ವಿವಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Saturday, June 5th, 2021
vishwar-parisara-dina

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಶನಿವಾರ ʼವಿಶ್ವ ಪರಿಸರ ದಿನಾಚರಣೆʼ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಭಾಗವಾಗಿ ಪಿಲಿಕುಳ ಅಭಿವೃದ್ಧಿ ಕೇಂದ್ರದ ವೈಜ್ಞಾನಿಕ ಅಧಿಕಾರಿ ರಾಮಕೃಷ್ಣ ಮರಾಠೆ ವಿದ್ಯಾರ್ಥಿಗಳಿಗೆ ಪಶ್ಚಿಮ ಘಟ್ಟಗಳ ಜೀವವೈವಿಧ್ಯತೆ ಮತ್ತು ಅದರ ಪ್ರಾಮುಖ್ಯತೆಯನ್ನು ಕುರಿತು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ರೈ, ನಮ್ಮ ವಾತಾವರಣವನ್ನು ಶುದ್ಧವಾಗಿ ಮತ್ತು ಹಸಿರಾಗಿಡುವುದು ನಮ್ಮ ಕರ್ತವ್ಯ, ಎಂದರು. ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶೋಭಾ ಮಾತನಾಡಿ, ʼವಿಶ್ವ ಪರಿಸರ ದಿನಾಚರಣೆʼಯ ಹೆಸರಲ್ಲಿ […]

ಪಶ್ಚಿಮ ಘಟ್ಟ ದೃಶ್ಯ ವೈಭವಕ್ಕೆ ಸಾಕ್ಷಿಯಾಗಿದೆ ಮಡಿಕೇರಿಯ ನೆಹರೂ ಮಂಟಪ

Friday, February 7th, 2020
neharu-mantapa

ಮಡಿಕೇರಿ : ಕೊಡಗು ಎಂದರೆ ಅದು ಕರ್ನಾಟಕದ ಕಾಶ್ಮೀರ ಎಂದೇ ಪ್ರಸಿದ್ಧಿ ಪಡೆದಿದೆ. ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯೂ ಸಹ ಇದೇ ಪುಣ್ಯ ಭೂಮಿಯಲ್ಲಿದೆ. ಇದರೊಂದಿಗೆ ಹಲವಾರು ಪ್ರವಾಸಿ ತಾಣಗಳೂ ಸಹ ಜಿಲ್ಲೆಯಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿವೆ. ತನ್ನ ಹಸಿರ ಮೈಸಿರಿಯಿಂದಲೇ ಕೊಡಗು ರಾಜ್ಯದಲ್ಲೇ ವಿಶೇಷವಾದ ಸ್ಥಾನ ಹೊಂದಿದೆ. ಅಷ್ಟೇ ಅಲ್ಲದೆ ಐತಿಹಾಸಿಕ ಕಟ್ಟಡಗಳು ಮತ್ತು ಭಾರತೀಯ ಸೈನ್ಯಕ್ಕೆ ಕೊಡುಗೆ ಕೊಟ್ಟಂತಹ ಪ್ರಮುಖ ಸೇನ ನಾಯಕರ ನೆಲೆಬೀಡು ಎಂಬ ವಿಶ್ವಖ್ಯಾತಿಯನ್ನೂ ಸಹ ನಮ್ಮ […]

ಪಶ್ಚಿಮ ಘಟ್ಟದ ಕೃಷಿಗೆ ಅಂತರರಾಷ್ಟ್ರೀಯ ಮಾನ್ಯತೆ : ಅರಣ್ಯ ಕಾಲೇಜ್ ನ ಡೀನ್ ಡಾ.ಸಿ.ಜಿ.ಕುಶಾಲಪ್ಪ ವಿಶ್ವಾಸ

