Blog Archive

ಸುದ್ದಿ ಬಿತ್ತರಿಸುವ ಭರದಲ್ಲಿ ಸಾರ ಮರೆಯದಿರಿ: ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

Thursday, July 1st, 2021
Press Day

ಬೆಂಗಳೂರು :  ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿಮಾತನಾಡಿದರು. ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ ಮಂಗಳೂರು ಸಮಾಚಾರ ಕನ್ನಡದ ಮೊತ್ತ ಮೊದಲ ಪತ್ರಿಕೆ. […]

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

Wednesday, June 23rd, 2021
press-vacination

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ ಉತ್ಪಾದನೆಯಾಗಿ ಹಂತ ಹಂತವಾಗಿ ಪೂರೈಕೆಯಾಗುತ್ತಿರುವ ಕಾರಣ 45 ವರ್ಷಕ್ಕಿಂತ […]

ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ದಿನಸಿ ಕಿಟ್ ನೆರವು

Tuesday, June 15th, 2021
SCDCC-Kit

ಮಂಗಳೂರು : ಕೊರೋನ ಸಂಕಷ್ಟದ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪತ್ರಕರ್ತರಿಗೆ ದಿನಸಿ ಕಿಟ್ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಮಂಗಳವಾರ ನಗರದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಕರ್ತರಿಗೆ ಕಿಟ್ ವಿತರಿಸಿದರು. ಲಾಕ್ ಡೌನ್ ನ್ನು ಶೀಘ್ರ ತೆರವು ಗೊಳಿಸುವ ಆಶಯವನ್ನು ಸರಕಾರ ಹೊಂದಿದೆ ಎಂದರು. ಕೊರೋನ ಸಂಕಷ್ಟದ ಸಂದರ್ಭ ದಲ್ಲಿ ಬ್ಯಾಂಕ್ ತನ್ನ ಗ್ರಾಹಕರು ಅಲ್ಲದೆ ತೊಂದರೆಗೀಡಾದ ಜನರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್  ಹೇಳಿದರು. […]

ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ಬ್ಲ್ಯಾಕ್‍ಮೇಲ್ , ಇಬ್ಬರು ಆರೋಪಿಗಳಿಗೆ ಜಾಮೀನು ನೀಡಬೇಡಿ : ಎಸ್‍ಐಟಿ

Thursday, June 3rd, 2021
Naresh

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲ್ಯಾಕ್‍ಮೇಲ್  ಮಾಡಿದ ಇಬ್ಬರು ಪತ್ರಕರ್ತರಿಗೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು  ಎಂದು ಎಸ್‍ಐಟಿ ಆಕ್ಷೇಪಣೆ ಸಲ್ಲಿಸಿದೆ. ಉತ್ತರ ಕರ್ನಾಟಕದ ಯುವತಿಯೊಬ್ಬಳ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದ ರಮೇಶ್ ಜಾರಕಿಹೊಳಿಯವರ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಕಾರ್ಯಕರ್ತ ಪೊಲೀಸರಿಗೆ ನೀಡಿದ್ದರು. ರಮೇಶ್ ಜಾರಕಿಹೊಳಿ ಆ ಯುವತಿಯನ್ನು ಹೆದರಿಸಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಈ ವಿಷಯವನ್ನು ಯಾರಿಗೂ ಹೇಳದಂತೆ ಆಕೆಗೆ ಜೀವ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ, ರಮೇಶ್ ಜಾರಕಿಹೊಳಿ […]

ಪತ್ರಕರ್ತರೇ ಹುಷಾರ್..! : ಡಿಸೆಂಬರ್ ವರೆಗೂ ತಪ್ಪಿದ್ದಲ್ಲ ಡೆಡ್ಲಿ ಕಾಟ..

