ಪಿಂಚಣಿ ಅನುಷ್ಠಾನ ವಿಳಂಬ : ತುರ್ತು ಸ್ಪಂದಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ

Tuesday, September 24th, 2024
shobha-karandlaje

ಮಂಗಳೂರು: ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಕ್ಯಾ. ಚೌಟ ಅವರು, ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದು, ರಾಜ್ಯದಲ್ಲಿ ನಿವೃತ್ತ ಕೆಎಸ್‌ಆರ್‌ಟಿಸಿ ನೌಕರರ ಹೆಚ್ಚುವರಿ ಪಿಂಚಣಿ ಅನುಷ್ಠಾನ ವಿಳಂಬದಿಂದ ಅರ್ಹ ಫಲಾನುಭವಿಗಳು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ […]

ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆಹರೀಶ್ ಆಚಾರ್ಯ ಆಗ್ರಹ

Tuesday, February 20th, 2024
Harish-Acharya

ಮಂಗಳೂರು : ಹಳೆಯ ಪಿಂಚಣಿ ಯೋಜನೆಯ (OPS) ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ […]

ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲ ಎಂದು ನಿರ್ಬಂಧ ಹೇರದೆ ಲಸಿಕೆ ಹಾಕಲು ಜಿಲ್ಲಾಧಿಕಾರಿಗಳಿಗೆ ಸೂಚನೆ

Thursday, September 2nd, 2021
Vaccination

ಬೆಂಗಳೂರು : ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶಿಸಿದ್ದಾರೆ. ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಲು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಮಂಗಳೂರು ನೆಹರೂ ಮೈದಾನಿನಲ್ಲಿ 65ನೇ ಕನ್ನಡ ರಾಜ್ಯೋತ್ಸವ

Sunday, November 1st, 2020
Kannada Rajyotsava

ಮಂಗಳೂರು : ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳೂರು  ನೆಹರೂ ಮೈದಾನದಲ್ಲಿ  65ನೇ ಕನ್ನಡ ರಾಜ್ಯೋತ್ಸವದ  ಧ್ವಜಾರೋಹಣ ನೆರವೇರಿಸಿ ಬಳಿಕ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ  ಅವರ ಪೂರ್ತಿ ಸಂದೇಶ ಇಲ್ಲಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ, ಈ ದಿನ ಆಚರಿಸುತ್ತಿರುವ 65ನೇ ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ, ತಮ್ಮೆಲ್ಲರಿಗೂ ಜಿಲ್ಲಾಡಳಿತದ ಪರವಾಗಿ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡವೇ ಧನ ಧಾನ್ಯ, ಕನ್ನಡವೇ ಮನೆ ಮಾನ್ಯ, ಕನ್ನಡವೇ ಎನಗಾಯ್ತು ಕಣ್ಣು –ಕಿವಿ-ಬಾಯಿ.. ಇದು ಮುತ್ಸದ್ಧಿ ನೇತಾರ, ಸಂವಿಧಾನ […]

ಸಾರಿಗೆ ನೌಕರರಿಗೆ ಇಪ್ಪತ್ತೆರಡು ತಿಂಗಳು ಗತಿಸುತ್ತ ಬಂದರೂ ನಿವೃತ್ತಿ ಮೊತ್ತ ಸಿಕ್ಕಿಲ್ಲ

Sunday, September 27th, 2020
ksrtc

ಧಾರವಾಡ : ನಿವೃತ್ತಿಯಾಗಿ ಇಪ್ಪತ್ತೆರಡು ತಿಂಗಳು ಗತಿಸುತ್ತ ಬಂದರೂ ನಿವೃತ್ತಿ ಮೊತ್ತ ದೊರಕಿರುವುದಿಲ್ಲ. ಈ ಕೂಡಲೇಸರಕಾರ ಮಧ್ಯಸ್ಥಿಕೆ ವಹಿಸಿ ಸರಕಾರದಿಂದ ನಿಧಿ ಬಿಡುಗಡೆ ಗೊಳಿಸಿ, ನಿವೃತ್ತ ಸಾರಿಗೆ ನೌಕರರ ಪ್ರಾಣ ಉಳಿಸಿ, ಸಂಧ್ಯಾಕಾಲದ ಬದುಕಿಗೆಒಳ್ಳೆಯ ವಾತಾವರಣ ಕಲ್ಪಿಸಿಕೊಡಿ ಎಂದು ಕ.ರಾ.ರ.ಸಾ.ನಿಗಮಗಳ ನೌಕರರ ಮೂಲಭೂತ ಹಕ್ಕುಗಳ ವಿಚಾರ ವೇದಿಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಸಲ್ಲಿಸಿದೆ. ಸರಕಾರಿ ಸಾರಿಗೆ ಎಂಬ ಸರಕಾರದ ಪರಿಕಲ್ಪನೆಯನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ಒದಗಿಸುವುದು ಸಾರಿಗೆ ನೌಕರರು. ತಮ್ಮಜೀವನದ ಮುಕ್ಕಾಲು ಭಾಗ ದಿನನಿತ್ಯ ಸಂಚಾರದಲ್ಲಿದ್ದು ತಮ್ಮ ಕಷ್ಟಗಳನ್ನು ತೋರ್ಪಡಿಸದೇ, […]

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ : ರೈತ ಕಾರ್ಮಿಕರು ಪ್ರತಿಭಟನೆ

Thursday, September 5th, 2019
raitara-pratibhatane

ಮಂಗಳೂರು : ಕನಿಷ್ಠ ಕೂಲಿ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ರೈತ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಸಿಐಟಿಯು, ಎಐಕೆಎಸ್ ದ.ಕ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಕನಿಷ್ಠ ಕೂಲಿ, ಪಿಂಚಣಿ, ಸಾಮಾಜಿಕ ಭದ್ರತೆಗಾಗಿ ಹೊಸ ಯೋಜನೆಗಳನ್ನು ರೂಪಿಸಬೇಕು. ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಗುತ್ತಿಗೆ ಕಾರ್ಮಿಕ ಪದ್ದತಿ ರದ್ದುಗೊಳಿಸಬೇಕು. ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಬೇಕು. ರೈತರಿಗೆ ಬೆಂಬಲ ಬೆಲೆ ನೀಡಬೇಕೆಂದು […]