Blog Archive

ಪುತ್ತೂರು : ಕಾಲೇಜಿನ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ

Monday, October 21st, 2019
veena

ಪುತ್ತೂರು : ಪರೀಕ್ಷೆಯ ಭಯದಿಂದ ಪುತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೇರಿಯಲ್ಲಿ ನಡೆದಿದೆ. ವೀಣಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎನ್ನಲಾಗಿದೆ. ಪುತ್ತೂರು ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಇಂದು ಕಾಲೇಜಿನಲ್ಲಿ ಪರೀಕ್ಷೆ ನಡೆತ್ತಿದೆ. ಪರೀಕ್ಷೆಯ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ಈ ಸಂಬಂಧ ಪುತ್ತೂರು ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಪುತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಐವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

Thursday, October 10th, 2019
puttur

ಮಂಗಳೂರು : ಪುತ್ತೂರು ನಗರದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನ ಐವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಅತ್ಯಾಚಾರ ಪ್ರಕರಣದ ತನಿಖೆ ನೇತೃತ್ವ ವಹಿಸಿದ್ದ ಪುತ್ತೂರು ಉಪ ವಿಭಾಗದ ಡಿವೈಎಸ್‌ಪಿ ದಿನಕರ ಶೆಟ್ಟಿ, ಪುತ್ತೂರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಪುತ್ತೂರು ತಾಲೂಕಿನ ಬಜತ್ತೂರು ಗಾಣದಮನೆ ನಿವಾಸಿ ಗುರುನಂದನ್ (19), ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಪ್ರಜ್ವಲ್ (19), ಕಡಂಬು ನಿವಾಸಿ ಕಿಶನ್ (19), ಪುತ್ತೂರು ತಾಲೂಕಿನ […]

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ನಿರ್ವಾಹಕ ಸಿಬಂದಿ ಕೊರತೆ

Friday, September 27th, 2019
puttur

ಪುತ್ತೂರು : ಸಮರ್ಪಕ ಹಾಗೂ ವ್ಯವಸ್ಥಿತ ಕಟ್ಟಡ ಸೌಕರ್ಯವನ್ನು ಹೊಂದಲಾಗದೆ ಸಮಸ್ಯೆಯಲ್ಲಿರುವ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಇಡೀ ತಾಲೂಕಿನ ಶಾಲೆಗಳ ವ್ಯವಸ್ಥೆ ನಿರ್ವಹಣ ಕೇಂದ್ರವಾಗಿದ್ದರೂ ಅಗತ್ಯ ಸಿಬಂದಿ ಕೊರತೆಯಿಂದ ಬಳಲುತ್ತಿದೆ. ಪುತ್ತೂರು ತಾಲೂಕಿನ 23 ಸರಕಾರಿ ಪ್ರೌಢಶಾಲೆಗಳು, 181 ಸರಕಾರಿ ಪ್ರಾಥಮಿಕ ಶಾಲೆಗಳು, 22 ಅನುದಾನಿತ ಪ್ರೌಢಶಾಲೆಗಳು, 13 ಅನುದಾನಿತ ಪ್ರಾಥಮಿಕ ಶಾಲೆಗಳು, 36 ಅನುದಾನರಹಿತ ಪ್ರೌಢಶಾಲೆಗಳು ಹಾಗೂ 39 ಅನುದಾನರಹಿತ ಪ್ರಾಥಮಿಕ ಶಾಲೆಗಳ ಕೇಂದ್ರವಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶೇ. 60ರಷ್ಟು ಕಾರ್ಯ ನಿರ್ವಾಹಕ […]

ಪುತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಆರೋಪಿಗಳ ಜಾಮೀನು ಅರ್ಜಿ ವಜಾ

Saturday, September 14th, 2019
Puthur

ಪುತ್ತೂರು : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಪ್ರಕರಣದಲ್ಲಿ ಬಂಧಿತರಾಗಿದ್ದ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾನ್ಯಾಯಾಲಯ ತಿರಸ್ಕರಿಸಿದೆ. ನಗರದ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿಗಳಾದ ಬಜತ್ತೂರು ಗ್ರಾಮದ ಗಾಣದ ಮೂಲೆ ನಿವಾಸಿ ಗುರುನಂದನ್‌(19), ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ನಿವಾಸಿಗಳಾದ ಪ್ರಜ್ವಲ್‌ (19), ಕಿಶನ್‌(19), ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಸುನಿಲ್‌(19), ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಪ್ರಖ್ಯಾತ್‌(19) ಎಂಬ ಆರೋಪಿಗಳು ಜಾಮೀನು ಕೋರಿ […]

