ನಿಶ್ಚಿತಾರ್ಥ ಜೋಡಿಯಿಂದ ಬಾವಿಯ ಮೆಟ್ಟಿಲಿನಲ್ಲಿ ನಿಂತು ಸೆಲ್ಫಿ : ಆಯತಪ್ಪಿ ಬಿದ್ದು ಯುವತಿ ಮೃತ್ಯು
Tuesday, November 5th, 2019ಚೆನ್ನೈ : ಇತ್ತೀಚೆಗಷ್ಟೇ ನಿಶ್ಚಿತಾರ್ಥವಾದ ಜೋಡಿಯೊಂದು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಾವಿಗೆ ಬಿದ್ದ ಘಟನೆ ಚೆನ್ನೈನಲ್ಲಿ ನಡೆದಿದೆ. ಈ ಘಟನೆ ಪಟ್ಟಾಭಿರಾಮ್ ಎಂಬಲ್ಲಿ ಸೋಮವಾರ ನಡೆದಿದ್ದು, ಅವಘಡದಲ್ಲಿ ಯುವತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಆದರೆ ಯುವಕ ಮಾತ್ರ ರೈತನ ಸಹಾಯದಿಂದಾಗಿ ಪ್ರಾಣಾಪಾಯದಿಂದಾಗಿ ಪಾರಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತ ದುರ್ದೈವಿ ಯುವತಿಯನ್ನು ಟಿ ಮರ್ಸಿ ಸ್ಟೆಪ್ಪಿ(24) ಎಂದು ಗುರುತಿಸಲಾಗಿದೆ. ಪಟ್ಟಾಭಿರಾಮ್ ಬಳಿಯ ಗಾಂಧಿನಗರ ನಿವಾಸಿಯಾಗಿರುವ ಈಕೆಗೆ ಕೆಲ ದಿನಗಳ ಹಿಂದೆಯಷ್ಟೇ ಡಿ ಅಪ್ಪು(24) ಎಂಬಾತನ […]