Thursday, January 23rd, 2020
krishi

ಮಡಿಕೇರಿ : ಪಶ್ಚಿಮಘಟ್ಟ ಪ್ರದೇಶದ ಕೃಷಿಗೆ ಇದೀಗ ಅಂತರರಾಷ್ಟ್ರೀಯ ಮಾನ್ಯತೆ ದೊರೆತ್ತಿದ್ದು, ಕೊಡಗಿನ ಕಾಫಿ, ಕಾಳುಮೆಣಸು, ಏಲಕ್ಕಿ, ಜೇನು, ಪುಷ್ಪ ಕೃಷಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭವಿಷ್ಯದಲ್ಲಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಡೀನ್ ಡಾ.ಸಿ.ಜಿ.ಕುಶಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಕೆವಿಕೆ, ಮ್ಯಾನೇಜ್, ಹೈದರಾಬಾದ್ ಸಮೇತಿ(ದಕ್ಷಿಣ), ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯ ಮತ್ತು ಕೊಡಗು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ […]

ಮಳೆಹಾನಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ : ಕಾವಲು ಪಡೆಯಂತಿರುವ ಪಶ್ಚಿಮ ಘಟ್ಟ ನಾಶವಾದರೆ ವಿನಾಶ; ನ್ಯಾಯಾಧೀಶೆ ನೂರುನ್ನಿಸಾ ಆತಂಕ

Tuesday, November 5th, 2019
madikeri

ಮಡಿಕೇರಿ : ಮಾನವನ ರಕ್ಷಣೆಗೆ ಕಾವಲು ಪಡೆಯಂತಿರುವ ಪಶ್ಚಿಮಘಟ್ಟ ಪ್ರದೇಶಗಳು ನಾಶವಾದ ಪರಿಣಾಮ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿವೆ ಎಂದು ಅಭಿಪ್ರಾಯಪಟ್ಟಿರುವ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸಾ, ಬೆಟ್ಟಗುಡ್ಡಗಳ ಮೇಲೆ ಕಟ್ಟಡ ನಿರ್ಮಿಸುವ ಸ್ವಯಂಕೃತ ಅಪರಾಧ ನಿಲ್ಲಬೇಕೆಂದು ಹೇಳಿದ್ದಾರೆ. ನಗರದ ತ್ಯಾಗರಾಜ ಕಾಲೋನಿಯ ಕಾರುಣ್ಯ ಮೊಹಲ್ಲಾದಲ್ಲಿ ಜಮಾಅತೇ ಇಸ್ಲಾಮಿ ಹಿಂದ್‌ನ ಸಮಾಜ ಸೇವಾ ವಿಭಾಗವಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಡೆದ ಎಂಟು ಮಳೆಹಾನಿ ಸಂತ್ರಸ್ತ ಕುಟುಂಬಗಳಿಗೆ ಮನೆಗಳನ್ನು ಹಸ್ತಾಂತರಿಸುವ […]

ಮಣ್ಣಿನ ಪದರದ ಶಿಥಿಲತೆ ಪಶ್ಚಿಮ ಘಟ್ಟ ಪ್ರದೇಶ ಕುಸಿಯಲು ಕಾರಣ

Monday, August 12th, 2019
shiradi-ghat

ಮಂಗಳೂರು : ಕಳೆದ ವರ್ಷ ಮಡಿಕೇರಿ, ಶಿರಾಡಿ ಘಾಟಿಯಲ್ಲಿ ಸಾಕಷ್ಟು ಅನಾಹುತವುಂಟು ಮಾಡಿದ್ದ ಭೂಕುಸಿತ ಈ ಬಾರಿ ಬೆಳ್ತಂಗಡಿಯ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಸಂಭವಿಸಿದೆ. ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡ ಈ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತಕ್ಕೆ ಮಣ್ಣಿನ ಪದರದ ಶಿಥಿಲತೆ ಕಾರಣವೇ, ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಅರಣ್ಯ ನಾಶವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೆ ಎಂಬ ಚರ್ಚೆಗೆ ಈಗ ಮತ್ತೆ ಜೀವ ಬಂದಿದೆ. ಇದಕ್ಕೆ ಪೂರಕವಾಗಿ ಘಟಿಸುತ್ತಿರುವ ಅನಾಹುತಗಳಿಗೆ ಅರಣ್ಯ ನಾಶ ಹಾಗೂ ಅಭಿವೃದ್ಧಿ ಯೋಜನೆಗಳ ಪಾತ್ರ […]

