ಕೋವಿಡ್ 2ನೇ ಅಲೆ ಪ್ಯಾಕೇಜ್: 20,713 ಕಲಾವಿದರಿಗೆ 6.23 ಕೋಟಿ ರೂ. ನೆರವು ನೀಡಿಕೆಗೆ ಚಾಲನೆ
Tuesday, June 22nd, 2021ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ‘ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000/- ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ಡಿ.ಬಿ.ಟಿ. ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು. ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ […]