ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿಗೆ ಗ್ರಾಹಕರಿಂದ ಹೆಚ್ಚು ಹಣ ವಸೂಲಿ, ದೂರು
Monday, May 31st, 2021ಮಂಗಳೂರು : ಲಾಕ್ ಡೌನ್ ಸಂದರ್ಭದಲ್ಲಿ ಗ್ರಾಹಕ ರಿಂದ ಕೆಲವೊಂದು ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳ ವರ್ತಕರು ಸಿಕ್ಕಿದ್ದೇ ಲಾಭ ಎಂಬಂತೆ ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವುದರಿಂದ, ಅಂತಹ ವರ್ತಕರನ್ನು ಪತ್ತೆ ಹಚ್ಚಲು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ […]