ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಪ್ರಗತಿ ಪರಿಶೀಲನೆ ಸಭೆ
Friday, August 12th, 2011ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಪ್ರಗತಿ ಪರಿಶೀಲನೆ ಸಭೆಯು ಶೈಲಜಾ ಭಟ್ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ನಡೆಯಿತು. ಹತ್ತು ವರ್ಷಗಳಲ್ಲಿ ಗ್ರಾಮೀಣಾಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಗ್ರಾಮೀಣ ಆರೋಗ್ಯ, ರಸ್ತೆ, ಶಿಕ್ಷಣ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ಪೂರಕವಾಗಿ ಜಿಲ್ಲಾ ಪಂಚಾಯತ್ನ ಇಲಾಖೆಗಳು ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅಧ್ಯಕ್ಷರು ಸಭೆಯಲ್ಲಿ ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕೆ.ಎನ್. ವಿಜಯ್ಪ್ರಕಾಶ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ […]