ಡ್ರಗ್ ಆರೋಪಿಗಳನ್ನು ಪರೇಡ್ ನಡೆಸಿ ಎಚ್ಚರಿಕೆ ನೀಡಿದ ಮಂಗಳೂರು ಪೊಲೀಸ್ ಕಮಿಷನರ್
Monday, September 7th, 2020ಮಂಗಳೂರು : ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಮತ್ತು ವ್ಯಸನ ಪ್ರಕರಣಗಳಲ್ಲಿ ಶಾಮೀಲಾದ ಆರೋಪಿಗಳ ಪರೇಡ್ ನಡೆಸಲಾಯಿತು. ಮಂಗಳೂರು ಮತ್ತು ಕಾಸರಗೋಡು ಮೂಲದ ನೂರಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಚಾರಣೆ ನಡೆಸಿದರು. ಡ್ರಗ್ಸ್ ದಂಧೆಯನ್ನು ಮತ್ತೆ ಮುಂದುವರಿಸಿದರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಹಾಗೂ ಗಡೀಪಾರು ಮಾಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. […]