ಅಡ್ಡೂರು ಸೇತುವೆ ಘನ ವಾಹನ ಸಂಚಾರ ನಿಷೇಧ – ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ

Friday, August 16th, 2024
adooru-bridge

ಬಂಟ್ವಾಳ : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಂಗಳೂರು ಲೋಕೋಪಯೋಗಿ ಇಲಾಖೆಯಡಿಯಲ್ಲಿ ಬರುವ ಅಡ್ಡೂರು ಪಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ತನ್ನ ಸಾಮಾರ್ಥ್ಯವನ್ನು ಕಳೆದುಕೊಂಡ ಕಾರಣ ಘನವಾಹನ ಸಂಚಾರ ನಿಷೇಧಿಸಿ ದ..ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅದೇಶ ನೀಡಿದ್ದರು. ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಅಡ್ಡೂರ ಸೇತುವೆಯಲ್ಲಿ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಆ. ೧೬ರಂದು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ […]

ಮಂಗಳೂರು ವಿಮಾನ ನಿಲ್ದಾಣ ಸಂಪರ್ಕಿಸುವ ಸೇತುವೆ ಕುಸಿತ, ವಾಹನ ಸಂಚಾರ ಬಂದ್

Tuesday, June 15th, 2021
palguni-bridge

ಮಂಗಳೂರು : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು, ಕಿನ್ನಿಗೋಳಿಗೆ  ಸಂಪರ್ಕ ಕಲ್ಪಿಸುವ ಪಲ್ಗುಣಿ ನದಿ ಸೇತುವೆ ಕುಸಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಸೇತುವೆಯ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆಗೆ ಹಾನಿಯಾಗಿದ್ದು, ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸೇತುವೆ ಮಧ್ಯರಾತ್ರಿ 3 ಗಂಟೆಗೆ ಕುಸಿದಿದೆ. ಸೇತುವೆ ಸದ್ಯ ರಸ್ತೆ ಸಂಚಾರಕ್ಕೆ ಸೂಕ್ತವಲ್ಲದ ಕಾರಣ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣಕ್ಕೆ ಉಡುಪಿಯಿಂದ ಬರುವವರು ಮುಲ್ಕಿ, ಕಿನ್ನಿಗೋಳಿ, ಕಟೀಲು, ಬಜ್ಪೆ ಮೂಲಕ ಬರಬಹುದು. ಕಾಸರಗೋಡು, […]

39.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಗುರುಪುರ ಸೇತುವೆ ಉದ್ಘಾಟನೆ

Friday, June 12th, 2020
gurupura bridge

ಮಂಗಳೂರು:  ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಜೂ. 12 ರ ಶುಕ್ರವಾರ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಮಂಗಳೂರು ಉತ್ತರ ಶಾಸಕ ಡಾ.ಭಾರತ್ ವೈ ಶೆಟ್ಟಿ  ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ  “175 ಮೀಟರ್ ಗುರುಪುರ ಸೇತುವೆಯನ್ನು ಪೂರ್ಣಗೊಳಿಸಲು ಟೆಂಡರ್ ಪ್ರಕಾರ ಎರಡು ವರ್ಷಗಳ ಗಡುವು ನೀಡಲಾಗಿದ್ದರೂ 16 […]

ಪಲ್ಗುಣಿ ನದಿ ಮಾಲಿನ್ಯದ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನಾ ಜಾಥಾ

Wednesday, January 24th, 2018
palguni

ಮಂಗಳೂರು:`ಜೀವನದಿ ಪಲ್ಗುಣಿ ಉಳಿಸಿ’ ಘೋಷಣೆಯೊಂದಿಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಜಾಥಾ ನಡೆಯಿತು. ಜಾಥಾದ ಕೊನೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಲ್ಗುಣಿ ನದಿಯ ನೀರಿನ ಮೂಲವಾಗಿರುವ ತೋಕೂರು ಹಳ್ಳಕ್ಕೆ ಕೈಗಾರಿಕಾ ತ್ಯಾಜ್ಯ ಹರಿಸುತ್ತಿರುವ ಕೈಗಾರಿಕೆಗಳ ವಿರುದ್ಧ ಕ್ರಮಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದರು. ತೋಕೂರು ಹಳ್ಳದ ದಡದಲ್ಲಿರುವ ರುಚಿಗೋಲ್ಡ್, ಅದಾನಿ ವಿಲ್ಮ, ಅನುಗ್ರಹ, ಯು.ಬಿ.ಬಿಯರ್ ಮುಂತಾದ ಕೈಗಾರಿಕಾ ಘಟಕಗಳು ನಿಯಮ ಮೀರಿ ನದಿಯ ನೀರಿನ ಮೂಲಗಳಿಗೆ ತಮ್ಮ ವಿಷಯುಕ್ತ […]