ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದಾಳಿ… ಇಬ್ಬರಿಗೆ ಗಾಯ
Wednesday, February 21st, 2018ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದೆ. ಮಂಗಳೂರಿನ ಬೆಂಗ್ರೆ ಬಳಿ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಬಸ್‌ನಲ್ಲಿದ್ದವರ ಮೇಲೆ ಚೂರಿಯಿಂದ ಹಲ್ಲೆ ನಡೆಸಲಾಗಿದೆ. ಮಲ್ಪೆಯಲ್ಲಿ ಮೀನುಗಾರರ ಸಮಾವೇಶ ಮುಗಿಸಿ ವಾಪಸಾಗುತ್ತಿದ್ದ ಕಾರ್ಯಕರ್ತರ ಬಸ್ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡದಿಂದ ಹಲ್ಲೆ ನಡೆದಿದ್ದು, ಈ ವೇಳೆ ಇಬ್ಬರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನೂ ಘಟನೆಯಲ್ಲಿ ಡಿಸಿಪಿ, ಎಸಿಪಿ, ಪಿಎಸ್ […]