ಪತ್ರಿಕೆ ಛಾಯಾಗ್ರಾಹಕನ ಮೇಲೆ ಪತ್ನಿ ಮತ್ತು ಪ್ರಿಯಕರ ಸೇರಿ ಕಾರು ಹತ್ತಿಸಿ ಕೊಲೆಯತ್ನ, ದೂರು ದಾಖಲು

Saturday, January 27th, 2024
ಪತ್ರಿಕೆ ಛಾಯಾಗ್ರಾಹಕನ ಮೇಲೆ ಪತ್ನಿ ಮತ್ತು ಪ್ರಿಯಕರ ಸೇರಿ ಕಾರು ಹತ್ತಿಸಿ ಕೊಲೆಯತ್ನ, ದೂರು ದಾಖಲು

ಬಂಟ್ವಾಳ : ಸರಕಾರೀ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಸಹೋದ್ಯೋಗಿಯ ಜತೆಗೆ ಸೇರಿಕೊಂಡು ಪತಿಯ ಮೇಲೆ ಕಾರು ಹತ್ತಿಸಿ ಕೊಲೆಯತ್ನ ನಡೆಸಿರುವ ಘಟನೆಯು ಬಂಟ್ವಾಳ ಪಾಣೆಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು, ಪತಿ ಕಿಶೋರ್ ಕುಮಾರ್ ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕಿಶೋರ್ ಅವರ ಪತ್ನಿ ಶಿಕ್ಷಕಿ ಶುಭಾ ಮತ್ತು ಶಿಕ್ಷಕ ಶಿವಪ್ರಸಾದ್‌ ಶೆಟ್ಟಿ ಮಂಚಿ ಎಂಬವರ ಮೇಲೆ ದೂರು ದಾಖಲಾಗಿದೆ. ಸರಕಾರೀ ಶಾಲೆಯ ಶಿಕ್ಷಕಿ […]

ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆ ಯಾದ ಮಹಿಳೆ

Saturday, November 20th, 2021
Netravathi

ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿ ನಾಪತ್ತೆ ಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ನದಿಗೆ ಹಾರಿದ ಮಹಿಳೆ ಯಾರು ಎಂಬ ಮಾಹಿತಿ […]

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ ಬ್ಯಾಂಕ್ ಉದ್ಯೋಗಿ ಮೃತ, ಲಾರಿ ನಿಲ್ಲಿಸದೆ ಪರಾರಿ

Wednesday, July 7th, 2021
Ganesh Naik

ಬಂಟ್ವಾಳ : ಲಾರಿ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಪಾಣೆಮಂಗಳೂರಿನಲ್ಲಿ ಬುಧವಾರ ನಡೆದಿದೆ. ಮಂಚಿ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಗಣೇಶ್ ನಾಯ್ಕ್ ಕಂಚಿಲ (54) ಮೃತಪಟ್ಟ ಬೈಕ್ ಸವಾರ. ಗಣೇಶ್ ನಾಯ್ಕ್ ಅವರು ಕರ್ನಾಟಕ ಬ್ಯಾಂಕ್ ಮಂಗಳೂರು ಬ್ರಾಂಚ್ ನಲ್ಲಿ ಉದ್ಯೋಗಿಯಾಗಿದ್ದು, ಇಂದು ಬೆಳಗ್ಗೆ ಬ್ಯಾಂಕ್ ಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಪಾಣೆಮಂಗಳೂರು ಸಮೀಪ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ […]

ಸವಾರನೇ ಇಲ್ಲದೇ ಮಧ್ಯರಾತ್ರಿ ಸುತ್ತು ಹಾಕಿದ ಬೈಕ್, ಭೂತ, ಪಿಶಾಚಿಯ ಕಾಟ ಎಂದು ವೈರಲ್

Thursday, January 28th, 2021
Bike Move

ಬಂಟ್ವಾಳ: ಮಧ್ಯರಾತ್ರಿ 1 ಗಂಟೆ ವೇಳೆ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯವೊಂದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಬೈಕ್ವೊಂದು ಸವಾರನೇ ಇಲ್ಲದೇ ಮಧ್ಯರಾತ್ರಿ ತನ್ನಷ್ಟಕ್ಕೆ ತಾನೇ ಚಲಿಸುತ್ತದೆ. ಬಂಟ್ವಾಳ ಸಮೀಪ ಪಾಣೆಮಂಗಳೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದು ಅದೇ ಪ್ರದೇಶದ್ದೇ ಬೈಕಾ ಎಂಬುದು ಇನ್ನೂ ಖಚಿತವಾಗಿಲ್ಲ. ಕಳೆದ ವರ್ಷ ಡಿಸೆಂಬರ್ 30ರಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿವರಗಳಿವೆ. ಊರಿನ ಹೆಸರು ಬದಲಾಯಿಸಿಕೊಂಡು ಈ ವಿಡಿಯೋ ಹರಿದಾಡುತ್ತಿದ್ದರೂ, ಇದರಲ್ಲಿ ಕಂಡುಬರುವ ದೃಶ್ಯ ಆಶ್ಚರ್ಯ ಹುಟ್ಟಿಸುತ್ತದೆ. ಈ ವಿಡಿಯೋ ಈಗ ಕಳೆದೆರಡು […]

