Blog Archive

ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಅಧಿಕಾರ ಸ್ವೀಕಾರ

Saturday, January 2nd, 2021
Shashikumar

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್  ಆಗಿ  ಐಪಿಎಸ್  ಅಧಿಕಾರಿ ಶಶಿಕುಮಾರ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪೊಲೀಸ್ ರೀತಿಯಲ್ಲಿ ಕೆಲಸ ಮಾಡಿದರೆ ಅಪರಾಧ ರಹಿತ ಸಮಾಜ ನಿರ್ಮಾಣ ಸಾಧ್ಯ. ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಹಿಂದೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿದ್ದ ಪೋನ್ ಇನ್ ಕಾರ್ಯಕ್ರಮ ಮುಂದುವರಿಯುವ ಜೊತೆಗೆ ಪ್ರತಿ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಅಹವಾಲು ಆಲಿಸುವ ಪೊಲ್ ವ್ಯವಸ್ಥೆ ರೂಪಿಸುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ಪೊಲೀಸ್ ಮೇಲೆ ಹಲ್ಲೆ ಪ್ರಕರಣಗಳು ಕೇಳಿ […]

ಮಂಗಳೂರಿಗೆ ಉಗ್ರರನ್ನು ಕರೆಸುವ ಕುರಿತ ಬೆದರಿಕೆಯ ಬರಹ, ನಗರದಲ್ಲಿ ಆತಂಕ

Friday, November 27th, 2020
terrorist

ಮಂಗಳೂರು : ಮಂಗಳೂರಿಗೆ ಉಗ್ರರನ್ನು ಕರೆಸುವ ಕುರಿತ ಬೆದರಿಕೆಯ ಬರಹವೊಂದು ನಗರದ ಬಿಜೈ ಸಮೀಪದ ಅಪಾರ್ಟ್‌ಮೆಂಟ್‌ವೊಂದರ ಗೋಡೆ ಮೇಲೆ ಕಂಡುಬಂದಿದ್ದು, ಘಟನೆಯ ತನಿಖೆಗೆ ಪ್ರತ್ಯೇಕ ತಂಡ ರಚಿಸಲಾಗಿದ್ದು, ತ್ವರಿತವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ತಿಳಿಸಿದ್ದಾರೆ. ಅಪಾರ್ಟ್‌ಮೆಂಟ್‌ವೊಂದರ ಕಂಪೌಂಡ್ ಮೇಲೆ ‘ಲಷ್ಕರ್ ಇ ತೊಯ್ಬ ಝಿಂದಾಬಾದ್’ ಎಂದು ಬರೆಯಲಾಗಿದ್ದು, ಉಗ್ರರನ್ನು ಮಂಗಳೂರಿಗೆ ಕರೆಸುವ ಬೆದರಿಕೆ ಹಾಕಲಾಗಿದೆ. ಸಂಘಪರಿವಾರಕ್ಕೆ ಬೆದರಿಕೆಯ ಮಾತುಗಳನ್ನು ಬರೆಯಲಾಗಿದೆ. ‘ನಿಮ್ಮನ್ನು (ಸಂಘ ಪರಿವಾರ) ನಿಯಂತ್ರಿಸಲು ಲಷ್ಕರ್ ಉಗ್ರರನ್ನು ಆಹ್ವಾನಿಸಬೇಕಾದೀತು. […]

ತುಳುವಿನಲ್ಲಿ ಟ್ವೀಟ್ ಮಾಡಿದ ಪೊಲೀಸ್ ಕಮಿಷನರ್ ಹರ್ಷ ಪಿಎಸ್

Sunday, June 28th, 2020
harsha PS

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹರ್ಷ ಪಿ ಎಸ್ ಅವರು  ವಾರ್ತಾಮತ್ತು ಪ್ರಚಾರ ಇಲಾಖೆ ಆಯುಕ್ತರಾಗಿ  ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಇದುವರೆಗೆ ಸಹಕಾರ ನೀಡಿದ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. “ಕುಡ್ಲದ ಮಾತ ಮೋಕೆದ ಬಂಧುಲೇ, 11 ತಿಂಗೊಳುರ್ದ್ ಕುಡ್ಲದ ಪೊಲೀಸ್ ಆಯುಕ್ತೆಯಾದ್ ಸೇವೆ ಮಂದಿನ ಎಂಕ್ ಇತ್ತೆ ವರ್ಗಾವಣೆ ಅವೋಂದುಂಡು. ಇಲಾಖೆದ ಸಂಪೂರ್ಣ ಸಹಕಾರದೊಟ್ಟಿಗೆ ಮಸ್ತ್ ಪ್ರಾಮಾಣಿಕ ಬೊಕ್ಕ ಜನಪರವಾದು ಎನ್ನ ಕರ್ತವ್ಯ ಮಲ್ತೊಂದು ಬೈದೆ. ಎಂಕ್ ಸಹಕಾರ ಬೆಂಬಲ […]

