ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಪದ್ಮಶ್ರೀ ಪ್ರಶಸ್ತಿ – ಅರ್ಜಿ ಆಹ್ವಾನ

Tuesday, June 23rd, 2020
Padmasree

ಮಂಗಳೂರು : ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ, 2021ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ‘ಪದ್ಮ ವಿಭೂಷಣ’, ‘ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ದಿನದ ಹಿಂದಿನ ದಿನಾಂಕದಂದು ಕೇಂದ್ರ ಸರಕಾರದಿಂದ ಪ್ರಕಟಿಸಲಾಗುತ್ತದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೊಂದಿರಬೇಕು. ಅಲ್ಲದೆ ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನದಲ್ಲಿಟ್ಟುಕೊಂಡು ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅರ್ಹ ಅರ್ಜಿದಾರರು ನಿಗದಿತ ನಮೂನೆಯನ್ನು ಕಚೇರಿಯಿಂದ ಪಡೆದು ವೈಯಕ್ತಿಕ […]

ಗ್ರಾಮೀಣ ಜನರ ಬಾಳಿಗೆ ಬೆಳಕಾದ ಗಿರೀಶ್ ಭಾರದ್ವಾಜ್ ಗೆ ಪದ್ಮಶ್ರೀ ಪ್ರಶಸ್ತಿ

Thursday, January 26th, 2017
Bharadwaj

ಮಂಗಳೂರು: ಗ್ರಾಮೀಣ ಜನರ ಬಾಳಿಗೆ ಬೆಳಕಾದವರು ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್. ಮಳೆಗಾಲ ಹತ್ತಿರ ಬರುತ್ತಿದ್ದಂತೆ ನದಿಗಳನ್ನು ಹಾದುಹೋಗಲು ಹರಸಾಹಸ ಪಡುವವರಿಗೆ ಸೇತುವೆಗಳ ಮೂಲಕ ಅವರ ಮಾರ್ಗಗಳನ್ನು ಸುಗಮಗೊಳಿಸಿದವರು. ಇವರ ಈ ವಿಶಿಷ್ಟ ಸೇವೆಗೆ ಪದ್ಮಶ್ರೀ ಅರಸಿಬಂದಿದೆ. ಕಳೆದ ಮೂರು ದಶಕಗಳಿಂದ ದೇಶದ ವಿವಿಧೆಡೆ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ವಿಶ್ವವಿಖ್ಯಾತಿ ಪಡೆದ ಗಿರೀಶ್ ಭಾರದ್ವಾಜ್ ಮೂಲತ: ಸುಳ್ಯದ ಅರಂಬೂರಿನವರು. ಬಿ.ಇ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಗಿರೀಶ್ ಅವರು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಕಾವೇರಿ […]

ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶ

Thursday, October 6th, 2011
Matturu

ಬೆಂಗಳೂರು : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವಿದ್ವಾನ್ ಡಾ. ಮತ್ತೂರು ಕೃಷ್ಣಮೂರ್ತಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಮತ್ತೂರ ಗ್ರಾಮದಲ್ಲಿ 1929 ಆಗಸ್ಟ್ 8ರಂದು ಜನಿಸಿದ್ದ ಕೃಷ್ಣಮೂರ್ತಿ ಅವರ ಕುಮಾರವ್ಯಾಸ ಭಾರತ ವ್ಯಾಖ್ಯಾನಕ್ಕೆ 2009ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಕುಮಾರ ಪರ್ವ, ದ್ರೌಪದಿ ಸ್ವಯಂವರ, ಮಹಾಭಾರ ಉದ್ಯೋಗ ಪರ್ವ ಸೇರಿದಂತೆ ಭಾರತೀಯ ಹಬ್ಬಗಳ ಕುರಿತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆ ಮತ್ತೂರಿನಲ್ಲಿ ರಾಮಕೃಷ್ಣಯ್ಯ ಮತ್ತು […]