ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಬ್ರಹತ್ ಪ್ರತಿಭಟನಾ ಪ್ರದರ್ಶನ

Tuesday, March 29th, 2022
citu

ಮಂಗಳೂರು  : ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು(29-03-2022) ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬ್ರಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ ಕಾರ್ಮಿಕರು ಭಾಗವಹಿಸುವುದರೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಮಿಕ್ಕಿದ ವಿವಿಧ ವಿಭಾಗದ ಕಾರ್ಮಿಕರು ಡಾ.ಬಿ.ಆರ್.ಅಂಬೇಡ್ಕರ್ ವ್ರತ್ತದಿಂದ ಮೆರವಣಿಗೆಯಲ್ಲಿ ಹೊರಟು ಕೇಂದ್ರ ಸರಕಾರದ ರೈತ ಕಾರ್ಮಿಕ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ನಗರದ […]

ವೀಕೆಂಡ್ ಕರ್ಫ್ಯೂ ಹಾಗೂ ಕೊರೋನಾ ನಿರ್ಬಂಧಗಳನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

Friday, January 7th, 2022
cpim Protest

ಮಂಗಳೂರು : ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು (07-01-2021) ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿಯವರು,‍ *ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ […]

ಜನಪರ ಮರಳು ನೀತಿಗಾಗಿ ಒತ್ತಾಯಿಸಿ ಪ್ರತಿಭಟನಾ ಪ್ರದರ್ಶನ

Tuesday, October 24th, 2017
CITU

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಶಾಶ್ವತ ಹಾಗೂ ಜನಪರ ಮರಳು ನೀತಿಯನ್ನು ಜಾರಿಗೊಳಿಸಲು, ಅಕ್ರಮ ಮರಳು ಸಾಗಾಟವನ್ನು ತಡೆಗಟ್ಟಲು ಹಾಗೂ ಉಸ್ತುವಾರಿ ಸಚಿವರ ಸಮಕ್ಷಮದಲ್ಲಿ ಜಿಲ್ಲಾಡಳಿತ ಸಭೆ ಕರೆಯಬೇಕೆಂದು ಒತ್ತಾಯಿಸಿ ಸಿಐಟಿಯುಗೆ ಸಂಯೋಜಿತಗೊಂಡಿರುವ ಕಟ್ಟಡ ಕಾರ್ಮಿಕರ ಸಂಘಟನೆಯ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ನಗರದಲ್ಲಿಂದು  ದ.ಕ. ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಿದರು. 300ಕ್ಕೂ ಮಿಕ್ಕಿದ ಕಟ್ಟಡ ಕಾರ್ಮಿಕರು, ಮರಳಿನ ಕೃತಕ ಅಭಾವ ಸೃಷ್ಟಿಸಿದ ಜಿಲ್ಲಾಡಳಿತಕ್ಕೆ ಧಿಕ್ಕಾರ, ಮರಳು ಮಾಫಿಯಾವನ್ನು ಮಟ್ಟ ಹಾಕಿರಿ, ಜನಪರ ಮರಳು ನೀತಿ ಜಾರಿಯಾಗಲಿ ಎಂಬಿತ್ಯಾದಿ ಘೋಷಣೆಗಳನ್ನು […]

ಡ್ರೈನೇಜ್ ಗುಂಡಿಗೆ ಕಾರ್ಮಿಕರನ್ನು ಇಳಿಸಿ ಅಮಾನವೀಯ ಕೃತ್ಯ; ಮನಪಾ ಕ್ರಮವನ್ನು ಖಂಡಿಸಿ ಪ್ರತಿಭಟನಾ ಪ್ರದರ್ಶನ

Saturday, October 21st, 2017
CPI

ಮಂಗಳೂರು: ಮನಪಾ ವ್ಯಾಪ್ತಿಯಲ್ಲಿ ವ್ಯಾಪಕಗೊಂಡಿರುವ ಡ್ರೈನೇಜ್ ಅವ್ಯವಸ್ಥೆಯನ್ನು ಸರಿಪಡಿಸುವ ನೆಪದಲ್ಲಿ ಡ್ರೈನೇಜ್‌ನ ಮ್ಯಾನ್‌ಹೋಲ್‌ಗೆ ಕಾರ್ಮಿಕರನ್ನು ಇಳಿಸಿ ಅಮಾನವೀಯ ಕೃತ್ಯ ಎಸಗಿದ ಮಂಗಳೂರು ಮಹಾನಗರ ಪಾಲಿಕೆಯ ದುಷ್ಕೃತ್ಯಗಳ ವಿರುದ್ಧ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲು ಒತ್ತಾಯಿಸಿ ಇಂದು ಸಿಪಿಐ(ಎಂ) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯೆದುರು ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಮಂಗಳೂರಿನ ಮಾನ ಹರಾಜು ಹಾಕಿದ ಮನಪಾಕ್ಕೆ ಧಿಕ್ಕಾರ, ಅಮಾನವೀಯ ಕೃತ್ಯ ಎಸಗಿದ ಮನಪಾಕ್ಕೆ ಧಿಕ್ಕಾರ, ಘಟನೆಯನ್ನು ಸಮರ್ಥಿಸಿದ ಮೇಯರ್ ರಾಜಿನಾಮೆ ನೀಡಲಿ ಎಂಬಿತ್ಯಾದಿ […]

