ಕುರ್ಚಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

Wednesday, December 4th, 2019
elephant

ಮಡಿಕೇರಿ : ದಕ್ಷಿಣ ಕೊಡಗಿನ ಕುಟ್ಟ ವ್ಯಾಪ್ತಿಯಲ್ಲಿ ನಿರಂತರ ಉಪಟಳ ನೀಡುತ್ತಿದ್ದ ಪುಂಡಾನೆಯೊಂದನ್ನು ಅರಣ್ಯ ಇಲಾಖಾ ತಂಡ ಕುರ್ಚಿ ಗ್ರಾಮದಲ್ಲಿ ಸಾಹಸಿಕ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯಲಾಗಿದೆ. ಸೆರೆ ಹಿಡಿದ ಕಾಡಾನೆ ಅಂದಾಜು ೨೪ ವರ್ಷ ಪ್ರಾಯದ್ದಾಗಿದ್ದು, ಇದನ್ನು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆ ಕಾರ್ಮಿಕನೊಬ್ಬನ ಸಾವಿಗೆ ಕಾರಣವಾಗಿದ್ದ ಈ ಕಾಡಾನೆ, ಕುಟ್ಟ ವ್ಯಾಪ್ತಿಯ ಗ್ರಾಮಗಳ ಕಾಫಿ ತೋಟ, ಭತ್ತದ ಗದ್ದೆಗಳಲ್ಲಿ ದಾಂಧಲೆ ನಡೆಸಿ ಅಪಾರ ಪ್ರಮಾಣದ ಬೆಳೆ ಹಾನಿಗೆ ಕಾರಣವಾಗಿತ್ತು. ಮನಬಂದಂತೆ ರಾಜಾರೋಷವಾಗಿ […]

ಚಾಮರಾಜನಗರದಲ್ಲಿ ಸೆರೆಯಾದ ಪುಂಡಾನೆಯನ್ನು ತಮಿಳುನಾಡಿಗೆ ಬಿಟ್ಟ ಅಧಿಕಾರಿಗಳು

Thursday, October 24th, 2019
Pundane

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು  ಬನ್ನಿತಾಳಪುರ ಸಮೀಪ  ಕಳೆದ ಮೂರು ದಿನಗಳಿಂದ ರೈತರಲ್ಲಿ ಆತಂಕ ಹುಟ್ಟಿಸಿದ್ದ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ತಮಿಳುನಾಡಿನಲ್ಲಿ ಈ ಆನೆ 8  ಜನರನ್ನು  ಕೊಂದಿತ್ತು.  ಇಬ್ಬರು ರೈತರಿಗೆ ಗಾಯ ಮಾಡಿತ್ತು,  3 ಹಸುಗಳನ್ನು ತುಳಿದು ಸಾಯಿಸಿ ತ್ತು . ತಮಿಳುನಾಡಿನ ಮಧುಮಲೈ ಅರಣ್ಯದಿಂದ ಬಂದಿದ್ದ ಆನೆ ಬನ್ನಿತಾಳಪುರ ದಲ್ಲಿ ರೈತರ ಹೊಲದಲ್ಲಿ ರಂಪಾಟ ನಡೆಸಿತ್ತು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಅರವಳಿಕೆ ನೀಡಿ ಆನೆ ನೆ ಸೆರೆಹಿಡಿಯಲು ಯಶಸ್ವಿಯಾಗಿದ್ದಾರೆ.  ಅಭಿಮನ್ಯು, ಕೃಷ್ಣ, ಗೋಪಾಲಸ್ವಾಮಿ, […]