ಪಡುಕರೆಯಲ್ಲಿ 4ನೇ ಹಂತದ ಮೀನುಗಾರಿಕೆ ಬಂದರು: ಪ್ರಮೋದ್
Tuesday, January 23rd, 2018ಮಲ್ಪೆ: ಪಡುಕರೆ ಭಾಗದಲ್ಲಿ 4ನೇ ಹಂತದ ಮೀನುಗಾರಿಕೆ ಜೆಟ್ಟಿ ನಿರ್ಮಾಣಕ್ಕೆ ಈಗಾಗಲೇ 20 ಕೋ. ರೂ. ಪ್ರಸ್ತಾವನೆಯನ್ನು ನಬಾರ್ಡ್ಗೆ ಕಳುಹಿಸಲಾಗಿದ್ದು, ಇದರಲ್ಲಿ 10 ಕೋ. ರೂ. ಅತೀ ಶೀಘ್ರದಲ್ಲಿ ಮಂಜೂರಾಗುವ ಸಾಧ್ಯತೆ ಇದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ರವಿವಾರ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವಾಂಗೀಣ ಅಭಿವೃದ್ಧಿ ರಾಜ್ಯ ಸರಕಾರವು ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಆರಂಭದಿಂದಲೂ ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ. […]