Blog Archive

ಮೀಸಲಾತಿ ಗೊಂದಲ : ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Monday, February 17th, 2020
cog.pratibhatane

ಮಡಿಕೇರಿ : ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಅಭ್ಯುದಯಕ್ಕಾಗಿ ಇದ್ದ ಮೀಸಲಾತಿಯ ಹಕ್ಕನ್ನು ದುರ್ಬಲಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀಸಲಾತಿ ಪ್ರತಿಪಾದನೆ ಕುರಿತು ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ […]

ವ್ಯಾಪಾರಿಗಳಿಂದ ದಿಢೀರ್ ಪ್ರತಿಭಟನೆ : ನಗರಸಭೆ ವಿರುದ್ಧ ಅಸಮಾಧಾನ

Thursday, February 13th, 2020
market-protest

ಮಡಿಕೇರಿ : ಮಡಿಕೇರಿಯ ಮಾರುಕಟ್ಟೆ ಆವರಣ ಅಶುಚಿತ್ವದಿಂದ ಕೂಡಿದ್ದು, ಮಾಂಸದ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಇದ್ದರೂ ನಗರಸಭೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಸಂತೆ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ತರಕಾರಿ ಮತ್ತು ಮಾಂಸದ ಮಾರುಕಟ್ಟೆಗಳ ಅವ್ಯವಸ್ಥೆ ಹಾಗೂ ಅಶುಚಿತ್ವದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಮಾರುಕಟ್ಟೆ ಆವರಣದಲ್ಲಿ ನಗರಸಭೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀನು ಮತ್ತು ಮಾಂಸ ಮಾರಾಟದ ಪ್ರದೇಶ ಅಭಿವೃದ್ಧಿ ಕಾಣದೆ ಅವೈಜ್ಞಾನಿಕ ವ್ಯವಸ್ಥೆಯಿಂದ ದುರ್ವಾಸನೆ ಬೀರುತ್ತಿದೆ […]

ಮಡಿಕೇರಿಯಲ್ಲಿ ಮುಂದುವರಿದ ಎಲ್‌ಐಸಿ ಪ್ರತಿನಿಧಿಗಳ ಪ್ರತಿಭಟನೆ

Wednesday, February 5th, 2020
madikeri-lic-protest

ಮಡಿಕೇರಿ : ಭಾರತೀಯ ಜೀವವಿಮಾ ನಿಗಮದ (ಎಲ್‌ಐಸಿ) ಸ್ಪಲ್ವ ಪಾಲನ್ನು ಐಪಿಒ ಮೂಲಕ ಷೇರು ಮಾರಾಟ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಭಾರತೀಯ ಜೀವವಿಮಾ ನಿಗಮ ಮಡಿಕೇರಿ ಶಾಖೆಯ ಸಿಬ್ಬಂದಿಗಳ ಪ್ರತಿಭಟನೆ ಎರಡನೇ ದಿನವೂ ನಡೆಯಿತು. ನಗರದ ಎಲ್‌ಐಸಿ ಪ್ರಧಾನ ಕಚೇರಿ ಎದುರು ಒಂದು ಗಂಟೆ ಕಾಲ ಕರ್ತವ್ಯ ಸ್ಥಗಿತಗೊಳಿಸಿ ಪ್ರತಿಭಟಿಸಿದ ಸಿಬ್ಬಂದಿ ವರ್ಗ ಹಾಗೂ ಪ್ರತಿನಿಧಿಗಳು ಎಲ್‌ಐಸಿ ಖಾಸಗೀಕರಣ ಮಾಡದಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಭಾರತೀಯ ಜೀವವಿಮಾ […]

ಎಲ್‌ಐಸಿ ಖಾಸಗೀಕರಣ : ಕೇಂದ್ರದ ನಡೆಗೆ ತೀವ್ರ ವಿರೋಧ; ಮಡಿಕೇರಿಯಲ್ಲಿ ಪ್ರತಿಭಟನೆ

Wednesday, February 5th, 2020
LIC

ಮಡಿಕೇರಿ : ಭಾರತೀಯ ಜೀವವಿಮಾ ನಿಗಮದ (ಎಲ್‌ಐಸಿ) ಖಾಸಗೀಕರಣ ಪ್ರಸ್ತಾಪ ವಿರೋಧಿಸಿ ಭಾರತೀಯ ಜೀವ ವಿಮಾ ನಿಗಮ ಮಡಿಕೇರಿ ಶಾಖೆಯ ಸಿಬ್ಬಂದಿಗಳು ಹಾಗೂ ಪ್ರತಿನಿಧಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಎಲ್‌ಐಸಿ ಪ್ರಧಾನ ಕಚೇರಿರು ಒಂದು ಗಂಟೆ ಕಾಲ ಕರ್ತವ್ಯ ಸ್ಥಗಿತಗೊಳಿಸಿ ಪ್ರತಿಭಟಿಸಿದ ಸಿಬ್ಬಂದಿ ವರ್ಗ ಹಾಗೂ ಪ್ರತಿನಿಧಿಗಳು ಎಲ್‌ಐಸಿ ಖಾಸಗೀಕರಣ ಮಾಡದಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಭಾರತೀಯ ಜೀವವಿಮಾ ನಿಗಮದ ಅಧಿಕಾರಿಗಳ ಸಂಘದ ಅಧ್ಯಕ್ಷ ಎ.ಬಿ.ಪ್ರಸನ್ನ, ಎಲ್‌ಐಸಿ ಯಿಂದ ಬರುವ ಶೇ.5 […]

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಎರಡು ದಿನ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Thursday, January 23rd, 2020
pratibhatane

