ ಮೂಲಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಶ್ರೀ ಪಿ.ಶಿವಶಂಕರ್ ಜಿಲ್ಲೆಯ ಬ್ಯಾಂಕಿಂಗ್ ಕ್ಷೇತ್ರದ ಮುಖ್ಯಸ್ಥರಿಗೆ ಕರೆ ನೀಡಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ 2011-12 ನೇ ಸಾಲಿನ ಜಿಲ್ಲಾ ಬ್ಯಾಂಕಿಂಗ್ ಸಾಲಯೋಜನೆ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. 2010-11 ನೇ ಸಾಲಿನಲ್ಲಿ […]