ಮಂಗಳೂರು ಪೊಲೀಸರ ಮೇಲೆ ಹಿಂಸಾಚಾರ; 21 ಆರೋಪಿಗಳ ಅರ್ಜಿ ತಿರಸ್ಕೃತ

Friday, March 6th, 2020
lati Charge

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹೆಸರಿನಲ್ಲಿ  2019ರ ಡಿಸೆಂಬರ್‌ 19ರಂದು ಮಂಗಳೂರು ಪೊಲೀಸರ  ಮೇಲೆ ಹಿಂಸಾಚಾರ, ಕಲ್ಲೆಸೆತ  ಪ್ರಕರಣಕ್ಕೆ ಸಂಬಂಧಿಸಿದಂತೆ 21 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ಇತ್ತೀಚೆಗಷ್ಟೇ ರಾಜ್ಯ ಹೈಕೋರ್ಟ್ 21 ಆರೋಪಿಗಳಿಗೆಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಪಡಿಸಿದೆ. ರಾಜ್ಯದ ಪರ ವಾದ ಮಂಡಿಸಿದ  ಸಾಲಿಸಿಟರ್ ಜನರಲ್ ತುಷಾರ್ […]

ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲು ತೆಲಂಗಾಣ ಸರ್ಕಾರ ನಿರ್ಧಾರ

Monday, February 17th, 2020
CAA

ನವದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ತೆಲಂಗಾಣ ಸರ್ಕಾರವು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ನಿರ್ಧರಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸುವುದಾಗಿ ಸಿಎಂ ಚಂದ್ರಶೇಖರ್ ರಾವ್ ಕಳೆದ ತಿಂಗಳು ಹೇಳಿದ್ದರು. ಕೇರಳ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ […]

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ : ರಜನಿಕಾಂತ್

Wednesday, February 5th, 2020
rajanikanth

ಚೆನ್ನೈ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಈ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ. ಒಂದು ವೇಳೆ ಇದರಿಂದ ಮುಸ್ಲಿಮರಿಗೆ ತೊಂದರೆ ಆದರೆ ಇದರ ಬಗ್ಗೆ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನೇ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ನಡೆಯಲಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರ ಮಾತನಾಡಿರುವ […]

ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

Friday, January 31st, 2020
renukacharya

ದಾವಣಗೆರೆ : ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಇದಕ್ಕಾಗಿ ನಿಮಗೆ ಮಸೀದಿ ಬೇಕೆ ಎಂದಿದ್ದರು. ಇವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 A, 295 A […]

ಮೂರು ದಿನ ಪೂರೈಸಿದ ಉಪವಾಸ ಸತ್ಯಾಗ್ರಹ : ನಾಳೆ ಗಾಂಧಿ ಸ್ಮರಣೆಯೊಂದಿಗೆ ಧರಣಿ ಅಂತ್ಯ

Wednesday, January 29th, 2020
protest

ಮಡಿಕೇರಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ನಗರದ ಗಾಂಧಿ ಮಂಟಪದ ಎದುರು ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಮೂರು ದಿನಗಳನ್ನು ಪೂರೈಸಿದೆ. ಮಹಾತ್ಮಾ ಗಾಂಧೀಜಿಯವರ ಪುಣ್ಯತಿಥಿಯ ದಿನವಾದ ಜ.30 ರಂದು ಧರಣಿ ಅಂತ್ಯಗೊಳ್ಳಲಿದೆ. ವೇದಿಕೆಯ ಪ್ರಮುಖರಾದ ಎಸ್.ಐ.ಮುನೀರ್ ಅಹಮ್ಮದ್, ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕ ತೆನ್ನಿರ ಮೈನಾ, ಸಿಪಿಐಎಂನ ಮಹದೇವು, ನಗರಸಭಾ […]

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹುಬ್ಬಳ್ಳಿಗೆ

Friday, January 17th, 2020
hubballi

ಹುಬ್ಬಳ್ಳಿ : ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ಜ. 18ರಂದು ನಡೆಯಲಿರುವ ಬೃಹತ್ ಸಭೆಗೆ ಹುಬ್ಬಳ್ಳಿ ಸಂಪೂರ್ಣ ಕೇಸರಿಮಯಗೊಳ್ಳಲಿದೆ. ಈಗಾಗಲೇ ಐ ಸಪೋರ್ಟ್ ಸಿಎಎ ಎಂದು ಬರೆದಿರುವ 50 ಸಾವಿರ ಕೇಸರಿ ಟೊಪ್ಪಿಗಳು ಸಿದ್ಧಗೊಂಡಿದ್ದು, 20 ಸಾವಿರ ಬಿಜೆಪಿ ಧ್ವಜಗಳು ತಯಾರಾಗಿವೆ. ಈ ಧ್ವಜಗಳನ್ನು ಕಟ್ಟುವುದಕ್ಕಾಗಿ ಕಟ್ಟಿಗೆ ಬಡಿಗೆ ಸಿದ್ಧಗೊಳ್ಳುತ್ತಿವೆ. ವಿಮಾನ ನಿಲ್ದಾಣದಿಂದ ಅಂಬೇಡ್ಕರ ವೃತ್ತದವರೆಗಿನ ಮಾರ್ಗದುದ್ದಕ್ಕೂ ಬಿಜೆಪಿ ಧ್ವಜ, ಹೋರ್ಡಿಂಗ್ಗಳು ರಾರಾಜಿಸಲಿವೆ. ನೆಹರು ಮೈದಾನದಲ್ಲಿ 40 ಅಡಿ […]

ಕೃಷ್ಣರಾಜ ಕ್ಷೇತ್ರದ 270 ಬೂತ್‍ಗಳಲ್ಲೂ ಪೋಸ್ಟ್ ಕಾರ್ಡ್ ಅಭಿಯಾನ

Monday, January 13th, 2020
mysuru

ಮೈಸೂರು : ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಪೌರತ್ವ ಕಾಯ್ದೆ-2019 ವಿಷಯವಾಗಿ ಮುಸ್ಲಿಮರ ಮನಸ್ಸಿನಲ್ಲಿರುವ ಆತಂಕವನ್ನು ಹೋಗಲಾಡಿಸುವ ದೃಷ್ಟಿಯಿಂದ ಪೋಸ್ಟ್ ಕಾರ್ಡ್ ಅಭಿಯಾನವನ್ನು ವಿವೇಕಾನಂದ ವೃತ್ತದಲ್ಲಿ ಆಯೋಜಿಸಲಾಗಿತ್ತು. ನಿನ್ನೆ ನಡೆದ ಕಾರ್ಯಕ್ರಮಕ್ಕೆ ಶಾಸಕ ಎಸ್.ಎ. ರಾಮರಾಸ್ ಚಾಲನೆ ನೀಡಿದರು. ಕೃಷ್ಣರಾಜ ಕ್ಷೇತ್ರದ 270 ಬೂತ್‍ಗಳಲ್ಲೂ ಪೋಸ್ಟ್ ಕಾರ್ಡ್ ಅಭಿಯಾನವನ್ನು ಆಯೋಜಿಸಲಾಗಿದ್ದು ಒಂದು ಲಕ್ಷ ಅಂಚೆ ಪತ್ರಗಳನ್ನು ಸಾರ್ವಜನಿಕರಿಂದ ಸಿ.ಎ.ಎ. ಗೆ ಬೆಂಬಲ ವ್ಯಕ್ತಪಡಿಸಿ ಹಾಕಲಾಯಿತು. ಎಲ್ಲರಿಗೂ ಪೌರತ್ವ ತಿದ್ದುಪಡಿ ಕಾಯ್ದೆಯ ತಿದುಪ್ದಡಿಯಿಂದ ಯಾವುದೇ ಧರ್ಮದ, ವಿಶೇಷವಾಗಿ […]

ಬಿಜೆಪಿಯವರು ಅನೇಕ ಅವಹೇಳನಕಾರಿ ಹೇಳಿಕೆ : ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪ

Monday, January 6th, 2020
mysuru

ಮೈಸೂರು : ಪೌರತ್ವ ತಿದ್ದುಪಡಿ ಕಾಯ್ದೆ ಬಂದಾಗಿನಿಂದಲೂ ಬಿಜೆಪಿಯವರು ಅನೇಕ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತ ಬರುತ್ತಿದ್ದಾರೆ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ಅವರಿಂದು ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಬಳ್ಳಾರಿಯ ಸೋಮಶೇಖರ್ ರೆಡ್ಡಿಯವರು ನಾವು ಹಿಂದೂಗಳು 70% ಇದ್ದೇವೆ. ಅಲ್ಪಸಂಖ್ಯಾರು 30% ಮಾತ್ರ ಇದ್ದೀರಿ. ನಾವು ಕತ್ತಿ ಹಿಡಿದರೆ ನಿಮ್ಮ ಕಥೆ ಮುಗಿತ್ತದೆ ಎಂಬ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪೌರತ್ವ ತಿದ್ದುಪಡಿಯನ್ನು ಬೆಂಬಲಿಸಲು ಬಿಜೆಪಿಯವರು ಮಿಸ್ ಕಾಲ್ಡ್ ನಂಬರ್ ಬಳಸಿಕೊಂಡು ಜನರಿಗೆ […]

ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ : ಕೇಂದ್ರದ ನಿಲುವಿಗೆ ಖಂಡನೆ

Wednesday, December 25th, 2019
Protest

ಮಡಿಕೇರಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಮತ್ತು ಪೌರತ್ವ ನೋಂದಣಿ(ಎನ್‌ಆರ್‌ಸಿ)ಯನ್ನು ವಿರೋಧಿಸಿ ಹಾಗೂ ಮಂಗಳೂರು ಗೋಲಿಬಾರ್ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದಿಂದ ನಗರದ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಕೊಡಗು ಜಿಲ್ಲಾ ಮುಸ್ಲಿಂ ಜಮಾಅತ್‌ಗಳ ಒಕ್ಕೂಟದ ಕಾರ್ಯಾಧ್ಯಕ್ಷ ಪಿ.ಎಂ. ಖಾಸಿಂ ಮತ್ತು ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ ಮಾಸ್ಟರ್ ಅವರ ನೇತೃತ್ವದಲ್ಲಿ ನಗರದ ಗಾಂಧಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ಕಾರ್ಯಕರ್ತರು ’ರಿಜೆಕ್ಟ್ ಸಿಎಎ, ಬಾಯ್‌ಕಾಟ್ […]

ಸಿಎಎ ವಿರೋಧಿಸಿ ಪ್ರತಿಭಟನೆ : ಬೆಂಗಳೂರಲ್ಲಿ ಗುಹಾ, ವಾಟಾಳ್ ಸೇರಿ ಹಲವರ ಬಂಧನ

Thursday, December 19th, 2019
bengaluru

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು, ಕಲಬುರಗಿ, ಬಳ್ಳಾರಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಗುರುವಾರ ತಾರಕಕ್ಕೇರಿದೆ. ಮತ್ತೊಂದೆಡೆ ನಿಷೇಧಾಜ್ಷೆ ನಡುವೆಯೂ ಸಿಎಎ ವಿರೋಧಿಸಿ ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನೂರಾರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವುದೇ ರೀತಿಯಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. […]