ಬೆಂಗಳೂರು : ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬಜೆಟ್ ವೇಳೆ ತಮ್ಮ ವೇತನ ಹೆಚ್ಚಿಸಬೇಕೆಂದು ಅಂಗನವಾಡಿ ಕಾರ್ಯರ್ತೆಯರು, ಎಐಟಿಯುಸಿ ಸಂಘಟನೆ ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು : *ಸೇವಾ ಜ್ಯೇಷ್ಠತೆ ಆಧಾರದ ಮೇಲೆ ವೇತನ ನೀಡಬೇಕು *ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಅಂಗನವಾಡಿಯಲ್ಲಿ ಆರಂಭಿಸಬೇಕು […]

ಮಡಿಕೇರಿಯಲ್ಲಿ ಜೀವ ವಿಮಾ ನಿಗಮದ ಪ್ರತಿನಿಧಿಗಳ ಪ್ರತಿಭಟನೆ

Wednesday, January 22nd, 2020
LIC-Protest

ಮಡಿಕೇರಿ : ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ಸೇವಾ ತೆರಿಗೆಯನ್ನು ರದ್ದುಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೀವವಿಮಾ ನಿಗಮದ ಪ್ರತಿನಿಧಿಗಳ ಒಕ್ಕೂಟದ ಮಡಿಕೇರಿ ಖಾಖೆ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಎಲ್‌ಐಸಿ ಪ್ರಧಾನ ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪ್ರತಿನಿಧಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಪ್ರತಿನಿಧಿಗಳ ಮತ್ತು ಪಾಲಿಸಿದಾರರ ಹಿತಕ್ಕಾಗಿ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಎಜೆಂಟ್ ರೆಸ್ಟ್ ಡೇ ಘೋಷಣೆಯೊಂದಿಗೆ […]

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
siddaramaiah

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ನಾಯಕತ್ವಕ್ಕಾಗಿ ಪಕ್ಷದ ನಾಯಕರ ನಡುವಿನ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದ್ದು, ಎರಡು ಹುದ್ದೆ ವಿಭಜನೆಗೆ ವಿರೋಧಿಸಿದ್ದ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ. ಹೊಸ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆಯೇ ಪ್ರತಿಭಟನೆ ಮಾಡುವ ಮೂಲಕ ನಾಯಕತ್ವದ ಗಲಾಟೆಯನ್ನು ಬೀದಿಗೆ ತಂದಿದ್ದಾರೆ. ಇದರ ಹಿಂದೆ ಡಿ.ಕೆ.ಶಿವಕುಮಾರ್‌ ಆಪ್ತರು ಸೇರಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಎರಡು ಹುದ್ದೆಗಳು ಪ್ರತ್ಯೇಕವಾಗಬೇಕೆಂದು ಪರಮೇಶ್ವರ್‌ […]

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
bisi-uta-karyakartaru

ಬೆಂಗಳೂರು : ಕನಿಷ್ಠ ವೇತನ, ಬಿಸಿಯೂಟ ತಯಾರಿಕೆಯಲ್ಲಿ ಖಾಸಗಿ ಹಸ್ತಕ್ಷೇಪ ಕೈಬಿಡುವಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಸಿಯೂಟ ತಯಾರಿಕರು ಎರಡು ದಿನದ ಬೃಹತ್ ಪ್ರತಿಭಟನೆಗೆ ಬೀದಿಗಿಳಿದಿದ್ದಾರೆ. ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಹಾಗೂ ಸಿಐಟಿಯುಸಿ ಸಂಘಟನೆಯಿಂದ ಪ್ರತಿಭಟನೆ ನೇತೃತ್ವ ವಹಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಬಿಸಿಯೂಟ ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಪ್ರತಿಭಟನಾ ಮೆರವಣಿಗೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 1 […]

ಮಂಗಳೂರು : ವುಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

Saturday, January 11th, 2020
pratibhatane

ಮಂಗಳೂರು : ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ ಜಿಲ್ಲಾ ಸಮಿತಿಯ ವತಿಯಿಂದ ಎನ್ ಆರ್ ಸಿ, ಸಿಎಎ, ಎನ್ ಪಿ ಆರ್ ತಿರಸ್ಕರಿಸಿ ಮತ್ತು ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆಯನ್ನು ಖಂಡಿಸಿ ಮಂಗಳೂರಿನ ಟೌನ್ ಹಾಲ್ ಮುಂಭಾಗ ಶನಿವಾರ ಬೆಳಗ್ಗೆ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭ ಡಬ್ಲ್ಯೂಐಎಂ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ, ಡಬ್ಲ್ಯೂಐಎಂ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಸಾಮಾಜಿಕ‌ ಹೋರಾಟಗಾರ್ತಿ ನಝ್ಮಾ, ಲೇಖಕಿ ಜ್ಯೋತಿ ಗುರುಪ್ರಸಾದ್, ಎನ್‌ಡಬ್ಯುಎಫ್ ರಾಷ್ಟ್ರೀಯ ಸಮಿತಿ ಸದಸ್ಯೆ ದಿಲ್‌ದಾರ್, ಎಸ್ಕೆಎಸ್ಸೆಂನ ಮುಝಾಹಿದಾ, ಸಿಎಫ್‌ಐನ ಅಮ್ರೀನ್‌, ಲೇಖಕಿ […]

ಕಾರ್ಮಿಕ ನೀತಿ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ಕೊಡಗು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ

Thursday, January 9th, 2020
madikeri

ಮಡಿಕೇರಿ : ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದವು. ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಮಡಿಕೇರಿ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡು ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು. ರಾಷ್ಟ್ರೀಯ ಸಮಾನ […]