Saturday, May 1st, 2021
Manjunatha

ಬೆಂಗಳೂರು: ಕೊರೊನಾದಿಂದ ಮುಕ್ತಿ ಯಾವಾಗ ಎನ್ನುವವರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಡೆಡ್ಲಿ ಕಾಟ ಡಿಸೆಂಬರ್ ವರೆಗೂ ತಪ್ಪಿದ್ದಲ್ಲ ಹಾಗಾಗಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕು ಬಾರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪರಿಪಾಲನೆ ಮಾಡದೆ ಹೋದರೆ, ಸಮಸ್ಯೆ ಇನ್ನೂ ತೀವ್ರವಾಗಿ ಕಾಡಬಹುದು ಎಂದು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗಿರಬೇಕಾದ ಮುನ್ನೆಚ್ಚರಿಕೆ ವಿಷಯದ ಬಗ್ಗೆ ಅವರು […]

ಪತ್ರಕರ್ತನಾದವನಿಗೆ ಸಂಪಾದನೆ ಮಾಡಲು ಸಾಕಷ್ಟು ದಾರಿಗಳಿವೆ : ಪ್ರಕಾಶ್ ಡಿ.ರಾಂಪೂರ್

Friday, March 19th, 2021
Alvas Journalism

ಮೂಡುಬಿದ್ರೆ :  `ಒಬ್ಬ ಪತ್ರಕರ್ತನಾದವನಿಗೆ ಸಂಪಾದನೆ ಮಾಡಲು ಸಾಕಷ್ಟು ದಾರಿಗಳಿವೆ. ಆದರೆ ನೀತಿಯುತವಾದ ಮಾರ್ಗವನ್ನು ಆಯ್ಕೆ ಮಾಡುವುದು ಪತ್ರಕರ್ತನ ಜವಾಬ್ದಾರಿ. ಒಬ್ಬ ಪತ್ರಕರ್ತನಾದವನ ವ್ಯಕ್ತಿತ್ವ, ವಿಶ್ವಾಸರ್ಹತೆ ಅವನು ಆಯ್ಕೆ ಮಾಡಿಕೊಳ್ಳುವ ದಾರಿಯ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಬೆಂಗಳೂರು ಪಬ್ಲಿಕ್ ಟಿವಿ ವರದಿಗಾರ ಹಾಗೂ ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಪ್ರಕಾಶ್ ಡಿ.ರಾಂಪೂರ್ ಹೇಳಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ “ಅಲ್ಯುಮಿನಿ ಲೆಕ್ಚರ್” ಕರ್ಯಕ್ರಮದಲ್ಲಿ ಅವರು […]

ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ ಪತ್ರಕರ್ತ ಬಿ.ಎನ್. ಅಶೋಕ್ ಶೆಟ್ಟಿಗೆ ರಾಜ್ಯ ಪ್ರಶಸ್ತಿ

Thursday, February 11th, 2021
Ashok Shetty

ಮಂಗಳೂರು:   ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಗಾಗಿ “ವಿಶ್ವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ದಿನಾಚರಣೆ” ಸಮಾರಂಭದಲ್ಲಿ ಪತ್ರಕರ್ತ ಡಾ| ಅಶೋಕ್ ಶೆಟ್ಟಿ ಬಿ.ಎನ್. ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಫೆಬ್ರವರಿ 11 , ಗುರುವಾರ ರಾಜ್ಯ ಪ್ರಶಸ್ತಿ (ವೈಯಕ್ತಿಕ ಪ್ರಶಸ್ತಿ)  ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಹಿಳೆಯರು, ಮಕ್ಕಳು ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ 2021-22ನೇ ಸಾಲಿನ ಆಯವ್ಯಯದಲ್ಲಿ ಸುಮಾರು 500 ಕೋಟಿ ರೂ.ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದಿದ್ದಾರೆ. […]

ಕೆ.ಜಿ.ಹಳ್ಳಿ ಗಲಭೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಕೊಪ್ಪಳದಲ್ಲಿ ಪತ್ರ ಚಳುವಳಿ

Wednesday, August 12th, 2020
koppala

ಕೊಪ್ಪಳ: ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದಕ್ಕೆ  ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆ ಕಲ್ಲುಎಸೆದು ಹಿಂಸಾಚಾರ ಮಾಡಿದ್ದಲ್ಲದೆ ಅಲ್ಲಿದ್ದ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದನ್ನು ಖಂಡಿಸಿ ಕೊಪ್ಪಳ ಮೀಡಿಯಾ ಕ್ಲಬ್ ಬುಧವಾರ ಪತ್ರ ಚಳುವಳಿ ನಡೆಸಿತು. ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ, ಸಮಾಜದ ಏಳಿಗೆಗಾಗಿ ಪತ್ರಕರ್ತರು ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿ ಕರ್ತವ್ಯ ನಿರತ ಪತ್ರಕರ್ತರ ಮೇಲೆ ಎಲ್ಲೆಡೆ ಹಲ್ಲೆ, ದೌರ್ಜನ್ಯ ನಡೆಯುತ್ತಿವೆ. ಬೆಂಗಳೂರಿನಲ್ಲಿ ನಡೆದ ಹಲ್ಲೆಯೂ ತೀವ್ರ ನೋವಿನ ಸಂಗತಿ. ಪತ್ರಕರ್ತರ ಮೇಲೆ ಹಲ್ಲೆ ಮಾಡಿದ […]

ಪತ್ರಕರ್ತ ನಾಗೇಶ್ ಸಾವಿಗೆ ಒಂದು ವರ್ಷ, ನೆನಪಿನಲ್ಲಿ ಸದಾ ಉಳಿದಿರುವೆ

Wednesday, July 22nd, 2020
nageshpadu

ಮಂಗಳೂರು : ಸದಾ ಉತ್ಸಾಹದಿಂದ ನಮಗೆ ಪ್ರೇರಣೆಯಾದ ಆತ ನಮ್ಮನ್ನು ಇನ್ನು ಬಿಟ್ಟುಹೋಗಿಲ್ಲ. ನಮ್ಮಿಂದ ದೂರ ಹೋದರು ನೆನಪು ಮಾತ್ರ ಇದೆ. ಈಗಲೂ ಆತನ ಮಾತುಗಳು ತಮ್ಮ ಕಿವಿಗಳಲ್ಲಿ ಸದ್ದು ಮಾಡುತ್ತಿದೆ. ನಮಗಿಂತ ಚಿಕ್ಕವನಾದರೂ ಸದಾ ಮಾರ್ಗದರ್ಶ ಮಾಡುತ್ತಿದ್ದ, ಕೊಂಚ ಎಡವಿದರು ಎಚ್ಚರಿಸುತ್ತಿದ್ದ,  ಜೀವ ದೇಹವನ್ನು ಅಗಲಿ ಪ್ರಕೃತಿಯಲ್ಲಿ ಲೀನವಾದರೂ ನೀನು ಸದಾ ನಮ್ಮ ಜೊತೆಗಿರುವೆ. ಭಗವಂತನು ನಿನ್ನ ಆತ್ಮಕ್ಕೆ ಶಾಂತಿ ನೀಡಲಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆ

Sunday, July 12th, 2020
journalist

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಇಬ್ಬರು ಪತ್ರಕರ್ತರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಖಾಸಗಿ ಚಾನಲ್ಗಳ ಕ್ಯಾಮೆರಾಮೆನ್ಗಳಾಗಿರುವ ಇಬ್ಬರಿಗೆ ಮೊನ್ನೆ ತಲೆನೋವು ಜ್ವರದ ಲಕ್ಷಣ ಕಂಡು ಬಂದಿದ್ದು, ಈ ಹಿನ್ನೆಲೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ವರದಿ ಬಂದಿದ್ದು, ಇವರಲ್ಲಿ ಸೋಂಕು ಇರುವುದು ದೃಢಗೊಂಡಿದೆ. ಇದೀಗ ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರ ಆರೋಗ್ಯ ಪರಿಸ್ಥಿತಿಯೂ ಉತ್ತಮವಾಗಿದೆ. ಪತ್ರಕರ್ತರು ಗುರುಪುರ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ ನಂತರ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ ಎನ್ನಲಾಗಿದೆ. ಕೊರೊನಾ ಪ್ರಕರಣಗಳು ದ.ಕ.ಜಿಲ್ಲೆಯಲ್ಲಿ‌ ಕಾಣಿಸಿಕೊಳ್ಳುತ್ತಿದ್ದ […]