ವಿಶ್ವ ಹಿಂದು ಪರಿಷತ್, ಭಜರಂಗದಳದಿಂದ ಮಂಗಳೂರಿನಲ್ಲಿ ಚೀನಾ ವಸ್ತುಗಳನ್ನು ಸುಟ್ಟು ಪ್ರತಿಭ‌ಟನಾ ಪ್ರದರ್ಶನ

Friday, September 1st, 2017
china item

ಮಂಗಳೂರು : ಬಜರಂಗದಳ ದೇಶದಲ್ಲಿ ಚೀನಾ ವಸ್ತುಗಳ ಬಹಿಷ್ಕಾರಕ್ಕಾಗಿ ಆಂದೋಲನವನ್ನು ಹಮ್ಮಿಕೊಂಡ ಹಿನ್ನಲೆಯಲ್ಲಿ  ಮಂಗಳೂರಿನಲ್ಲಿ ವಿಶ್ವ ಹಿಂದು ಪರಿಷತ್, ಭಜರಂಗದಳದ ಕಾರ್ಯಕರ್ತರು ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ಪ್ರತಿಭ‌ಟನಾ ಪ್ರದರ್ಶನ ನಡೆಸಿದರು. ಮಂಗಳೂರಿನ ಕದ್ರಿ ಮೈದಾನದಲ್ಲಿ ಸೇರಿದ ನೂರಾರು ವಿ.ಎಚ್.ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಚೀನಾ ನಿರ್ಮಿತ ಆಟಿಕೆ ಸಾಮಾಗ್ರಿ, ಎಲೆಕ್ಟ್ರಾನಿಕ್ ಉಪಕರಣ ಹಾಗೂ ಚೀನಾದಿಂದ ಆಮದಾದ ಇತರ ವಸ್ತುಗಳನ್ನು ದಹಿಸುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ವಿಶ್ವ ಹಿಂದೂ ಪರಿಷತ್ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್  ಮಾತನಾಡಿ  ಚೀನಾ ಭಾರತದ ಸೇನೆಗೆ […]

ಬೆಲೆ ಏರಿಕೆಯನ್ನು ವಿರೋಧಿಸಿ ಜನವಾದಿ ಮಹಿಳಾ ಸಂಘಟನೆಯ ಪ್ರತಿಭಟನೆ

Thursday, August 11th, 2011
Janavadi Mahila Samithi /ಜನವಾದಿ ಮಹಿಳಾ ಸಂಘಟನೆ

ಮಂಗಳೂರು : ಜನವಾದಿ ಮಹಿಳಾ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಿಳೆಯರ ನೇತೃತ್ವದಲ್ಲಿ ರಾಷ್ಟ್ರವ್ಯಾಪಿ ಬೆಲೆ ಏರಿಕೆಯನ್ನು ವಿರೋಧಿಸಿ ನಡೆಯುತ್ತಿರುವ ಚಳವಳಿಯ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಪ್ರದರ್ಶನ ನಡೆಯಿತು. ಜೆ.ಎಂ.ಎಸ್‌. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಲಕ್ಷ್ಮೀ, ಮಾತನಾಡಿ ಕೆ.ಜಿ.ಗೆ 2 ರೂ.ಗಳಂತೆ 35 ಕೆ.ಜಿ. ಅಕ್ಕಿ ವಿತರಿಸುವಂತೆ ಆಗ್ರಹಿಸಿದರು, ದೇಶದ ಶೇ. 77ರಷ್ಟು ಜನತೆಯ ತಲಾ ಆದಾಯ ಕೇವಲ 20 ರೂ. ಆಗಿದ್ದು, ದಿನದಿಂದ ದಿನಕ್ಕೆ ಜನತೆಯ ಕೊಳ್ಳುವ ಶಕ್ತಿ […]