ಬೆಳ್ತಂಗಡಿ : 15ಕ್ಕೂ ಹೆಚ್ಚು ಗ್ರಾಮಗಳು ಮತ್ತು ನೂರಾರು ಮನೆಗಳು ಜಲಾವೃತ

Saturday, August 10th, 2019
netravati

ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಹರಿಯುತ್ತಿರುವ ನದಿ ಮತ್ತು ಉಪನದಿಗಳಲ್ಲಿ ಶುಕ್ರವಾರ ನಿರೀಕ್ಷೆ ಮೀರಿದ ಪ್ರವಾಹ ಉಂಟಾಗಿ ತಾಲೂಕಿನ ಸುಮಾರು 15ಕ್ಕೂ ಅಧಿಕ ಗ್ರಾಮಗಳ ನೂರಾರು ಮನೆಗಳು ಜಲಾವೃಗೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಾಲೂಕಿನ ನೇತ್ರಾವತಿ, ಕಪಿಲ, ಮೃತ್ಯುಂಜಯ, ಸೋಮಾವತಿ ನದಿಗಳು, ನೆರಿಯ ಮತ್ತು ಅಣಿಯೂರು ಹೊಳೆಯಲ್ಲಿ ಪ್ರವಾಹದ ನೀರು ಉಕ್ಕಿಹರಿದಿತ್ತು. ಶುಕ್ರವಾರ ಮುಂಜಾನೆಯೇ ಪ್ರವಾಹ ಹರಿದು ಬಂದಿದ್ದು, ಬೆಳಗ್ಗೆಜನರು ಏಳುವ ಹೊತ್ತಿಗೆ ಮನೆಯಂಗಳದಲ್ಲಿ ನೆರೆ ಕಂಡು ಬೆಚ್ಚಿದರು. ಲಾೖಲ, […]

ಕಡಲಬ್ಬರಕ್ಕೆ ಆಳ ಸಮುದ್ರದಲ್ಲೇ ಲಂಗರು ಹಾಕಿದ ಮೀನುಗಾರಿಕಾ ದೋಣಿಗಳು..!

Friday, August 10th, 2018
fisheries

ಮಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ನದಿಗಳು ತುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ನೆರೆಯ ಪರಿಸ್ಥತಿ ಸೃಷ್ಟಿಯಾಗಿದೆ. ಇನ್ನೊಂದೆಡೆ ಕಡಲು ರೌದ್ರವತಾರ ತಾಳಿದೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಗಳು ತಟಕ್ಕೆ ಹಿಂದಿರುಗಲಾಗದೇ ಆಳ ಸಮುದ್ರದಲ್ಲೇ ಲಂಗರುಹಾಕಿವೆ. ಸರಿಸುಮಾರು 800 ಮೀನುಗಾರಿಕಾ ದೋಣಿಗಳು ಮಂಗಳೂರು ಮೀನುಗಾರಿಕಾ ಬಂದರಿನಿಂದ ಅಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದವು. ಆದರೆ ಈ ಪೈಕಿ ಕೆಲವು ಮೀನುಗಾರಿಕಾ […]

ಪಶ್ಚಿಮ ಘಟ್ಟದಲ್ಲಿ ಗುಡ್ಡ ಕುಸಿತ…ರೈಲ್ವೆ ಹಳಿ ಮೇಲೆ ಬಿದ್ದ ಮಣ್ಣು

Friday, June 15th, 2018
colapse

ಮಂಗಳೂರು: ಪಶ್ಚಿಮ ಘಟ್ಟದಲ್ಲಿ‌ ಭಾರಿ ಮಳೆ ಸುರಿಯುತ್ತಿದ್ದು ಗುಡ್ಡವೊಂದು ಕುಸಿದು ರೈಲ್ವೆ ಹಳಿ ಮೇಲೆ ಮಣ್ಣು ಬಿದ್ದಿದೆ. ಸುಬ್ರಹ್ಮಣ್ಯ ಮತ್ತು ಸಿರಿಬಾಗಿಲು ನಡುವೆ ಇರುವ ರೈಲ್ವೆ ಹಳಿಗೆ ಗುಡ್ಡ ಕುಸಿದು ಮಣ್ಣು ಬಿದ್ದಿದ್ದು ರೈಲು ಸಂಚಾರಕ್ಕೆ ತೊಡಕಾಗಿದೆ. ಮಣ್ಣು ತೆರವು ಕಾರ್ಯಚರಣೆ ನಡೆಯುತ್ತಿದ್ದು ಮಂಗಳೂರು -ಬೆಂಗಳೂರು ರೈಲು ಸಂಚಾರಕ್ಕೆ ವಿಳಂಬವಾಗಿದೆ.

