ನಾಲ್ಕನೇ ದಿನವೂ ಪತ್ತೆಯಾಗದ ಓರ್ವ ಮೀನುಗಾರನ ಮೃತದೇಹ

Friday, December 4th, 2020
Boat Tragedy

ಮಂಗಳೂರು: ಪರ್ಸಿನ್ ಬೋಟ್ ದುರಂತದಲ್ಲಿ ಸಾವಿಗೀಡಾದ ಆರು ಜನರ ಪೈಕಿ ಇನ್ನೋರ್ವನ  ಓರ್ವನ ಮೃತದೇಹ ಪತ್ತೆಗೆ ನಾಲ್ಕನೇ ದಿನ ಕೂಡಾ ಹುಡುಕಾಟ ಮುಂದುವರೆದಿದೆ. ಶ್ರೀರಕ್ಷಾ ಎಂಬ ಬೋಟ್ ಮೀನುಗಳನ್ನು ತುಂಬಿಸಿಕೊಂಡು ವಾಪಸ್ ಬರುವ ವೇಳೆ ಇತ್ತೀಚೆಗೆ ಅಳಿವೆ ಬಾಗಿಲಿನಲ್ಲಿ ದುರಂತಕ್ಕೀಡಾಗಿತ್ತು. ಪರಿಣಾಮ, ಆರು ಮಂದಿ ಮೀನುಗಾರರು ಮೃತಪಟ್ಟಿದ್ದರು. ಈ ಪೈಕಿ ಐವರ ಮೃತದೇಹ ಪತ್ತೆಯಾಗಿತ್ತು. ಅನ್ಸಾರ್ ಮೃತದೇಹ ಸಿಕ್ಕಿತಾದರೂ ಸಮುದ್ರದಾಳದಿಂದ ಮೇಲಕ್ಕೆ ತರುವಾಗ ಮುಳುಗು ತಜ್ಞರ ಕೈಜಾರಿ ಮತ್ತೆ ಸಮುದ್ರದಾಳ ಸೇರಿತ್ತು. ಇದಾಗಿ ಎರಡು ದಿನವಾದರೂ ಮೃತದೇಹ ಸಿಕ್ಕಿರಲಿಲ್ಲ. […]

ಪರ್ಸಿನ್ ಬೋಟ್ ದುರಂತ – ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ

Thursday, December 3rd, 2020
boat-tragedy

ಮಂಗಳೂರು : ಅರಬ್ಬೀ ಸಮುದ್ರದಲ್ಲಿ ಸಂಭವಿಸಿದ ಪರ್ಸಿನ್ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 6 ಲಕ್ಷ ರೂ. ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಹಸ್ತಾಂತರಿಸಿದರು. ಬಳಿಕ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿ, ದೋಣಿ ದುರಂತದಲ್ಲಿ ಮೃತಪಟ್ಟವರಿಗೆ ಇಂದು ಪರಿಹಾರ ಮೊತ್ತದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಲಾಗಿದೆ. ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ, ಕರಾವಳಿ ಕಾವಲುಪಡೆಯನ್ನು ಬಲಪಡಿಸಬೇಕೆಂದು ಗೃಹ ಸಚಿವರಿಗೆ ಮನವಿ […]

ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್‌ ಮುಳುಗಡೆ, ಆರು ಮಂದಿ ನಾಪತ್ತೆ

Tuesday, December 1st, 2020
fishing Boat

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟ್‌ವೊಂದು ಕಡಲಲ್ಲಿ ಮುಳುಗಡೆಯಾಗಿದ್ದು, ಆರು ಮಂದಿ ನಾಪತ್ತೆಯಾದ ಘಟನೆ ಉಳ್ಳಾಲದ ಪಶ್ಚಿಮ ಭಾಗದಿಂದ ಕೆಲವೇ  ನಾಟಿಕಲ್‌ ಮೈಲಿ ದೂರದಲ್ಲಿ ನಡೆದಿದೆ. ಬೋಳಾರದ ಪ್ರಶಾಂತ ಎಂಬವರ ಮಾಲಕತ್ವದ “ಶ್ರೀರಕ್ಷಾ” ಹೆಸರಿನ ಬೋಟು ಸೋಮವಾರ ನಸುಕಿನಜಾವ ಮೀನುಗಾರಿಕೆಗೆ ತೆರಳಿತ್ತು.‌ ಬೋಟ್‌ನಲ್ಲಿ 25 ಮಂದಿ ಮೀನುಗಾರರು ತೆರಳಿದ್ದರು. ಕಡಲಲ್ಲಿ‌ ಭಾರೀ ಪ್ರಮಾಣದ ಮೀನು ಸಿಕ್ಕಿದ್ದು, ಸಂಜೆ 6:30ರ ಸುಮಾರಿಗೆ ಬಲೆಯನ್ನು ಮೇಲೆ‌‌ ಎಳೆಯುವಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೋಟ್ ನಲ್ಲಿ ಉಳ್ಳಾಲ, ಮಂಗಳೂರು […]