‘ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ’ ಯೋಜನೆ ನವೆಂಬರ್ ವರೆಗೆ ವಿಸ್ತರಣೆ

Tuesday, June 30th, 2020
Narendra modi

ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಕೊರೋನಾ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿರುವುದರಿಂದ ‘ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ’ ಯೋಜನೆಯನ್ನು ದೀಪಾವಳಿಯಿಂದ ಆಯುಧಪೂಜೆಯವರೆಗೆ ಅಂದರೆ, ನವೆಂಬರ್ ಅಂತ್ಯದವರೆಗೆ ವಿಸ್ತರಿಸುವುದಾಗಿ ಮೋದಿ ಪ್ರಕಟಿಸಿದರು. ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಬಡವರಿಗೆ 5 ಕೆಜಿ ಅಕ್ಕಿ ಅಥವಾ ಗೋಧಿ ಮತ್ತು […]

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ನನ್ನ ಸ್ಪರ್ಧೆ: ಹುಚ್ಚ ವೆಂಕಟ್‌‌‌

Wednesday, April 11th, 2018
huccha-venkat

ಮಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ನಾನು ಸ್ಪರ್ಧಿಸಲಿದ್ದು, ಮುಂದೊಂದು ದಿನ ಪ್ರಧಾನಮಂತ್ರಿ ಕೂಡ ಆಗುತ್ತೇನೆ ಎಂದು ನಟ ಹುಚ್ಚ ವೆಂಕಟ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹುಚ್ಚ ವೆಂಕಟ್, ನಾನು ಚುನಾವಣೆಗೆ ನಿಂತರೆ ಡ್ರಿಂಕ್ಸ್, ಸೀರೆ, ಹಣ ಕೊಡಲ್ಲ. ಚುನಾವಣೆಯಲ್ಲಿ ಮತ ನೀಡಿ ಎಂದು ಮನೆ ಮನೆಗೆ ತೆರಳಿ ಪ್ರಚಾರ ಮಾಡಲ್ಲ. ನಾನು ಯಾರ ಮುಂದೆಯು ಕೈಯನ್ನು ಮುಗಿಯಲ್ಲ. ನಾನ್ಯಾಕೆ ಬೇರೆ ರಾಜಕೀಯ ವ್ಯಕ್ತಿಗಳ ತರಹ ಕೈ ಮುಗಿಯಲಿ ಎಂದಿದ್ದಾರೆ. ದುಡ್ಡು ಕೊಟ್ಟು […]

ಗ್ರಾಮೀಣ ಬ್ಯಾಂಕ್‌ನ ಗ್ರಾಹಕರಿಗೆ ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮೆ ಮೊತ್ತ ಹಸ್ತಾಂತರ

Friday, March 11th, 2016
Vime

ಪೆರ್ಲ: ಕೇಂದ್ರ ಸರಕಾರ ವಿವಿಧ ಜನಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದ್ದರೂ ಕಾಸರಗೋಡು ಜಿಲ್ಲೆಯ ಕುಗ್ರಾಮಗಳಿಗೆ ಅದು ತಲುಪುತ್ತಿಲ್ಲ. ಕಾರಣ ಇಲ್ಲಿನ ಜನತೆಗೆ ಅದರ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಕೇರಳ ಗ್ರಾಮೀಣ ಬ್ಯಾಂಕ್ ಸರಕಾರದ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವುದು ಶ್ಲಾಘನೀಯ ಎಂದು ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪವಾಣಿ ಆರ್. ಭಟ್ ಹೇಳಿದರು. ಅವರು ಗ್ರಾಮೀಣ ಬ್ಯಾಂಕ್‌ನ ವಾಣೀನಗರ ಶಾಖೆ ಆಯೋಜಿಸಿದ ಗ್ರಾಹಕ ಸಮಾವೇಶ ಹಾಗೂ ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯ ಪರಿಹಾರ ಧನ […]

ದ.ಕ ಜಿಲ್ಲಾ ಯುವಕಾಂಗ್ರೆಸ್ ಕಾರ್ಯಕಾರಿಣಿ ಸಭೆ

Tuesday, July 28th, 2015
MithunRai

ಮಂಗಳೂರು : ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ, ಗೌರವಕ್ಕೆ ತಕ್ಕಂತೆ ಕಾರ್ಯಕ್ರಮ ರೂಪುರೇಷೆ ಮಾಡಬೇಕು. ಮುಂದಿನ ದಿನಗಳಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರದ ಖಾಲಿ ಇರತಕ್ಕಂತಹ ಪದಾಧಿಕಾರಿಗಳನ್ನು ನೇಮಕ ಮಾಡಲು ಆದೇಶ ನೀಡುವುದು. ಹಾಗು ಮುಂದೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಯುವ ಕಾಂಗ್ರೆಸ್ಸಿಗೆ ಯುವಕರನ್ನು ಸೆಳೆಯುವಂತೆ ಕಾರ‍್ಯಕ್ರಮ ಹಮ್ಮಿಕೊಳ್ಳಲು ರಾಷ್ಟ್ರೀಯ ಯುವ ಕಾರ್ಯದರ್ಶಿ ರವೀಂದ್ರ ದಾಸ್ ತಿಳಿಸಿದರು. ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಯುವಕಾಂಗ್ರೆಸ್ಸಿನ ಕಾರ್ಯಕಾರಿಣಿ ಸಭೆಯಲ್ಲಿ ಅವರು ಈ ಮಾತನ್ನು ಹೇಳಿದರು. ಕರ್ನಾಟಕ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ […]