ಕೊರೋನಾ ಸೋಂಕು ಭಾನುವಾರ : ದ.ಕ. ಜಿಲ್ಲೆಯಲ್ಲಿ 183- ಸಾವು 1, ಉಡುಪಿ ಜಿಲ್ಲೆ – 130

Sunday, September 5th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.1.70ಕ್ಕೆ ಇಳಿಕೆಯಾಗಿದ್ದು, ಭಾನುವಾರ 183 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ,  ಓರ್ವ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 221 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ 1,11,058 ಸೋಂಕಿತರ ಪೈಕಿ 1,07,357 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್‌ಗೆ ಇಲ್ಲಿಯವರೆಗೆ 1,594 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 2107 ಸಕ್ರಿಯ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿ ಭಾನುವಾರ 130 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1432ಕ್ಕೇರಿದೆ. 70 ಮಂದಿ ಸೋಂಕಿನಿಂದ ಚೇತರಿಸಿಕೊಂಡರೆ, ಭಾನುವಾರ ಯಾರೂ ಸೋಂಕಿನಿಂದ […]

ರಾಜ್ಯದ 16 ಜಿಲ್ಲೆಗಳಲ್ಲಿ ಜೂನ್ 21 ರಿಂದ ಲಾಕ್ ಡೌನ್ ಸಡಿಲಿಕೆ, 13 ಜಿಲ್ಲೆಗಳಲ್ಲಿ ಮದ್ಯಾಹ್ನ 2 ರ ವರೆಗೆ ಸಡಿಲಿಕೆ

Saturday, June 19th, 2021
yedyurappa

ಬೆಂಗಳೂರು : ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವುದರಿಂದ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಇಲ್ಲಿಸೋಮವಾರದಿಂದ ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ […]