ಸ್ಕೂಟರ್‌ಗೆ ಲಾರಿ ಡಿಕ್ಕಿ, ಪೆಟ್ರೋಲ್ ಪಂಪ್ ಮ್ಯಾನೇಜರ್ ಮೃತ್ಯು

Saturday, June 8th, 2024
Rama-Naik

ಬಂಟ್ವಾಳ : ಲಾರಿಯೊಂದು ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ, ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿ. ರಾಮನಾಯ್ಕ ಅವರು ಸ್ಕೂಟರ್‌ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದರು. ಈ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿ ಚಾಲಕ ರಾಮನಾಯ್ಕ ಅವರು ತೆರಳುತ್ತಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ […]