ಖಜಾನೆ ಖಾಲಿಯಾಗಿರುವ ಸಂಕೇತವೇ ಪೆಟ್ರೋಲ್ ದರ ಏರಿಕೆ

Saturday, June 15th, 2024
Bharath-Shetty-Y

ಕಾವೂರು: ಪೆಟ್ರೋಲ್ ಬೆಲೆ ಕಳೆದ ಎರಡು ವರೆ ತಿಂಗಳಿನಿಂದ ಲೀಟರ್ 99 ರೂಪಾಯಿ ಸಿಗುತ್ತಿದ್ದರೆ ಶನಿವಾರ ರಾಜ್ಯ ಸರಕಾರ ಏಕಾಏಕಿ 3.20 ರೂ.ದರ ಏರಿಕೆ ಮಾಡಿದ್ದು 102 ದಾಟಿದೆ.ಇದು ರಾಜ್ಯದ ಖಜಾನೆ ಖಾಲಿಯಾಗಿರುವ ಸಂಕೇತ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ. ಬಡ ಜನರಿಗೆ ಉಚಿತ ಗ್ಯಾರಂಟಿಯೊಂದಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯ ಗ್ಯಾರಂಟಿ ಸಿಗಲಿದೆ. ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೇ ಬೆಲೆ ಏರಿಕೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರೆ ಜನ […]

ಗ್ಯಾರೆಂಟಿ ಯೋಜನೆಗಳಿಗೆ ಸರಿದೂಗಿಸಲು ರಾಜ್ಯದಲ್ಲಿ ಪೆಟ್ರೋಲ್ ಮತ್ತು‌ ಡೀಸೆಲ್‌ ದರ ಮೂರು ರೂ ಏರಿಸಿದ ಕಾಂಗ್ರೆಸ್‌ ಸರ್ಕಾರ : ಬ್ರಿಜೇಶ್ ಚೌಟ

Saturday, June 15th, 2024
Brijesh-Chowta

ಮಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ ಎಂದರು. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ ಮಾಡಲಾಗಿದ್ದು, ಒಮ್ಮೆಲೇ ಅತೀ […]

ಮಗಳ ಮನೆಯಲ್ಲಿ ಪೆಟ್ರೋಲ್‌ ಕುಡಿದು ಅಜ್ಜಿ ಸಾವು

Thursday, September 30th, 2021
Petrol

ಉಪ್ಪಿನಂಗಡಿ :  ಬಾಟಲಿಯಲ್ಲಿದ್ದ ಪೆಟ್ರೋಲ್‌ ಅನ್ನು ಕುಡಿದು ಅಜ್ಜಿ ಸಾವನ್ನಪ್ಪಿದ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ಬುಧವಾರ ನಡೆದಿದೆ. ಮೃತರನ್ನು ಬಂಟ್ವಾಳದ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ಪದ್ಮಾವತಿ ಅವರು ಸೆ.26ರಂದು ಪೆರ್ನೆಯ ಮಗಳ ಮನೆಗೆ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ಮನಯವರು ಬಾಟಲಿಯಲ್ಲಿ ಪೆಟ್ರೋಲ್‌ ತಂದಿಟ್ಟಿದ್ದರು. ದೃಷ್ಟಿ ದೋಷದಿಂದ ಬಳಲುತ್ತಿದ್ದ ಪದ್ಮಾವತಿ ಅವರು ಪೆಟ್ರೋಲ್‌ ಇದ್ದ ಬಾಟಲಿಯನ್ನು ನೀರೆಂದು ಭಾವಿಸಿ ಕುಡಿದಿದ್ದಾರೆ. ಈ ಸಂದರ್ಭ ಅಸ್ವಸ್ಥರಾದ ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು […]

ಬೆಲೆಯೇರಿಕೆಯ ವಿರುದ್ಧ ಬೀದಿಗಿಳಿದ ಬೀದಿಬದಿ ವ್ಯಾಪಾರಸ್ಥರು

Thursday, July 8th, 2021
street-vendors

ಮಂಗಳೂರು  : ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂದು ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್ ಬಳಿಯಲ್ಲಿ ಬೀದಿಬದಿ ವ್ಯಾಪಾರಸ್ಥರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಘೋಷಣೆಗಳನ್ನು ಕೂಗುವ ಮೂಲಕ ಬಿತ್ತಿಚಿತ್ರ ಹಿಡಿದು ಪ್ರತಿಭಟಿಸಿದರು. ಬೆಲೆಯೇರಿಕೆಯ ವಿರುದ್ದ CPIM ಮಂಗಳೂರು ನಗರದಾದ್ಯಂತ ಹಮ್ಮಿಕೊಂಡ ವಾರಾಚರಣೆಯ ಭಾಗವಾಗಿ ಬೀದಿಬದಿ ವ್ಯಾಪಾರಸ್ಥರೂ ಕೂಡ […]

