ನಿಗದಿತ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕು: ಜಿಲ್ಲಾಧಿಕಾರಿ ಸೂಚನೆ

Wednesday, December 15th, 2010
ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್

ಮಂಗಳೂರು : ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8ರಿಂದ 12ಗಂಟೆಯವರೆಗೆ, ಸಂಜೆ 4ರಿಂದ 8 ಗಂಟೆಯವರೆಗೆ ತೆರೆದಿರಬೇಕು. ಅಂಗಡಿಗಳಲ್ಲಿರುವ ಪದಾರ್ಥಗಳು ಮತ್ತು ಬೆಲೆ ಬಗ್ಗೆ ಸವಿವರ ಬೋರ್ಡ್ ಹಾಕಿರಬೇಕು; ತೂಕದಲ್ಲಿ ವ್ಯತ್ಯಾಸವಿದೆ ಎಂಬ ಆರೋಪಗಳು ಬರಬಾರದು ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಪ್ರಗತಿ ಪರಿಶೀಲನೆ ಸಭೆಯನ್ನು ದ್ದೇಶಿಸಿ ಮಾತನಾಡುತ್ತಿದ್ದರು. ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರಬಾರದು ಎಂದು ಹೇಳಿದ ಅವರು, ಎರಡು ತಿಂಗಳಿಗೊಮ್ಮೆ […]

ಸಶಕ್ತ ಕಾರ್ಯನಿರ್ವಹಣೆಗೆ ಸಂಪನ್ಮೂಲ ಕ್ರೋಢೀಕರಣ ಅಗತ್ಯ: ಎ ಜೆ ಕೂಡ್ಗಿ

Friday, December 3rd, 2010
ಎ ಜೆ ಕೂಡ್ಗಿ

ಮಂಗಳೂರು  : ಅಧಿಕಾರ ವಿಕೇಂದ್ರೀಕರಣ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳು ಸ್ವತಂತ್ರವಾಗಿ ಸಂಪನ್ಮೂಲ ಕ್ರೋಢೀಕರಿಸಲು ಅವಕಾಶ ಕಲ್ಪಿಸಬೇಕೆಂದು 3ನೇ ರಾಜ್ಯ ಹಣಕಾಸು ಆಯೋಗ ಶಿಫಾರಸ್ಸುಗಳ ಅನುಷ್ಠಾನ ಕಾರ್ಯಪಡೆ ಅಧ್ಯಕ್ಷರಾದ ಶ್ರೀ ಎ.ಜೆ. ಕೂಡ್ಗಿ ಅವರು ತಿಳಿಸಿದ್ದಾರೆ. ಅವರಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಾ, 3ನೇ ಹಣಕಾಸು ಆಯೋಗ ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಶಿಫಾರಸ್ಸು ಮಾಡಿರುವುದಾಗಿ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಯಥೇಚ್ಛವಾಗಿ ಹಣದ ನೆರವು […]