ಪದ್ಮಶ್ರೀ ಪುರಸ್ಕೃತ ಡಾ. ಸೂಲಗಿತ್ತಿ ನರಸಮ್ಮ ನಿಧನ

Tuesday, December 25th, 2018
sulagitti-narasamma

ಬೆಂಗಳೂರು: ಉಸಿರಾಟದ ತೊಂದರೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಡಾ. ಸೂಲಗಿತ್ತಿ ನರಸಮ್ಮ ನಿಧನರಾಗಿದ್ದಾರೆ. ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 98 ವರ್ಷದ ನರಸಮ್ಮ, ಇಂದು ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇಂದು ವೆಂಟಿಲೇಟರ್ನಲ್ಲಿ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಸಾರ್ವಜನಿಕರಿಗೆ ಅಂತಿಮ ದರ್ಶನ ಅವಕಾಶ ಕಲ್ಪಿಸಲು ನಿರ್ಧಾರ ಮಾಡಲಾಗಿದ್ದು, ಸಿದ್ಧತೆ ನಡೆಯುತ್ತಿದೆ.