ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಟೈಪಿಸ್ಟ್ ಗೆ ಲೈಂಗಿಕ ಕಿರುಕುಳ ನೀಡಿದ ವಕೀಲ, ಪ್ರಕರಣ ದಾಖಲು
Sunday, August 22nd, 2021ಮಂಗಳೂರು: ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಕೀಲನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ ವಿ.ಹೆಚ್. ಕಾಂಪ್ಲೆಕ್ಸ್ನಲ್ಲಿರುವ ವಕೀಲ ಉಮ್ಮರ್ ಕೆ. ವಿರುದ್ಧ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಕಳೆದ 9 ತಿಂಗಳಿಂದ ಸಂತ್ರಸ್ತ ಯುವತಿ ಉಮ್ಮರ್ ಕೆ. ಕಚೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆ.16 ರಂದು ಸಂಜೆ ಕಚೇರಿಯಲ್ಲಿ ಯಾರು ಇಲ್ಲದ ವೇಳೆ ಸಂತ್ರಸ್ತೆಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಜೊತೆಗೆ ಈ ವಿಚಾರವನ್ನು […]