ನಿಗಧಿತ ಅವಧಿಯಲ್ಲಿ ಪಾಲಿಕೆ ಕಾಮಗಾರಿ ಪೂರೈಸುವಂತೆ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಸೂಚನೆ
Thursday, May 16th, 2013ಮಂಗಳೂರು : ಮಳೆಗಾಲ ಪ್ರಾರಂಭವಾಗುವುದಕ್ಕು ಮುನ್ನ ನಗರದ ಚರಂಡಿಗಳ ಹೂಳೆತ್ತುವಿಕೆ ಕಾಮಗಾರಿಗಳನ್ನು ಮೇ 25 ರೊಳಗೆ ಪೂರ್ಣಗೊಳಿಸಬೇಕೆಂದು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಹಾಗು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ತಿಳಿಸಿದರು. ಅವರು ಬುಧವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾದ ಅಭಿವೃದ್ಧಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಪಾಲಿಕೆ ಮುಖ್ಯ ಅಧೀಕ್ಷಕ ಎಂಜಿನಿಯರ್ ಬಿ.ಎಸ್.ಬಾಲಕೃಷ್ಣ ಮಾತನಾಡಿ, ನೆರೆ ಪೀಡಿತ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, 10 ತಂಡಗಳ ಟಾಸ್ಕ್ಫೋರ್ಸ್ ರಚಿಸಲಾಗಿದೆ. ಇನ್ನುಳಿದಂತೆ ಪಾಲಿಕೆಯಲ್ಲಿ ಈಗಾಗಲೇ 71 ಲಕ್ಷ ರೂಪಾಯಿ […]