ಪಡೀಲ್ ಅಂಡರ್ ಪಾಸ್‌ ನ ಗೋಡೆಗೆ ಬೈಕ್ ಢಿಕ್ಕಿ ಹೊಡೆದು ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Thursday, September 14th, 2023
Bike-Accident

ಮಂಗಳೂರು : ನಗರದ ಪಡೀಲ್ ಅಂಡರ್ ಪಾಸ್‌ ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಗಾಡ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ನಲ್ಲಿ ಮೂರು ಮಂದಿ ಸವಾರಿ ಮಾಡಿದ್ದು, ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಅಂಡರ್‌ಪಾಸ್‌ನ ಗೋಡೆಗೆ ಬೈಕ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.