ಕರ್ನಾಟಕದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಸ್ವೀಕಾರ

Sunday, July 11th, 2021
thawar-chand-gehlot

ಬೆಂಗಳೂರು: ತಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಗೆಹ್ಲೋಟ್ ರಾಜ್ಯದ 19ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಅಭಯ್ ಶ್ರೀನಿವಾಸ್ ಓಕಾ ಅವರು ತಾವರ್ ಚಂದ್ ಗೆಹ್ಲೋಟ್‌ಗೆ ಪ್ರಮಾಣವಚನ ಬೋಧಿಸಿದ್ದಾರೆ. ರಾಜಭವನದಲ್ಲಿ ನಡೆದ ಕಾರ್ಯಕ್ರ್ಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಆರ್. ಅಶೋಕ್, ಸಂಸದೆ ಸುಮಲತಾ ಅಂಬರೀಶ್ ಇನ್ನೂ ಹಲವಾರು ಮಂದಿ ಬಾಗವಹಿಸಿದ್ದರು.

ಪ್ರತಿಜ್ಞಾ ವಿಧಿ ಬೋಧನೆ ರಾಜ್ಯಪಾಲರ ಕ್ರಮ ಸರಿ ಇಲ್ಲ – ಐವನ್ ಡಿಸೋಜ

Saturday, July 27th, 2019
ivan

ಮಂಗಳೂರು: ರಾಜ್ಯಪಾಲರು ಬಿ.ಎಸ್ ಯಡಿಯೂರಪ್ಪರವರಿಗೆ ಒಂದು ವಾರದಲ್ಲಿ ಬಹುಮತ ಸಾಬೀತು ಪಡಿಸಲು ಅನುಮತಿ ನೀಡಿ ಶುಕ್ರವಾರ ಪ್ರತಿಜ್ಞಾ ವಿಧಿ ಬೋಧಿಸಿದನ್ನು ಐವನ್ ಡಿಸೋಜ  ಪ್ರಶ್ನಿಸಿದ್ದಾರೆ ಸಂಖ್ಯಾ ಬಲ ಇಲ್ಲದ ಬಿಜೆಪಿಗೆ ಸರ್ಕಾರ ರಚಿಸಲು ಅವಕಾಶ ನೀಡಿರುವ ರಾಜ್ಯಪಾಲರ ಕ್ರಮ ಸರಿ ಇಲ್ಲ. ಈ ಬಗ್ಗೆ ಯಾರಾದರೂ ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ವಜಾಗೊಳ್ಳಲಿದೆ ಎಂದು  ಐವನ್ ಡಿಸೋಜ ಹೇಳಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಐವನ್ ಡಿಸೋಜ, ರಾಜ್ಯಪಾಲರು ಶೀಘ್ರವಾಗಿ ಪ್ರಮಾಣವಚನ ಬೋಧಿಸಿದ್ದಾರೆ. ಅವರಿಗೆ ಸಂಖ್ಯಾಬಲ ಇಲ್ಲದೆ ಪ್ರಮಾಣ […]