ಹಿಂದೂ ಜಾಗರಣ ವೇದಿಕೆ ಕಾರ್ಯದರ್ಶಿ ಕಾರ್ತಿಕ್ ಹತ್ಯೆ ಪ್ರಕರಣ : ಮೂವರ ಬಂಧನ

Thursday, September 5th, 2019
muvara-bandhaa

ಪುತ್ತೂರು : ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಸುವರ್ಣ ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಮೀಪ ಸಂಪ್ಯ ಎಂಬಲ್ಲಿ ಮಂಗಳವಾರ ರಾತ್ರಿ ಬರ್ಬರ ಹತ್ಯೆ ಮಾಡಲಾಗಿದ್ದು, ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಪುತ್ತೂರು ಆರ್ಯಾಪು ಗ್ರಾಮದ ಚರಣ್‌ (26 ), ಈತನ ಸಹೋದರ ಕಿರಣ್ (36 ) ಮತ್ತು ಮಂಗಳೂರು ಉಳ್ಳಾಲಬೈಲು ನಿವಾಸಿ ಪ್ರೀತೇಶ್ (28) ಎಂದು ಗುರುತಿಸಲಾಗಿದೆ. ಇನ್ನು ಆರೋಪಿಗಳಿಗೆ ಅಶ್ರಯ ನೀಡಿದ […]

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಬರ್ಬರ ಹತ್ಯೆ

Wednesday, September 4th, 2019
kartik

ಪುತ್ತೂರು : ಯುವಕನೋರ್ವನಿಗೆ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಪುತ್ತೂರಿನ ಸಂಪ್ಯ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ. ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗಣೇಶೊತ್ಸವ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಸ್ಥಳೀಯರಾದ ಚರಣ್ ರಾಜ್, ಕಿರಣ್ ಮತ್ತು ಪ್ರೀತೇಶ್ ಎಂಬವರು ಚೂರಿಯಿಂದ ಇರಿದು ಕಾರ್ತಿಕ್ ಮೇಲೆ ಹಲ್ಲೆ ನಡೆಸಿ ಭೀಕರವಾಗಿ ಕೊಲೆಗೈಯ್ದಿದ್ದಾರೆ. ಬಳಿಕ, ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ […]

ಪುತ್ತೂರು : ಕಾರು ಚಾಲಕ ಮೃತ್ಯು ; ಬಸ್ ಪುಡಿಗೈದ ಆಕ್ರೋಶಿತರು

Monday, August 12th, 2019
Puttur-Accident

ಪುತ್ತೂರು : ಪುತ್ತೂರಿನ ಕಬಕದ ಸಮೀಪ ಖಾಸಗಿ ಬಸ್ ಕಾರೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಆ. 12 ರ ಸೋಮವಾರ  ಪೊಲ್ಯದಲ್ಲಿ ನಡೆದಿದೆ. ಮಂಗಳೂರು – ಪುತ್ತೂರು ನಡುವೆ ಸಂಚರಿಸುವ ಧರಿತ್ರಿ ಬಸ್ ಕಾರಿಗೆ ಢಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಹಕೀಮ್ ಸಾವನ್ನಪ್ಪಿದ್ದಾರೆ. ಹಕೀಮ್ ಪುತ್ತೂರಿನ ಈಶ್ವರಮಂಗಲದ ನಿವಾಸಿಯಾಗಿದ್ದಾರೆ. ಘಟನೆ ನಡೆದ ತಕ್ಷಣ ಆಕ್ರೋಶಗೊಂಡ ಸ್ಥಳೀಯರೂ ಬಸ್ ಪುಡಿಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಕೆ. ಅಣ್ಣಾಮಲೈ: ಶಿಕ್ಷಣವು ಬದುಕಿಗೆ ಪ್ರಯೋಜನವಾಗಬೇಕು

