ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

Thursday, October 12th, 2023
ಬಸ್ ನಿಲ್ದಾಣದ ಬಳಿ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

ಬಂಟ್ವಾಳ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ. ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ಗೆಳತಿಯ ಜೊತೆ ತೆರಳಿ ನಾಪತ್ತೆಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಪತ್ತೆ

Monday, June 15th, 2020
kiran

ವಿಟ್ಲ : ಇತ್ತೀಚೆಗೆ ಪೆರುವಾಯಿ ಗ್ರಾಮದ ಕಂಬಕೋಡಿ ಮನೆಯಿಂದ ತನ್ನ ಸ್ನೇಹಿತೆಯೊಂದಿಗೆ ತೆರಳಿ ನಾಪತ್ತೆಯಾಗಿದ್ದ ಯುವತಿ  ಪ್ರಿಯಕರನ ಜತೆ ಬೆಂಗಳೂರಿನಲ್ಲಿ ಮದುವೆಯಾಗಿದ್ದಾಳೆ ಎಂಬ ಮಾಹಿತಿ ವಿಟ್ಲ ಪೊಲೀಸರಿಗೆ ಲಭ್ಯವಾಗಿದೆ. ಪೆರುವಾಯಿ ಗ್ರಾಮದ ಕಂಬಕೋಡಿ ನಿವಾಸಿಯಾಗಿರುವ ಯುವತಿಯನ್ನು ಮೇ 29ರಂದು ಆಕೆಯ ಸ್ನೇಹಿತೆ ಕರೆದುಕೊಂಡು ತೆರಳಿದ್ದಳು. ಬಳಿಕ ಆಕೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ತಂದೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ನಾಪತ್ತೆ ಪ್ರಕರಣದ ಬೆನ್ನು ಬಿದ್ದಿದ್ದರು. ನಿರಂತರ ಸೋಧ ನಡೆಸಿದ ಬಳಿಕ ಇದೀಗ […]

ಸ್ನೇಹಿತೆ ಜೊತೆ ಹೊರಟ 23 ವರ್ಷದ ಯುವತಿ ನಾಪತ್ತೆ

Tuesday, June 9th, 2020
Vitla

ವಿಟ್ಲ : ಸ್ನೇಹಿತೆ ಜೊತೆ ಹೊರಟ 23 ವರ್ಷದ ಯುವತಿಯೊಬ್ಬಳು ಮನೆಗೆ ಬಾರದೇ ನಾಪತ್ತೆಯಾಗಿರುವ  ಘಟನೆ  ವಿಟ್ಲ ಪೊಲೀಸ್ ಠಾಣೆ ಯ ವ್ಯಾಪ್ತಿಯಲ್ಲಿ ನಡೆದಿದೆ . ಪೆರುವಾಯಿ ಗ್ರಾಮದ ಕಂಬಕೋಡಿ ನಿವಾಸಿ 23 ವರ್ಷದ ಯುವತಿ ನಾಪತ್ತೆಯಾದವಳು. ಮೇ 29ರಂದು ಆಕೆಯ ಸ್ನೇಹಿತೆ ಕರೆದುಕೊಂಡು ಹೋಗಿದ್ದಳು ಎನ್ನಲಾಗಿದೆ. ಬಳಿಕ ಮಧ್ಯಾಹ್ನ ಮನೆಗೆ ಕರೆ ಮಾಡಿ ಸ್ನೇಹಿತೆ ನನ್ನ ಜತೆ ಬಂದಿದ್ದಾಳೆ. ಮೂರು ದಿನದ ಬಳಿಕ ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದ್ದಳು. ಆಕೆ ಮನೆಗೆ ಹಿಂದಿರುಗಿ ಬಂದಿಲ್ಲ ಎಂದು ಆಕೆಯ ತಂದೆ […]

ಸುಳ್ಯ ತಾಲೂಕಿನ ಪೆರುವಾಯಿಯಿಂದ ಕೇರಳಕ್ಕೆ ಅಕ್ರಮ ದನ ಸಾಗಾಟ; ಭಜರಂಗದಳದ ಕಾರ್ಯಕರ್ತರಿಂದ ತಡೆ

Saturday, July 6th, 2013
Cattle Trasportation

ಬಂಟ್ವಾಳ: ಪೆರುವಾಯಿಯಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಸಂದರ್ಭ ಭಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಈ ಸಂದರ್ಭ  ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಹೊಯ್ ಕೈ ನಡೆದಿದ್ದು, ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದಾರೆ. ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಿಂತಿಕಲ್ಲು ಕಡೆಯಿಂದ ಕುದ್ದುಪದವು ಪೆರುವಾಯಿ ಮಾರ್ಗವಾಗಿ ಕೇರಳಕ್ಕೆ ಹಸುಗಳನ್ನು ಸಾಗಾಟ ಮಾಡುವುದನ್ನು ಮುಳಿಯದಲ್ಲಿ ಭಜರಂಗದಳದ ಕಾರ್ಯಕರ್ತ ಚೇತನ್ ಎಂಬವರು ನೋಡಿ, ಪೆರುವಾಯಿಯಲ್ಲಿದ್ದ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಎಂಟು ಮಂದಿ ಕಾರ್ಯಕರ್ತರನ್ನೊಳಗೊಂಡ ತಂಡ ಕಾರನ್ನು ಅಡ್ಡಗಟ್ಟಿ […]