ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್
Friday, November 29th, 2024ಮಂಗಳೂರು : ಪರಸ್ಪರ ಉತ್ತಮ ಬಾಂಧವ್ಯ ಹಾಗೂ ಸೌಹಾರ್ದತೆಯ ವಾತಾವರಣ ಮೂಡಿಸಲು ಕ್ರೀಡೆ ಪೂರಕವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಸಮಯ ಮೀಸಲಿಡುವುದು ಅತೀ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು. ದಕ್ಷಿಣ ಕನ್ನಡ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಗುರುವಾರ ನಗರದ ನೆಹರು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಹಾಗೂ ಪತ್ರಕರ್ತರ ತಂಡದ ಸೌಹಾರ್ದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು. […]