ಒಕ್ಕಲಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಂ ಕೃಷ್ಣಪ್ಪ ಅವರನ್ನ ಅಭಿನಂದಿಸಿದ ಆರ್ ಅಶೋಕ
Monday, July 19th, 2021ಬೆಂಗಳೂರು : ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ನೂತನವಾಗಿ ನೇಮಕಗೊಂಡ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂಕೃಷ್ಣಪ್ಪ ಅವರನ್ನು ಕಂದಾಯ ಸಚಿವ ಆರ್ ಅಶೋಕ ಅಭಿನಂದಿಸಿದರು. ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರನ್ನ ಭವ್ಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ಅಶೋಕ,”ಒಕ್ಕಲಿಗ ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆಂದೆ ಈಗಗಾಲೇ ಬಜೆಟ್ ನಲ್ಲಿ ರೂ.500 ಕೋಟಿ ಮೀಸಲಿರಿಸಲಾಗಿದೆ. ಈ ನಿಗಮದ ಮೊದಲ ಅಧ್ಯಕ್ಷರಾಗಿ ಕೃಷ್ಣಪ್ಪ ಅವರು ಆಯ್ಕೆಯಾಗಿರುವುದು ಸುಯೋಗ ಎಂದೇ ಭಾವಿಸುತ್ತೇನೆ” ಎಂದು ಹೇಳಿದರು. ಹಾಗೆಯೇ […]