ಸುರತ್ಕಲ್ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಅಮಾನತು

Wednesday, July 10th, 2019
Ramakrishna

ಮಂಗಳೂರು : ಮಾದಕವಸ್ತು ಪೂರೈಕೆ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಹಾಗೂ ತನ್ನ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣದ ವಿಚಾರದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಮಂಗಳೂರಿನ ಸುರತ್ಕಲ್ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್ ಕೆ.ಕೆ.ರಾಮಕೃಷ್ಣ ಅವರನ್ನು ಅಮಾನತುಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದಾರೆ. ಮಂಗಳೂರಿನಲ್ಲಿ ಗಾಂಜಾ, ದನಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಮಿಷನರ್‌ ಸಂದೀಪ್ ಪಾಟೀಲ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಆದರೆ ಸುರತ್ಕಲ್ ಠಾಣಾ ಇನ್‌ಸ್ಪೆಕ್ಟರ್ ರಾಮಕೃಷ್ಣ ಅದನ್ನು ಗಂಭೀರವಾಗಿ […]

ಎಂ.ಫ್ರೆಂಡ್ಸ್ ಕಾರುಣ್ಯ ಯೋಜನೆಗೆ ಭೇಟಿ ನೀಡಿದ ಪೊಲೀಸ್ ಕಮಿಷನರ್

Friday, October 12th, 2018
m friends

ಮಂಗಳೂರು : ಎಂ.ಫ್ರೆಂಡ್ಸ್ ಟ್ರಸ್ಟ್ ವತಿಯಿಂದ ಪ್ರತಿದಿನ ಸಂಜೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಆಯೋಜಿಸುವ ಕಾರುಣ್ಯ ಯೋಜನೆಗೆ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಅವರು ಗುರುವಾರ ಭೇಟಿ ನೀಡಿ ಪ್ರಶಂಸೆ ವ್ಯಕ್ತಪಡಿಸಿದರು. ವೆನ್ಲಾಕ್ ಆಸ್ಪತ್ರೆಯ ಸುಮಾರು 500 ಮಂದಿ ರೋಗಿಗಳ ಜೊತೆಗಾರರಿಗೆ ಪ್ರತಿದಿನ ಡಿನ್ನರ್ ನೀಡುತ್ತಿರುವುದು ಸಣ್ಣ ಕೆಲಸವಲ್ಲ. ಶುಚಿ ರುಚಿಯಾದ ತಿಂಡಿ ನೀಡಿ ಮಹತ್ಕಾರ್ಯದಲ್ಲಿ ತೊಡಗಿರುವ ಎಂ.ಫ್ರೆಂಡ್ಸ್ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ಹೇಳಿದರು. ವೆನ್ಲಾಕ್ ಆಸ್ಪತ್ರೆ ಡಿಎಂಓ ಡಾ. […]

ಪ್ರಕಾಶ್‌ ರೈ ಮೇಲೆ ಮೊಟ್ಟೆ ಎಸೆಯಲು ಹೊಂಚು ಹಾಕುತ್ತಿದ್ದವನ ಬಂಧನ… ಇಬ್ಬರು ಪೇದೆಗಳಿಗೆ ಬಹುಮಾನ!

Saturday, December 23rd, 2017
karavali

ಮಂಗಳೂರು: ಕರಾವಳಿ ಉತ್ಸವದ ಉದ್ಘಾಟನೆಗೆ ಬಂದಿದ್ದ ನಟ ಪ್ರಕಾಶ್ ರೈ ಮೇಲೆ ಮೊಟ್ಟೆ ಎಸೆಯಲು ಹೊಂಚು ಹಾಕುತ್ತಿದ್ದ ಲತೀಶ್ ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿ, ಪ್ರಶಂಸೆಗೆ ಒಳಗಾಗಿದ್ದಾರೆ. ಕರಾವಳಿ ಉತ್ಸವದ ಸಂದರ್ಭದಲ್ಲಿ ಪ್ರಕಾಶ್ ರೈ ಮೇಲೆ ಮೊಟ್ಟೆ ಎಸೆಯಲು ಹೊಂಚು ಹಾಕಿದ್ದನ್ನು ಗಮನಿಸಿದ, ಅದೇ ಸ್ಥಳದಲ್ಲಿದ್ದ ಪೇದೆಗಳಾದ ನಾಗರಾಜ್ ಹಾಗೂ ಮಹೇಶ್ ತಮ್ಮ ಸಮಯಪ್ರಜ್ಞೆಯಿಂದ ಘಟನೆ ನಡೆಯುವ ಮುನ್ನವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ವಿಷಯ ತಿಳಿದ ಪೊಲೀಸ್ ಕಮಿಷನರ್ ಅವರು, ಪೇದೆಗಳಾದ ಟಿ.ಆರ್. […]

