ಪಂಪುವೆಲ್ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ
Saturday, October 13th, 2018ಮಂಗಳೂರು: ಪಂಪುವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು, ನಂತೂರು ಮೇಲ್ಸೇತುವೆ ನಿರ್ಮಿಸಲು ಹಾಗೂ ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಇಂದು (ತಾ. 12-10-2018) ಪಂಪುವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು. ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ದೇಶದ ಜೀವನಾಡಿಗಳಿದ್ದಂತೆ ಹೆದ್ದಾರಿಗಳಲ್ಲಿ ವಾಹನಗಳು ನಿರಾತಂಕವಾಗಿ ಚಲಿಸುವಂತೆ ಸುಸ್ಥಿತಿಯಲ್ಲಿಡುವುದು ಹೆದ್ದಾರಿ ಪ್ರಾಧಿಕಾರದ ಕರ್ತವ್ಯವಾಗಿರುತ್ತದೆ. ಆದರೆ ಮಂಗಳೂರಿನ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಪುವೆಲ್, ತೊಕ್ಕೊಟ್ಟಿನ ಮೇಲ್ಸೇತುವೆ ಕಾಮಗಾರಿ ಕಳೆದ ೮ ವರುಷಗಳಿಂದ ಪೂರ್ಣಗೊಂಡಿಲ್ಲ. ಹೆದ್ದಾರಿಯುದ್ದಕ್ಕೂ ಸರ್ವಿಸ್ […]