ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ
Friday, January 10th, 2025ಮಂಗಳೂರು : ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ( ಹೆಚ್ಚುವರಿ ಪ್ರಭಾರ ) ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ. ಎನ್ ಅವರು ಶುಕ್ರವಾರ ಪಿಲಿಕುಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಪಿಲಿಕುಳ ಆಯುಕ್ತರಾಗಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿ ರಶ್ಮೀ ಎಸ್.ಆರ್ ಅವರು ಚಿಕ್ಕಮಂಗಳೂರು ಉಪವಿಭಾಗಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.