ಸುಪ್ರೀಂ ಕೋಟ್೯ ನ್ಯಾಯಮೂರ್ತಿಗಳಿಂದ ಪುತ್ತೂರಿನ ವಕೀಲರ ಸಂಘದ ಉದ್ಘಾಟನೆ

Tuesday, December 28th, 2021
Pittur Court

ಮಂಗಳೂರು : ಸುಪ್ರೀಂ ಕೋಟ್೯ ನ ಮಾನ್ಯ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಡಿ.28ರ ಮಂಗಳವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಕಟ್ಟಡದ ಆವರಣದಲ್ಲಿ ಸಸಿಯೊಂದನ್ನು ನೆಟ್ಟರು. ಅವರೊಂದಿಗೆ, ರಾಜ್ಯ ಹೈಕೋರ್ಟ್‍ನ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ. ಸೋಮಶೇಖರ್, ಹೈಕೋರ್ಟ್‍ನ ನ್ಯಾಯಾಧೀಶರುಗಳಾದ ಮೊಹಮ್ಮದ್ ನವಾಜ್ […]

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ

Tuesday, December 28th, 2021
Abdul Nazir

ಸುಬ್ರಹ್ಮಣ್ಯ : ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಸೋಮವಾರ ದೇವಸ್ಥಾನಕ್ಕೆ ಆಗಮಿಸಿದ  ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು. ದೇವಸ್ಥಾನದಲ್ಲಿ  ಅವರು ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.  ಅಬ್ದುಲ್ ನಝೀರ್ ಅವರು ಮಂಗಳವಾರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಪ್ಯಾಂಟ್‌ ಜಿಪ್ ಜಾರಿಸಿದರೆ ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

Thursday, January 28th, 2021
posco act

ಮುಂಬೈ: ಐದು ವರ್ಷದ ಬಾಲಕಿಯ ಮೇಲೆ 50 ವರ್ಷದ ವ್ಯಕ್ತಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪೋಕ್ಸೋ ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪುಷ್ಪ ಗನೇಡಿವಾಲ ತೀರ್ಪು ನೀಡಿದ್ದು,  ಅಪ್ರಾಪ್ತ ಬಾಲಕಿಯ ಕೈ ಹಿಡಿಯುವುದು ಹಾಗೂ ಪ್ಯಾಂಟ್ ಜಿಪ್‌ ತೆಗೆಯುವುದನ್ನು ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸುವಂತಿಲ್ಲ ಎಂದು ಹೇಳಿದ್ದಾರೆ. ಇತ್ತೀಚಿಗಷ್ಟೇ ಚರ್ಮಕ್ಕೆ ಚರ್ಮ ತಾಗದಿದ್ದರೆ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನಾಗ್ಪುರ್ ಪೀಠ, ಈಗ ಮತ್ತೊಂದು ವಿವಾದಾತ್ಮಕ […]

ಬೆಂಗಳೂರು : ನ್ಯಾಯಮೂರ್ತಿ ಹುದ್ದೆಗೆ 12 ವಕೀಲರ ಹೆಸರು ಶಿಫಾರಸು

Saturday, October 5th, 2019
supreem-court

ಬೆಂಗಳೂರು : ರಾಜ್ಯದ ವಕೀಲ ವೃಂದದಿಂದ 12 ಮಂದಿಯನ್ನು ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಶಿಫಾರಸು ಮಾಡಿದೆ. ಸಿಜೆಐ ರಂಜನ್ ಗೊಗೊಯ್ ನೇತೃತ್ವದಲ್ಲಿ ಗುರುವಾರ ನಡೆದ ಕೊಲಿಜಿಯಂನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಂಜಯ್ಗೌಡ, ಎಂ.ಜ್ಯೋತಿ, ಆರ್. ನಟರಾಜ್, ಎನ್.ಆರ್. ನಾಯಕ್, ಹೇಮಂತ್ ಚಂದನಗೌಡರ್, ಆರ್. ವಿ. ಹೊಸಮನಿ, ಪ್ರದೀಪ್ ಸಿಂಗ್ ಯೆರೂರ್ ಮತ್ತು ಎಂ.ಎನ್. ನಾಗಪ್ರಸನ್ನ ಅವರನ್ನು ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಲಾಗಿದೆ. ಎಸ್. ವಿಶ್ವಜಿತ್ ಶೆಟ್ಟಿ, ಇ.ಎಸ್. ಇಂದಿರೇಶ್, […]

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮುಂದೂಡಿಕೆ

Monday, September 23rd, 2019
suprrem-court

ನವದೆಹಲಿ : ಕರ್ನಾಟಕ ವಿಧಾನಸಭೆಯಿಂದ ತಮ್ಮ ಶಾಸಕತ್ವ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಬುಧವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಸ್.ವಿ. ರಮಣ, ನ್ಯಾಯಮುರ್ತಿಗಳಾದ ಸಂಜೀವ ಖನ್ನಾ ಹಾಗೂ ಕೃಷ್ಣ ಮುರಾರಿ ಅವರಿದ್ದ ತ್ರಿಸದಸ್ಯ ಪೀಠದಿಂದ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಇಂದು ನಡೆಯುತ್ತಿತ್ತು. ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು ಮತ್ತು ಸ್ಪೀಕರ್ ಪರ ತುಷಾರ್ […]

ನಿರಾಶ್ರಿತರ ಕೇಂದ್ರಕ್ಕೆ ಪರ್ಯಾಯ ನಿವೇಶನ: ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ

Saturday, July 20th, 2019
lokayukta

ಮಂಗಳೂರು : ನಗರದ ಪಚ್ಚನಾಡಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ವಿಶಾಲವಾದ ಬೇರೆ ಜಮೀನು ಮಂಜೂರು ಮಾಡಲು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಸೂಚಿಸಿದ್ದಾರೆ. ಅವರು ಶನಿವಾರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಂಗಳೂರು ತಹಶೀಲ್ದಾರ್‍ಗೆ ಈ ಸೂಚನೆ ನೀಡಿದರು. ಪ್ರಸಕ್ತ ನಿರಾಶ್ರಿತರ ಪರಿಹಾರ ಕೇಂದ್ರವು ಎರಡು ಎಕರೆ ಜಾಗದಲ್ಲಿದ್ದು, ಸುಮಾರು 150ಕ್ಕೂ ಅಧಿಕ ಮಂದಿ ನಿರಾಶ್ರಿತರು ಇಲ್ಲಿ ವಾಸ್ತವ್ಯದಲ್ಲಿದ್ದಾರೆ. ನಿರಾಶ್ರಿತರಿಗೆ ವಾಸ್ತವ್ಯ ತಾಣವಲ್ಲದೇ, ಅವರಿಗೆ ಉಳಿದ ಸಮಯದಲ್ಲಿ ಕೃಷಿ, […]