ಪಾಣೆಮಂಗಳೂರು ನೂತನ ಸೇತುವೆ ಬಳಿ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

Monday, July 13th, 2020
Panemangaluru

ಬಂಟ್ವಾಳ : ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಮಹಿಳೆ ಗೋಪಿ ಪೂಜಾರಿ(49) ಎಂಬುವರ ಮೃತದೇಹ ಸೋಮವಾರ ತುಂಬೆ ಸಮೀಪದಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಹಿಳೆ ಪಾಣೆಮಂಗಳೂರು ನೂತನ ಸೇತುವೆ ಬಳಿಯಿಂದ ಶನಿವಾರ ನಾಪತ್ತೆಯಾಗಿರುವ ಬಗ್ಗೆ ಗುಮಾನಿ ಇತ್ತು. ಸ್ಥಳೀಯ ಮುಳುಗು ತಜ್ಞರು, ಅಗ್ನಿಶಾಮಕ ದಳದ ಸಿಬ್ಬಂದಿ ಮಹಿಳೆಗಾಗಿ ಭಾನುವಾರ ನದಿಯಲ್ಲಿ ಹುಡುಕಾಟ ನಡೆಸಿದ್ದರು. ಬಿ.ಸಿ.ರೋಡಿನ ಚಿಕ್ಕಯ್ಯಮಠದಲ್ಲಿರುವ ಅಕ್ಕನ ಮನೆಗೆ ಕೆಲವು ದಿನಗಳ ಹಿಂದೆ ಬಂದಿದ್ದ ಮಹಿಳೆ ಜು. 11ರಂದು ಮುಂಜಾನೆ ನಾಪತ್ತೆಯಾಗಿದ್ದರು. […]

ಹಣದ ವಿಚಾರ : ಅಣ್ಣ ತಮ್ಮಂದಿರ ಜಗಳದಲ್ಲಿ ಓರ್ವನ ಕೊಲೆ

Thursday, December 26th, 2019
bolangady

ಬಂಟ್ವಾಳ : ಹಣದ ವಿಚಾರದಲ್ಲಿ ಅಣ್ಣ ತಮ್ಮಂದಿರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೆಲ್ಕಾರ್ ಸಮೀಪದ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ನಿವಾಸಿ ಮುಯ್ಯ ಯಾನೆ ಲಿಯೋ ಲೋಬೊ( 50) ಎಂಬವರು ಕೊಲೆಯಾದವರು. ಲಿಯೋ ಅವರ ಅಣ್ಣ ಕಿಲ್ಲೆ ಯಾನೆ ಸಿರಿಲ್ ಲೋಬೊ ಕೊಲೆ ಆರೋಪಿ. ಮನೆಯಲ್ಲಿ ನಿತ್ಯವೂ ಕುಡಿದು ಹಣದ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು […]

ಪಾಣೆಮಂಗಳೂರು ಗ್ರಾಮದ ಅಕ್ರಮ ಮನೆಗಳ ತೆರವು

Saturday, September 14th, 2019
pane-mangaluru

ಬಂಟ್ವಾಳ : ಪಾಣೆಮಂಗಳೂರು ಗ್ರಾಮದ ನೇತ್ರಾವತಿ ನದಿ ತೀರದಲ್ಲಿ ಹಲವು ವರ್ಷಗಳಿಂದ ಅಕ್ರಮವಾಗಿ ಕಟ್ಟಲಾಗಿದ್ದ ಸುಣ್ಣದಗೂಡು ಕಟ್ಟಡವನ್ನು ತಾಲೂಕು ಆಡಳಿತ, ಪುರಸಭಾಡಳಿತ ಜಂಟಿ ಕಾರ್ಯಾಚರಣೆ ನಡೆಸಿ ಶನಿವಾರ ತೆರವುಗೊಳಿಸಿದೆ. ಪೊಲೀಸ್ ಬಂದೋಬಸ್ತ್ ನೊಂದಿಗೆ ಮಂಗಳೂರು ಸಹಾಯಕ ಕಮೀಷನರ್ ರವಿಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹಾಗೂ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಮೊದಲಾದ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ಡಿ.ಟಿ.ನಾಗರಾಜ್, ಪಿಎಸ್ಐ ಚಂದ್ರಶೇಖರ್