Blog Archive

ಹೆಚ್.ಡಿ.ಕೋಟೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

Thursday, December 5th, 2019
Mysuru

ಮೈಸೂರು : ಸ್ವಗ್ರಾಮದಲ್ಲಿ ಮತ ಚಲಾಯಿಸಲು ಬಂದ ಹೆಚ್.ಡಿ.ಕೋಟೆ ಶಾಸಕರನ್ನು ಪೊಲೀಸರು ತಡೆದರು ಎಂದು ಆರೋಪಿಸಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದಾರೆ. ಗ್ರಾಮದ ಮತಗಟ್ಟೆಗೆ ಆಗಮಿಸಿ ಹೊರ ಬರುತ್ತಿದ್ದಂತೆ, ಅಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ಶಾಸಕರನ್ನು ತಡೆದು ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಶಾಸಕರು ಇನ್ಸ್ಪೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ […]

ಮಂಗಳೂರಿನಲ್ಲಿ ಈರುಳ್ಳಿ ದರ ನಿಯಂತ್ರಿಸಲು ಒತ್ತಾಯಿಸಿ ಬಂದರು ಶ್ರಮಿಕರ ಸಂಘದಿಂದ ಪ್ರತಿಭಟನೆ

Thursday, December 5th, 2019
Irulli

ಮಂಗಳೂರು : ಈರುಳ್ಳಿ ಬೆಲೆ ನಿಯಂತ್ರಿಸಲು ಒತ್ತಾಯಿಸಿ ಗುರುವಾರದಂದು ಬಂದರಿನ ಕಾರ್ಮಿಕರ ಕಟ್ಟೆಯಲ್ಲಿ ಮಂಗಳೂರಿನ ಬಂದರು ಶ್ರಮಿಕರ ಸಂಘದ ವತಿಯಿಂದ ನೇಣು ಹಗ್ಗ ಪ್ರದರ್ಶಿಸಿ ವಿಶಿಷ್ಠ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಂದರು ಶ್ರಮಿಕರ ಸಂಘದ ಮುಖಂಡ ಬಿ.ಕೆ ಇಮ್ತಿಯಾಝ್ ಅವರು ಮಾತನಾಡಿ, ವಿದೇಶದಿಂದ ಈರುಳ್ಳಿ ಆಗಮನದ ಬಳಿಕ ಈರುಳ್ಳಿ ದರ ಇಳಿಕೆಯಾಗುವ ನಿರೀಕ್ಷೆ ಹುಸಿಯಾಗಿದೆ ಎಂದು ಹೇಳಿದರು. ಕಾರ್ಮಿಕ ಹಸನ್ ಮೋನು ಮಾತನಾಡಿ, ಈರುಳ್ಳಿ ಬೆಲೆ ಏರಿಕೆಯಿಂದ ಈರುಳ್ಳಿ ವ್ಯಾಪಾರ ಕುಂಠಿತವಾಗಿ ಬಂದರಿಗೆ ಹೆಚ್ಚಿನ […]

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹ : ವುಮೆನ್ ಇಂಡಿಯಾ ಮೂವ್‌ಮೆಂಟ್ ಪ್ರತಿಭಟನೆ

Thursday, December 5th, 2019
Women-india

ಮಡಿಕೇರಿ : ಮಹಿಳೆಯರ ಭದ್ರತೆಯನ್ನು ಸರ್ಕಾರಗಳು ತನ್ನ ಆದ್ಯತೆಯ ವಿಷಯವನ್ನಾಗಿ ಪರಿಗಣಿಸಬೇಕು ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ತಪ್ಪಿತಸ್ತರಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿ ವುಮೆನ್ ಇಂಡಿಯಾ ಮೂವ್‌ಮೆಂಟ್‌ನ ಕೊಡಗು ಜಿಲ್ಲಾ ಘಟಕ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿತು. ವುಮೆನ್ ಇಂಡಿಯಾ ಮೂವ್‌ಮೆಂಟ್‌ನ ಜಿಲ್ಲಾಧ್ಯಕ್ಷೆ ನಫೀಸ ಅಡ್ಕಾರ್ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಜಿಲ್ಲಾಡಳಿತ ಭವನದ ಮುಂಭಾಗ ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿದರು. ನಿತ್ಯೋಪಯೋಗಿ ವಸ್ತುಗಳ ಬೆಲೆ ಹೆಚ್ಚಳವನ್ನು ಖಂಡಿಸಿದರು. […]

ಮಂಗಳೂರು : ಅತ್ಯಾಚಾರದ ವಿರುದ್ಧ ಪ್ರತಿಭಟನೆ

Tuesday, December 3rd, 2019
ABVP

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ನಗರ ವತಿಯಿಂದ, ಹೈದ್ರಾಬಾದಿನಲ್ಲಿ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲೆ ಆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು, ಮಂಗಳೂರಿನ ಕೊಟ್ಟಾರ ಚೌಕಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾ ರ‍್ಯಾಲಿಯು ಚೈತನ್ಯ ಪದವಿಪೂರ್ವ ಕಾಲೇಜಿನಿಂದ ಪ್ರಾರಂಭವಾಗಿ ಮಹೇಶ್ ಕಾಲೇಜು ಮುಂಭಾಗವಾಗಿ ಕೊಟ್ಟಾರ ಚೌಕಿಯನ್ನು ತಲುಪಿ ರಸ್ತೆ ಮಧ್ಯದಲ್ಲಿ ನಿಂತು ಪ್ರತಿಭಟನಾಕಾರರು ಘೋಷಣೆ ಮೂಲಕ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ […]

ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ

Tuesday, December 3rd, 2019
madikeri

ಮಡಿಕೇರಿ : ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕ ಸಿಐಟಿಯು ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಹಾಗೂ ಸಹಾಯಕಿಯರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ಉದಾರೀಕರಣ ನೀತಿಗಳ ಮೂಲಕ ಸರ್ಕಾರ ಎಲ್ಲಾ […]

ಶುಲ್ಕ ಹೆಚ್ಚಳ ವಿರೋಧಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

Monday, November 11th, 2019
JNU

ನವದೆಹಲಿ : ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮತ್ತೆ ಹೈಡ್ರಾಮಾ ನಡೆದಿದ್ದು, ಶುಲ್ಕ ಹೆಚ್ಚಳ ಖಂಡಿಸಿ, ನೂರಾರು ವಿದ್ಯಾರ್ಥಿಗಳು ವಿವಿ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಜೆಎನ್‍ಯು ಹೊರಗಡೆ ಜಮಾಯಿಸಿ, ಹಾಸ್ಟೆಲ್ ಕೈಪಿಡಿ ಹಿಂಪಡೆಯಬೇಕು ಹಾಗೂ ಶುಲ್ಕವನ್ನು ಹೆಚ್ಚಳ ಮಾಡಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದ್ದು, ಭಾರೀ ಪೊಲೀಸ್ ಹಾಗೂ ಸಿಆರ್‍ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 3ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡಿದ್ದ ಸಮಯದಲ್ಲೇ ನೂರಾರು ವಿದ್ಯಾರ್ಥಿಗಳು […]

ನಾಪೋಕ್ಲು ಹಿಂದೂ ರುದ್ರಭೂಮಿ ವಿವಾದ : ಪ್ರತಿಭಟನೆಯ ಎಚ್ಚರಿಕೆ

Wednesday, November 6th, 2019
Pratibhatane

ಮಡಿಕೇರಿ : ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದಲ್ಲಿರುವ ಹಿಂದೂ ರುದ್ರಭೂಮಿಗೆ ಅತಿಕ್ರಮ ಪ್ರವೇಶ ಮಾಡಿ, ಅಲ್ಲಿ ಕಸ ವಿಲೇವಾರಿಗಾಗಿ ಗುಂಡಿ ತೋಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ಗ್ರಾಮಸ್ಥರು ಹಾಗೂ ಬಜರಂಗದಳದ ಪದಾಧಿಕಾರಿಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಜರಂಗದಳದ ನಾಪೋಕ್ಲು ಘಟಕದ ಸಂಚಾಲಕ ಬಿ.ಎಂ.ಪ್ರತೀಪ್ ಹಾಗೂ ಇತರರು, ನಾಪೋಕ್ಲು ಪಂಚಾಯಿತಿಯವರು ಯಾರ ಗಮನಕ್ಕೂ ತಾರದೆ, ಪಂಚಾಯಿತಿಯಲ್ಲಿ ನಿರ್ಣಯವನ್ನೂ ಮಾಡದೆ ಏಕಾಏಕಿ ರುದ್ರಭೂಮಿಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಅಲ್ಲಿ ಹಿರಿಯರು ಬೆಳೆಸಿದ್ದ […]

ರಾಜ್ಯ ಬಿಜೆಪಿ ಸರ್ಕಾರ ವಜಾಕ್ಕೆ ಆಗ್ರಹ : ಕೊಡಗು ಕಾಂಗ್ರೆಸ್ ಪ್ರತಿಭಟನೆ

Monday, November 4th, 2019
Kodagu

ಮಡಿಕೇರಿ : ವಾಮಮಾರ್ಗದಲ್ಲಿ ಸರ್ಕಾರ ರಚನೆಗೆ ಮುಂದಾದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಸ್ವತ: ಹೇಳಿಕೊಂಡ ಆಡಿಯೋ ವೈರಲ್ ಆಗಿದ್ದು, ಇದನ್ನೇ ಸೂಕ್ತ ಸಾಕ್ಷ್ಯವೆಂದು ಪರಿಗಣಿಸಿ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಬಿಜೆಪಿ, ಸಿಎಂ ಯಡಿಯೂರಪ್ಪ, ಕೇಂದ್ರ ಸರ್ಕಾರ ಮತ್ತು ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿ […]

ಮೈಸೂರು : ಪಾಲಿಕೆಯ ಸದಸ್ಯ ಕುಡಿಯುವ ನೀರನ್ನು ಸರಿಯಾಗಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Tuesday, October 22nd, 2019
kudiyuva-neeru

ಮೈಸೂರು : ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಿದೆ ಎಂದು ಆರೋಪಿಸಿ ಪಾಲಿಕೆ ಸದಸ್ಯರೊಬ್ಬರು ಪ್ರತಿಭಟನೆ ಮಾಡಿದ್ದಾರೆ. ತನ್ನ ಮುಂದೆ ಖಾಲಿ ಕೊಡವನ್ನಿಟ್ಟುಕೊಂಡು ಪಾಲಿಕೆಯ ಸದಸ್ಯರೋರ್ವರು ಕುಡಿಯುವ ನೀರನ್ನು ಸರಿಯಾಗಿ ನೀಡುವಂತೆ ಒತ್ತಾಯಿಸಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ ಘಟನೆ ಇಂದು ಪಾಲಿಕೆಯ ಸಭೆಯಲ್ಲಿ ನಡೆದಿದೆ. ಮಂಗಳವಾರ ಮೈಸೂರು ಮಹಾನಗರಪಾಲಿಕೆಯಲ್ಲಿ ಸಾಮಾನ್ಯ ಸಭೆಯು ಮೇಯರ್ ಪುಷ್ಪಲತಾ ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆಯುತ್ತಿತ್ತು. ರಾಜ್ಯದಲ್ಲಿ ನೆರೆ ಪರಿಸ್ಥಿತಿ ‌ಇದ್ದರೂ ನಗರದಲ್ಲಿ ಕುಡಿಯುವ ‌ನೀರಿಗೆ ಜನರು ಪರದಾಡುವಂತಾಗಿದೆ. ಇದಕ್ಕೆ ಅಧಿಕಾರಿಗಳು […]

ಮಂಗಳೂರು : ಡಿಕೆಶಿಗೆ ಇಡಿ ಸಮನ್ಸ್ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸಿಗರಿಂದ ಬೃಹತ್ ಪ್ರತಿಭಟನೆ

Friday, August 30th, 2019
pratibhatane

ಮಂಗಳೂರು : ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ಗೆ ಇಡಿ ಸಮನ್ಸ್ ನೀಡಿರುವ ಹಿನ್ನೆಲೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ನಗರದ ಮಲ್ಲಿಕಟ್ಟೆ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಡಿ.ಕೆ ಶಿವಕುಮಾರ್ ಅಥವಾ ಯಾವುದೇ ಕಾಂಗ್ರೆಸ್ ಮುಖಂಡರನ್ನು ಇಡಿ, ಐಟಿ ತನಿಖೆಯ ನೆಪದಲ್ಲಿ ಹಿಂಸೆ ನೀಡಿದರೆ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನಾಕಾರರು ರಸ್ತೆ ತಡೆ […]