ಲೋಕಸಭೆಯಲ್ಲಿ ಗದ್ದಲ ಸೃಷ್ಟಿಸಿದ ಅನಂತ ಕುಮಾರ್​ ಹೆಗಡೆ ವಿವಾದಾತ್ಮಕ ಹೇಳಿಕೆ : ಕ್ಷಮೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು

Tuesday, February 4th, 2020
loka-sabhe

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಲೋಕಸಭೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ಸಂಸದರು ಈ ಕುರಿತು ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಹೆಗಡೆ ಈಗ ಗಾಂಧೀಜಿ ಕುರಿತು ಅವಹೇಳನ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಎಲ್ಲೆಡೆ ಆಕ್ಷೇಪ ವ್ಯಕ್ತವಾದರೂ ಅವರು ಕ್ಷಮೆಯಾಚಿಸಿಲ್ಲ. ಪಕ್ಷ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. […]