ದನ ಕಟ್ಟುವ ವಿಷಯದಲ್ಲಿ ತಂದೆಯಿಂದ ಪೆಟ್ರೋಲ್ ದಾಳಿಗೊಳಗಾಗಿದ್ದ ಮಗ ಸಾವು

Thursday, July 1st, 2021
Vishwanath-Shetty

ಮಂಗಳೂರು : ದನ ಕಟ್ಟುವ ವಿಷಯದಲ್ಲಿ ಉಂಟಾದ ಜಗಳದಲ್ಲಿ ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ವಾಮಿತ್ ಶೆಟ್ಟಿ (25) ಜು.01 ರ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೆಪ್ಪಿನಮೊಗರು ತಾರ್ದೊಲ್ಯದ ದನ ಕಟ್ಟುವ ವಿಷಯದಲ್ಲಿ ತಂದೆಯೇ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದರು. ಆರೋಪಿ ತಂದೆ ವಿಶ್ವನಾಥ ಶೆಟ್ಟಿ ಯಾನೆ ತಿಪ್ಪಿ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಘಟನೆ ನಡೆದಂದೇ ಮಂಗಳೂರು ಗ್ರಾಮಾಂತರ ಪೊಲೀಸರು […]

ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

Tuesday, June 22nd, 2021
Vishwanath-Shetty

ಮಂಗಳೂರು  : ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮನೆಯ ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ಈ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತ ಮಗ ಸ್ವಾಮೀತ್ ಶೆಟ್ಟಿ (25) ಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ […]

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Monday, June 7th, 2021
Youth Congress

ಮಂಗಳೂರು : ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ  ಸೋಮವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್, ಪ್ರಧಾನಿ ಮೋದಿ ನೇತೃತ್ವದ ಸರಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಈ ಕೊರೋನ ಸಂಕಷ್ಟದಲ್ಲಿ ಮತ್ತಷ್ಟು ತೊಂದರೆ ಕೊಡುತ್ತಿದೆ ಎಂದರು. ಒಂದು ತಿಂಗಳ ಅವಧಿಯಲ್ಕಿ 18 ಬಾರಿ ತೈಲಗಳ ಬೆಲೆ ಏರಿಕೆ ಮಾಡಲಾಗಿದೆ. […]

ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುತ್ತಿತ್ತು, ಮನೆಮನೆಗೆ ಕಿಟ್ ಹೋಗುತ್ತಿತ್ತು : ಮಾಜಿ ಸಚಿವ ರಮಾನಥ ರೈ

Tuesday, May 18th, 2021
Ramanatha Rai

ಮಂಗಳೂರು: ರಾಜ್ಯದಲ್ಲಿ ಕೊರೊನಾ ಉಲ್ಬಣಗೊಳ್ಳುತ್ತಿದೆ. ಇದೊಂದು ರಾಷ್ಟ್ರೀಯ ವಿಪತ್ತು. ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡಾ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆ ಸಿಗುತ್ತಿಲ್ಲ. ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿರುವವರ ಕೆಲಸ. ಎರಡನೇ ಡೋಸ್ ಯಾವಾಗ ಕೊಡಬೇಕೂಂತ ಸಿಎಂಗೆ ಗೊತ್ತಿಲ್ಲ. ಆಕ್ಸಿಜನ್, ಐಸಿಯು, ಚಿಕಿತ್ಸೆ […]

ಪೆಟ್ರೋಲ್ ಸುರಿದು ದೇವಸ್ಥಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ

Friday, September 18th, 2020
gangolli sucide

ಗಂಗೊಳ್ಳಿ : ಗಂಗೊಳ್ಳಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಗುರುವಾರ ಮಧ್ಯಾಹ್ನ ಯುವಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಯುವಕ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ದೇವರು ಮೈಮೇಲೆ ಬರುತ್ತಿದ್ದರೂ ಸಮುದಾಯದ ದೇವಸ್ಥಾನದಲ್ಲಿ ಪಾತ್ರಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಾಘವೇಂದ್ರ ಖಾರ್ವಿ,  ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಮೃತರು ಎಂದು ಗುರುತಿಸಲಾಗಿದೆ. ಈ ಸಂದರ್ಭ ರಕ್ಷಿಸಲು ಹೋಗಿ ಗಾಯಗೊಂಡವರನ್ನು […]

ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ವತಿಯಿಂದ ಸೈಕಲ್ ರ್‍ಯಾಲಿ

Monday, June 29th, 2020
Rally

ಮಂಗಳೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯ ವಿರುದ್ಧ ದಕ್ಷಿಣ ಕನ್ನಡ ಕಾಂಗ್ರೆಸ್ ವತಿಯಿಂದ ಜೂನ್  29, ಸೋಮವಾರ ಬೃಹತ್ ಪ್ರತಿಭಟನೆ ಮಂಗಳೂರು ಪುರಭವನ ಮುಂದೆ ನಡೆಯಿತು. ನಗರದ ಜ್ಯೋತಿ ವೃತ್ತದಿಂದ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ನೇತೃತ್ವದಲ್ಲಿ  ಸೈಕಲ್ ರ್‍ಯಾಲಿ ನಡೆಸಿ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ನೂರಾರು ಕಾರ್ಯಕರ್ತರು ಇದೇ ವೇಳೆ ಬೆಲೆ ಏರಿಕೆ ವಿರೋಧಿಸಿ ಸಂಸದ ನಳಿನ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಅವರ ಮುಖವಾಡ […]