ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ
Tuesday, December 3rd, 2019ಮಡಿಕೇರಿ : ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ಉದಾರೀಕರಣ ನೀತಿಗಳ ಮೂಲಕ ಸರ್ಕಾರ ಎಲ್ಲಾ […]