Monday, August 12th, 2019
annamalai

ಪುತ್ತೂರು : ಇಂದು ಶಿಕ್ಷಣದ ಮೂಲ ಉದ್ದೇಶವನ್ನು ಬಿಟ್ಟುನಾವು ಬೇರೆ ಕಡೆಗೆ ಸಾಗುತ್ತಿದ್ದೇವೆ. ನಾವು ಪಡೆದ ಶಿಕ್ಷಣ ಅರ್ಥಪೂರ್ಣ ವಾಗಬೇಕು ಮತ್ತು ಬದುಕಿಗೆ ಪ್ರಯೋಜನವಾಗಬೇಕು. ಶಿಕ್ಷಣದ ಮೂಲಕ ಪಡೆದದ್ದನ್ನು ಸಮಾಜಕ್ಕೆ ಮರಳಿ ನೀಡಬೇಕು ಎಂದು ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅಭಿಪ್ರಾಯಿಸಿದರು. ಶ್ರೀ ಮಹಾಲಿಂಗೇಶ್ವರ ದೇವಾ ಲಯದ ಎದುರಿನ ಗದ್ದೆಯಲ್ಲಿ ರವಿವಾರ ನಡೆದ ಯುವವಾಹಿನಿ ಮಂಗಳೂರು ಕೇಂದ್ರ ಸಮಿತಿಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಿಂಚನ ವಿಶೇಷಾಂಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬ್ರಹ್ಮಶ್ರೀ ನಾರಾಯಣ ಗುರು, […]

ಪುತ್ತೂರು : ಸಂತ್ರಸ್ತೆ ವಿದ್ಯಾರ್ಥಿನಿ ದಾಖಲಾದ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

Sunday, July 7th, 2019
nagalakshmi

ಮಂಗಳೂರು : ಪೊಲೀಸರು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಹಠಾತ್ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾನೂನಿನ ತಿಳಿವಳಿಕೆ ನೀಡಬೇಕು ಆಗ ಅತ್ಯಾಚಾರದಂತಹ ಪ್ರಕರಣಗಳನ್ನು ಪತ್ತೆ ಹಚ್ಚಲು ಸುಲಭ ಸಾಧ್ಯ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಅವರು ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ದಾಖಲಾಗಿರುವ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರಲ್ಲಿ ಮಾತನಾಡಿದರು. ಕರಾವಳಿ ಜಿಲ್ಲೆಯಲ್ಲಿ ಅತ್ಯಾಚಾರ, ಸಾಮೂಹಿಕ ಅತ್ಯಾಚಾರದಂಥ ಘಟನೆಗಳು ನಡೆಯುತ್ತಿರುವುದು ದುರದೃಷ್ಟಕರ. ಇಂತಹ ಕೃತ್ಯಗಳನ್ನು ತಡೆಗಟ್ಟಲು ಎಲ್ಲ […]

ಪುತ್ತೂರು : ಯುವತಿಯಿಂದ ಅರೆಬೆತ್ತಲೆ ವೀಡಿಯೋ ಕಾಲ್- ಪ್ರಕರಣ ದಾಖಲು

Saturday, July 6th, 2019
video-call

ಪುತ್ತೂರು  : ಯುವತಿಯೊಬ್ಬಳು ತನ್ನ ಅರೆಬೆತ್ತಲೆ ಶರೀರವನ್ನು ಪ್ರದರ್ಶಿಸಿ ವೀಡಿಯೋ ಕಾಲ್ ಮಾಡುತ್ತಿರುವ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದು, ಈ ಸಂಬಂಧ ಪುತ್ತೂರು ನಗರ ಠಾಣಾ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವತಿಯ ಮೊಬೈಲ್ ಮೂಲಕ ಯಾರಿಗೋ ವೀಡಿಯೋ ಕಾಲ್ ಮಾಡಿದ್ದು, ತನ್ನ ಅರೆನಗ್ನ ದೇಹವನ್ನು ಫೋನ್ ಸಂಪರ್ಕದಲ್ಲಿರುವ ವ್ಯಕ್ತಿಗೆ ಪ್ರದರ್ಶಿಸುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಇದು ಭಾರೀ ವೈರಲ್ ಆಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗಿದೆ ಹಾಗೂ ಮಹಿಳೆಯರ ಗೌರವಕ್ಕೆ ಚ್ಯುತಿ ಉಂಟಾಗಿದೆ […]