ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನಿಗೆ ಥಳಿಸಿದ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ
Monday, December 23rd, 2019ಧಾರವಾಡ : ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿ ಧಾರವಾಡ ಬಸ್ನಲ್ಲಿ ನಡೆದಿದೆ. ರಾತ್ರಿ ವೇಳೆ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಹುಬ್ಬಳ್ಳಿ ವಿಭಾಗದ ಕೆಎ 25 ಎಫ್ 2995 ಬಸ್ನಲ್ಲಿ ಥಳಿತ ನಡೆದಿದೆ. ಬಸ್ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ ಪ್ರಯಾಣಿಕನಿಗೆ ಚಾಲಕ ಮತ್ತು ನಿರ್ವಾಹಕ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರಯಾಣಿಕನ ಮೇಲಿನ ಥಳಿತಕ್ಕೆ ಕಾರಣ ತಿಳಿದು ಬಂದಿಲ್ಲ. ಪ್ರಯಾಣಿಕನನ್ನು ಥಳಿಸುವ ದೃಶ್ಯವನ್ನು ಸಹ ಪ್ರಯಾಣಿಕರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. […]