ಸಾರ್ವಜನಿಕರ ಪ್ರಶ್ನೆ, ದೂರುಗಳಿಗೆ ಪೊಲೀಸ್‌ ಫೋನ್‌ ಇನ್‌

Saturday, December 9th, 2017
phoneIn

ಮಂಗಳೂರು: ನಂತೂರು ಜಂಕ್ಷನ್‌ ನಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಅಪಘಾತ ಮತ್ತು ಅಲ್ಲಿನ ಅವೈಜ್ಞಾನಿಕ ವೃತ್ತದ ಬಗ್ಗೆ ಶುಕ್ರವಾರ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಜರಗಿದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ  ಈ ವೃತ್ತದ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದರು. ಕರೆಗಳನ್ನು ಸ್ವೀಕರಿಸಿದ ಪೊಲೀಸ್‌ ಆಯುಕ್ತ ಟಿ.ಆರ್‌. ಸುರೇಶ್‌ ಅವರು ನಂತೂರು ವೃತ್ತದ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಎಂಜಿನಿಯರ್‌ ಜತೆ ಸಮಾಲೋಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ನಗರದ ಸಂಚಾರ ವ್ಯವಸ್ಥೆ ಬಗ್ಗೆ ಚರ್ಚಿಸಲು […]

ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯಾ ಆರೋಪಿಗಳ ಶೀಘ್ರ ಬಂಧನ : ಎಡಿಜಿಪಿ

Thursday, June 22nd, 2017
Aloka

ಮಂಗಳೂರು : ಬಂಟ್ವಾಳದ ಬೆಂಜನಪದವಿನಲ್ಲಿ  ಎಸ್‌ಡಿಪಿ ಮುಖಂಡ ಮುಹಮ್ಮದ್ ಅಶ್ರಫ್ ಕಲಾಯಿ ಹತ್ಯೆಯ ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಈಗಾಗಲೇ ನಮ್ಮ ಮಾಹಿತಿದಾರರಿಗೆ ಆರೋಪಿಗಳ ಮಾಹಿತಿ ಲಭ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ  ಅಲೋಕ್ ಮೋಹನ್ ಹೇಳಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು,  ಪೊಲೀಸ್ ತಂಡಗಳು ಪ್ರತ್ಯೇಕ ನಿಗಾದೊಂದಿಗೆ ತನಿಖೆ ನಡೆಸುತ್ತಿವೆ. ಆರೋಪಿಗಳನ್ನು ಬಂಧಿಸಿದಾಕ್ಷಣ ಈ ಘಟನೆಗಳ ಷಡ್ಯಂತ್ರ ರೂಪಿಸಿದವರನ್ನೂ ಬಂಧಿಸಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ನಡೆದಿರುವ ಘಟನೆಗಳು ಉತ್ತಮ […]

ಪಿಎಫ್ಐ ಸಂಘಟನೆ ಮಾಡಿರುವ ಆರೋಪ ಸುಳ್ಳು – ಪೊಲೀಸ್ ಕಮಿಷನರ್

Wednesday, April 5th, 2017
chandrashekar

ಮಂಗಳೂರು :  ಅಹ್ಮದ್ ಖುರೇಶಿ ಬಂಧನ ಪ್ರಕರಣದ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಪ್ರಕರಣದ ಬಗ್ಗೆ ತಪ್ಪು ಕಲ್ಪನೆಯಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ  ಪ್ರತಿಭಟನ ನಿರತರ ಮೇಲೆ ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಬೇಕಾಯಿತು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎಂ ಚಂದ್ರಶೇಖರ್ ಹೇಳಿದ್ದಾರೆ. ಪ್ರಕಾಶ್ ಪೂಜಾರಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಅಹ್ಮದ್ ಖುರೇಶಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಬಂಧಿಸಲ್ಪಟ್ಟ ಖುರೇಶಿ ಮೇಲೆ […]

25 ವಾರ ಮುಗಿಸಿದ ಪೊಲೀಸ್ ಕಮಿಷನರ್ ಪೋನ್ ಇನ್’ ಕಾರ್ಯಕ್ರಮ

Friday, January 27th, 2017
commissioner

ಮಂಗಳೂರು :  ಪೊಲೀಸ್ ಕಮಿಷನರ್ ವತಿಯಿಂದ ಆರಂಭಿಸಲಾಗಿರುವ ‘ಪೋನ್ ಇನ್’ ಕಾರ್ಯಕ್ರಮಕ್ಕೆ 25 ವಾರ ಮುಗಿದಿದ್ದು  ಈ ತನಕ ಒಟ್ಟು 428 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಹೇಳಿದ್ದಾರೆ. ಪೋನ್ ಇನ್’ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದ್ದು 24 ಕಂತುಗಳಲ್ಲಿ ಸ್ವೀಕರಿಸಿದ ಒಟ್ಟು 403 ದೂರುಗಳ ಪೈಕಿ 373 ದೂರುಗಳಿಗೆ ಪೂರ್ಣ ಪ್ರಮಾಣದಲ್ಲಿ ಮತ್ತು 10 ದೂರುಗಳಿಗೆ ಆಂಶಿಕವಾಗಿ ಸ್ಪಂದಿಸಲಾಗಿದೆ. 20 ದೂರುಗಳನ್ನು ಇತರ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. 261 ದೂರುಗಳು ಸಂಚಾರ ಸುವ್ಯವಸ್ಥೆಗೆ ಸಂಬಂಧ ಪಟ್ಟಿರುತ್ತವೆ. 52 […]