ಪಶ್ಚಿಮ ಘಟ್ಟದ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿ: ಅಂತಾರಾಷ್ಟ್ರೀಯ ವಿಚಾರ ಸಂಕಿರಣ

Thursday, December 29th, 2016
prof-byrappa

ಮೂಡುಬಿದಿರೆ: ಮಾನವನ ಅಪರಿಮಿತ ಸ್ವಾರ್ಥ ಹಾಗೂ ನಿರಂತರ ಪ್ರಕೃತಿಯ ಶೋಷಣೆ ನಮ್ಮೆಲ್ಲಾ ತೊಂದರೆಗಳಿಗೆ ಮೂಲ ಕಾರಣ. ಅತಿ ಸೂಕ್ಷ್ಮ ಜೀವ ವೈವಿಧ್ಯ ಪ್ರದೇಶ ಎಂದು ಗುರುತಿಸಿರುವ ಪಶ್ಚಿಮಘಟ್ಟ ಭಾರತದ ಒಟ್ಟು ಭೂ ಭಾಗದ 2.5% ರಷ್ಟಿದೆ. ಆದರೆ ಈ ಸಣ್ಣ ಭೂ ಪ್ರದೆಶವನ್ನೂ ರಕ್ಷಿಸಲು ಸಾಧ್ಯವಾಗದೇ ಇರುವುದು ನಮ್ಮ ವೈಫಲ್ಯ ಎಂದು ಐ.ಐ.ಎಸ್.ಸಿ ಬೆಂಗಳೂರು ಮುಖ್ಯಸ್ಥ ಡಾ. ಟಿ.ವಿ.ರಾಮಚಂದ್ರ ಹೇಳಿದರು. ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಇಂಧನ ಮತ್ತು ತೇವಾಂಶ ಸಂಶೋಧನಾ ಕೇಂದ್ರ (ಎನರ್ಜಿ & ವೆಟ್‍ಲ್ಯಾಂಡ್ ರಿಸರ್ಚ […]

ಎತ್ತಿನಹೊಳೆ ಯೋಜನೆ ಜಾರಿಯಿಂದ ಪಶ್ಚಿಮ ಘಟ್ಟಕ್ಕೆ ಅಪಾರ ಹಾನಿಯಾಗುವ ಸಾಧ್ಯತೆ: ವಿಸ್ತೃತ ಅಧ್ಯಯನ ನಡೆಸಲು ಸೂಚನೆ

Friday, November 18th, 2016
NRSS

ಮಂಗಳೂರು: ಎತ್ತಿನಹೊಳೆ ಯೋಜನೆ ಜಾರಿಯಿಂದ ಪಶ್ಚಿಮ ಘಟ್ಟಕ್ಕೆ ಅಪಾರ ಹಾನಿಯಾಗುವ ಸಾಧ್ಯತೆಯಿದೆ. ಆದ್ದರಿಂದ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ನಿರ್ಧರಿಸಲು ವಿಸ್ತೃತ ಅಧ್ಯಯನ ನಡೆಸಬೇಕೆಂದು ದೆಹಲಿಯ ಹಸಿರು ಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ನ.11ರಂದು ಹಸಿರು ಪೀಠದಲ್ಲಿ ಎತ್ತಿನಹೊಳೆ ಯೋಜನೆ ವಿಚಾರಣೆ ಕುರಿತಂತೆ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿಯ ದೂರಿನ ವಿಚಾರಣೆ ನಡೆಸಿ ಈ ನಿರ್ದೇಶನವನ್ನು ನೀಡಿದೆ ಎಂದು ಸಮಿತಿಯ ಸಂಚಾಲಕ, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ನಿನ್ನೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮಿತಿ […]