ಪೆಟ್ರೋಲ್ ಬಂಕ್ ಗೆ ನುಗ್ಗಿ ಕಂಪ್ಯೂಟರ್, ಸಿಸಿ ಕ್ಯಾಮೆರಾ ದೋಚಿದ ಕಳ್ಳರು
Monday, January 25th, 2021ವಿಟ್ಲ: ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಕಳವುಗೈದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಬಂಕ್ ನ ಕಚೇರಿಯ ಬೀಗ ಒಡೆದು ನುಗ್ಗಿದ ದರೋಡೆಕೋರರು ಕಂಪ್ಯೂಟರ್ ಮತ್ತು ಸಿಸಿ ಕ್ಯಾಮೆರಾಕ್ಕೆ ಸಂಬಂಧಿಸಿದ ಸಲಕರಣೆಗಳನ್ನು ದೋಚಿದ್ದಾರೆ. ಕಚೇರಿಯ ಎಲ್ಲಾ ಲಾಕರ್ ಗಳನ್ನು ಒಡೆದು ಅಸ್ತವ್ಯಸ್ತ ಮಾಡಿದ್ದಾರೆ. ಸುಮಾರು 2 ಲಕ್ಷದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಕೆಲ ಸಮಯದ ಹಿಂದೆ ಕುದ್ದುಪದವಿನಲ್ಲಿರುವ […]