ಪತ್ರಿಕಾಗೋಷ್ಠಿ ನಡೆಸಿ ಸಿ.ಬಿ.ಐ. ತನಿಖೆಯ ದಾರಿ ತಪ್ಪಿಸುತ್ತಿರುವ ಮಹೇಶ ಶೆಟ್ಟಿ ತಿಮರೋಡಿ : ಧರ್ಮಸ್ಥಳ

Thursday, July 24th, 2014
Sowjanya Murder

ಧರ್ಮಸ್ಥಳ: ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಉಜಿರೆಯ ಮಹೇಶ ಶೆಟ್ಟಿ ತಿಮರೋಡಿಯವರು ಕಳೆದ ಒಂದು ವರ್ಷದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಇಲ್ಲಿಯ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುಟುಂಬದ ವಿರುದ್ಧ ನಿರಂತರವಾಗಿ ಮಾಡುತ್ತಿದ್ದ ಸುಳ್ಳು ಆರೋಪಗಳನ್ನು ಮತ್ತೊಮ್ಮೆ ಪುನರುಚ್ಚರಿಸುತ್ತಾ ಸಾರ್ವಜನಿಕರನ್ನು ಹಾಗೂ ಶ್ರೀ ಕ್ಷೇತ್ರದ ಭಕ್ತಾದಿಗಳನ್ನು ದಾರಿ ತಪ್ಪಿಸುವ ಕಠೋರ ಪ್ರಯತ್ನವಷ್ಟೆ ಆಗಿದೆ. ಉಜಿರೆಯ ಕಾಲೇಜು ವಿದ್ಯಾರ್ಥಿನಿಯ ಹತ್ಯೆಯ ಕುರಿತು ರಾಷ್ಟ್ರದ ಅತ್ಯುನ್ನತ ತನಿಖಾ ಸಂಸ್ಥೆಯಾದ ಸಿ.ಬಿ.ಐ. ಕಳೆದ 4 ತಿಂಗಳುಗಳಿಂದ ನಿಷ್ಪಕ್ಷಪಾತ ಹಾಗೂ […]

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಪ್ರಶ್ನೆ : ಪೂಜಾರಿ

Tuesday, November 19th, 2013
Janardhan-poojary

ಮಂಗಳೂರು : ಭಾನುವಾರ ಬೆಂಗಳೂರಿನಲ್ಲಿ ನಡೆದ ಮೋದಿ ಭಾಷಣ ಕುರಿತ್ತಂತೆ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ತಾ.18 ರಂದು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂಜಾರಿ, ಮೋದಿಯವರೇ ನಿಮಗೆ ಮದುವೆ ಯಾಗಿದೆಯಾ? ನಿಮ್ಮ ಹೆಂಡತಿಯ ಹೆಸರೇನು? ಅವರು ನಿಮ್ಮೊಂದಿಗೆ ಇದ್ದಾರಾ? ಅವರೀಗ ಎಲ್ಲಿದ್ದಾರೆ? ಹೀಗೆ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದರು. ತಾಕತ್ತಿದ್ದರೆ ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದು ನರೇಂದ್ರ ಮೋದಿಗೆ ಬಹಿರಂಗ ಸವಾಲು ಹಾಕಿದರು. ಮೋದಿ […]

ಅಂಗನವಾಡಿ ಮಕ್ಕಳಿಗೆ ಬಿಸ್ಕೆಟ್ ಭಾಗ್ಯ ಯೋಜನೆ:ಖಾದರ್‌

Thursday, November 7th, 2013
ayush-pushty

ಮಂಗಳೂರು : ಅನ್ನಭಾಗ್ಯ, ಶಾದಿಭಾಗ್ಯ ಮುಂತಾದ ಯೋಜನೆ ಜಾರಿಗೊಳಿಸಿರುವ ರಾಜ್ಯ ಸರ್ಕಾರ ಅಂಗನವಾಡಿ ಮಕ್ಕಳಿಗಾಗಿ ಬಿಸ್ಕೆಟ್ ಭಾಗ್ಯ ಯೋಜನೆ ಜಾರಿಗೆ ತರಲು ಮುಂದಾಗಿದೆ. ‘ಆಯುಷ್‌ ಪುಷ್ಟಿ’ ಎಂಬ ಬಿಸ್ಕತ್ತು ತಯಾರಿಸಿ ಅಂಗನವಾಡಿ ಮಕ್ಕಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬುಧವಾರ ಪತ್ರಿಕಾಗೋಷ್ಠಿ  ಆರೋಗ್ಯ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್, ಆಯುರ್ವೇದಿಕ್‌ ಗಿಡಮೂಲಿಕೆಗಳಿಂದ ತಯಾರಿಸಿದ ಆಯುಷ್‌ ಪುಷ್ಟಿ ಬಿಸ್ಕತ್ ಗಳನ್ನು ಅಂಗನವಾಡಿ ಮಕ್ಕಳಿಗೆ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪೌಷ್ಟಿಕಾಂಶ ಕೊರತೆ […]

ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಸ್ವದಖತುಲ್ಲಾ ಫೈಝಿ

Tuesday, October 22nd, 2013
muslim

ಮಂಗಳೂರು : ಇತ್ತೀಚೆಗೆ ಉಳ್ಳಾಲದ ಮೇಲಂಗಡಿ ಮುಹ್ಯುದ್ದೀನ್ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ ಧಾಂದಲೆ ನಡೆಸಿದ ಘಟನೆಯನ್ನು ಎಸ್ಕೆಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತಿರುವುದಾಗಿ ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಸ್ವದಖತುಲ್ಲಾ ಫೈಝಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾರ್ಥನೆ ಮಾಡುತ್ತಿದ್ದವರನ್ನು ಇರಿದು, ಕಲ್ಲು ತೂರಾಟ ನಡೆಸಿದ ತಪ್ಪಿತಸ್ಥರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸುವಂತೆ ಒತ್ತಾಯಿಸಿದರು. ಲೋಕಸಭಾ ಚುನಾ ವಣೆ ಸಮೀಪಿಸುತ್ತಿದ್ದಂತೆ ಕೆಲವು ಶಕ್ತಿಗಳಿಂದ ಸಮಾಜ ಒಡೆಯುವ, ಕೋಮು ಭಾವನೆ ಕೆರಳಿಸುವ ಘಟನೆ ಗಳು ನಡೆಯುತ್ತಿದೆ. ಸರಕಾರ ಈ […]

ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ : ಶ್ರೀರಾಮ ಸೇನೆ

Saturday, October 19th, 2013
shri-ram-sena

ಮಂಗಳೂರು: ಸೌಜನ್ಯ ಹತ್ಯೆ ಪ್ರಕರಣವಾಗಿ ಧರ್ಮಸ್ಥಳ ಕ್ಷೇತ್ರ ಮತ್ತು ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅವಹೇಳನಕಾರಿ ಮಾತುಗಳು ಕೇಳಿಬರುತ್ತಿದೆ. ಇದನ್ನು ಶ್ರೀರಾಮಸೇನೆ ಸಹಿಸುವುದಿಲ್ಲ, ಅದಕ್ಕಾಗಿ ಉಗ್ರ ಹೋರಾಟ ಮಾಡಲು ಸಿದ್ಧರಿದ್ದೇವೆ ಎಂದು ಶ್ರೀರಾಮ ಸೇನೆ ರಾಜ್ಯ ಉಪಾ ಧ್ಯಕ್ಷ ಕುಮಾರ್ ಮಾಲೆಮಾರ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಕುಮಾರ್ ಮಾಲೆಮಾರ್ ಅವರು, ಸೌಜನ್ಯ ಸಾವಿನ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಧ್ವನಿ ಎತ್ತಿದ್ದಾರೆ. ಆದರೆ ಇದನ್ನು ಖಂಡಿಸುವವರು ತುಂಬಾ […]

ಹಾಸನ-ಬಿಸಿರೋಡ್ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ

Saturday, September 21st, 2013
press-meet

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಸಂತ್ರಸ್ತರ ಹೋರಾಟ ಸಮಿತಿ ಸಂಘಟನಾ ಕಾರ್ಯದರ್ಶಿ ಶಿವಶಂಕರ್ ಭಟ್ ಅಗಲೀಕರಣಕ್ಕೆ ಕಲ್ಲಡ್ಕ ಪೇಟೆಯನ್ನೇ ಬಲಿಕೊಡುವ ಹುನ್ನಾರ ನಡೆಯುತ್ತಿದೆ. ಇದರಿಂಧಾಗಿ 30 ಅಂಗಡಿ ಮುಂಗಟ್ಟುಗಳು ಸರಿಸುಮಾರು 200 ಮನೆಗಳು ನಾಶವಾಗುವ ಭೀತಿಯಲ್ಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ-ಬಿ.ಸಿ.ರೋಡು ಚತುಷ್ಪಥ ರಸ್ತೆ ನಿರ್ಮಾಣದ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನಾಧಿಕಾರಿಯವರ ಆದೇಶದಂತೆ ಕಲ್ಲಡ್ಕ ಪೇಟೆಯ ಇಕ್ಕೆಲಗಳಲ್ಲಿ 22.5 ಮೀಟರ್ ಸ್ವಾದೀನಪಡಿಸುವಂತೆ ಈಗಾ ಗಲೇ ಗುರುತು ಹಾಕಲಾಗಿದೆ. ಇದರಂತೆ ನಡೆದರೆ ಹೆದ್ದಾರಿ ಅಕ್ಕಪಕ್ಕದಲ್ಲಿರುವ […]