ಗ್ರಾಮ ಪಂಚಾಯತ್ ಪಿಡಿಓ ಗೆ ಹೃದಯಾಘಾತ
Thursday, November 3rd, 2022
ಸುಳ್ಯ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಯು.ಡಿ. ಶೇಖರ್ ಅವರಿಗೆ 55 ವರ್ಷ ವಯಸ್ಸಾಗಿತ್ತು. ಗುರುವಾರ ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದರಾದರೂ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ. ಅರಂತೋಡು, ಐವರ್ನಾಡು, ಗುತ್ತಿಗಾರು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಕಾರ್ಯದರ್ಶಿ, ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿದ್ದ ಶೇಖರ್ ಅವರು, ಜನಪ್ರಿಯ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಪಂಚಾಯತ್ ರಾಜ್ […]