ಮಂಗಳೂರು: ಕಾಟಿಪಳ್ಳದ ದೀಪಕ್ ರಾವ್ ಹತ್ಯೆಗೆ ಸಂಬಂಧಿಸಿದಂತೆ ವಿವಿಧ ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಮತ್ತು ಹೇಳಿಕೆ ನೀಡುವ ಬದಲು ವಿಷಯ ಗೊತ್ತಿದ್ದರೆ ಅದನ್ನು ಪೊಲೀಸರಿಗೆ ನೀಡಬಹುದು ಎಂದು ಸಚಿವ ಯು.ಟಿ.ಖಾದರ್ ಹೇಳಿದರು. ಮಂಗಳವಾರ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿತ ಘಟನೆಯ ಬಗ್ಗೆ ವಿವರ ಇರುವವರು ಸಾಮಾಜಿಕ ಜಾಲತಾಣದಲ್ಲಿ ಬರೆಯುವ ಬದಲು ಅಥವಾ ನೇರ ಹೇಳಿಕೆ ನೀಡುವ ಬದಲು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೆ ತನಿಖೆಗೆ ಸಹಕಾರಿಯಾಗಲಿದೆ […]
ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆಯ ಹಿಂದೆ ಬಿಜೆಪಿಯ ರಾಜಕೀಯ ಉದ್ದೇಶವಿದೆ ಎಂದು ಮಂಗಳೂರು ಉತ್ತರ ಶಾಸಕ ಮೊಯ್ದಿನ್ ಬಾವಾ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಯನ್ನು ಕೋರಲಾಗಿದೆ ಎಂದು ಹೇಳಿದರು. ದೀಪಕ್ ರಾವ್ ಹತ್ಯೆ ಆರೋಪಿಗಳಾದ ಪಿಂಕಿ ನವಾಜ್‍ನ ಸಹೋದರ ಲಾದನ್ ಇಸ್ಮಾಯಿಲ್ ಹಾಗೂ ಆತನ ಅಕ್ಕನ ಗಂಡ (ಬಾವ) ಕಾಪುವಿನಲ್ಲಿ ಬಿಜೆಪಿ ಕಾರ್ಯಕರ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಹತ್ಯೆಯ ಹಿಂದೆ ಇರಬಹುದಾದ ಬಿಜೆಪಿಯ […]
ಹಾವೇರಿ: ತಾಕತ್ತಿದ್ದರೆ ಸಿದ್ದರಾಮಯ್ಯ ಸರಕಾರ ನನ್ನನ್ನು ಬಂಧಿಸಲು ಪೊಲೀಸರಿಗೆ ಆದೇಶ ನೀಡಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಾಡಿದ ಸವಾಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಕಾನೂನಿಗಿಂತ ಈ ನೆಲದಲ್ಲಿ ಯಾರೂ ದೊಡ್ಡವರಲ್ಲ. ಶೋಭಾ ಅವರು ಉದ್ವೇಗದಿಂದ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಜೊತೆಗೆ, ಶೋಭಾ ಕರಂದ್ಲಾಜೆಯವರು ತಪ್ಪು ಮಾಡಿದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಪೊಲೀಸರು ಬಂಧಿಸುತ್ತಾರೆಯೇ ಹೊರತು ನಾವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಹದಾಯಿ […]