ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಪ್ರಧಾನ ಕಾರ್ಯದರ್ಶಿಯಾಗಿ ವೇಣು ವಿನೋದ್ ಆಯ್ಕೆ

Friday, July 30th, 2021
Press Bhavan Trust

ಮಂಗಳೂರು : ಪತ್ರಿಕಾ ಭವನ ಟ್ರಸ್ಟ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ರಾಮಕೃಷ್ಣ ಆರ್. (ಸಂಯುಕ್ತ ಕರ್ನಾಟಕ) ಮುಂದಿನ ಮೂರು ವರ್ಷದ ಅವಧಿಗೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ವೇಣು ವಿನೋದ್ (ವಿಜಯವಾಣಿ) ಹಾಗೂ ಕೋಶಾಧಿಕಾರಿಯಾಗಿ ಹರ್ಷ (ಡೆಕ್ಕನ್ ಹೆರಾಲ್ಡ್) ಆಯ್ಕೆಯಾಗಿದ್ದಾರೆ. ಬುಧವಾರ ಪತ್ರಿಕಾಭವನದಲ್ಲಿ ಟ್ರಸ್ಟ್ ನ ಅಧ್ಯಕ್ಷ ಆನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕೋವಿಡ್ -19 ಸಂದರ್ಭದಲ್ಲಿ ಪತ್ರಿಕಾಭವನ ಟ್ರಸ್ಟ್ ವತಿಯಿಂದ 2020ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ […]

ಕೋವಿಡ್ ಸೂಪರ್ ವಾರಿಯರ್; ಮೆರಿಲ್ ರೇಗೋ

Tuesday, June 15th, 2021
Meril-Rego

ಮಂಗಳೂರು  : ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ‌ ನೇತೃತ್ವದಲ್ಲಿ ಲಾಕ್‌ಡೌನ್ ನಿಂದ ಸಂಕಷ್ಟಕ್ಕೊಳಗಾದವರಿಗೆ ಸಹಾಯ ಹಾಗೂ ಕೋವಿಡ್ ರೋಗಿಗಳಿಗೆ ನೆರವು ನಿರಂತರವಾಗಿ ನೀಡಲಾಗುತ್ತಿದೆ‌. ಲಾಕ್‌ಡೌನ್ ಆರಂಭದಲ್ಲಿ ಪ್ರಾರಂಭಿಸಿದ ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಾಶ್ರಿತರಿಗೆ ಹಾಗೂ ಸರಕು ಸಾಗಾಣಿಕೆಯ ವಾಹನ ಚಾಲಕರಿಗೆ ಮಧ್ಯಾಹ್ನದ ಊಟ ವಿತರಿಸುವ ಕಾರ್ಯ ಪ್ರತಿದಿನ ನಿರಂತರವಾಗಿ ನಡೆಯುತ್ತಿದೆ. ದಿನಂಪ್ರತಿ 400-500ರಷ್ಟು ಜನರಿಗೆ ಊಟವನ್ನು ವಿತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗಿದೆ. ಇತ್ತೀಚೆಗೆ ಮಾಜಿ ಪ್ರಧಾನಿ […]

ದ.ಕ.ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿಯನ್ನು ಪಕ್ಷದಿಂದ 6 ವರ್ಷ ಉಚ್ಚಾಟಿಸಿದ್ಯಾಕೆ ?

Sunday, April 25th, 2021
Rajesh Balekallu

ವಿಟ್ಲ:  ದ.ಕ.ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಣಿಲ ಗ್ರಾಮ ಪಂಚಾಯತ್‌ ಕಾಂಗ್ರೆಸ್‌ ಬೆಂಬಲಿತ ಮಾಜಿ ಅಧ್ಯಕ್ಷ, ಹಾಲಿ ಉಪಾಧ್ಯಕ್ಷ ರಾಜೇಶ್‌ ಕುಮಾರ್‌ ಬಾಳೆಕಲ್ಲುಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲಾಗಿದೆ. ಕೆಲ ಸಮಯದಿಂದ ರಾಜೇಶ ಬಾಳೆಕಲ್ಲು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಾ ಬಂದಿದ್ದು, ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವಿಟ್ಲ ಹಾಗೂ ಕಾರ್ಯಕರ್ತರು ದೂರಿಕೊಂಡಿದ್ದರು. ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್‌ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರ ಮಾಡಿರುವುದಾಗಿಯೂ ಹಾಗೂ […]

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಸಚಿವ ಸಿ.ಟಿ.ರವಿ ರಾಜೀನಾಮೆ

Sunday, October 4th, 2020
ctRavi

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿಯಲ್ಲಿ ಒಬ್ಬ ವ್ಯಕ್ತಿಗೆ ಒಂದು ಸ್ಥಾನ ಹಿನ್ನೆಲೆಯಲ್ಲಿ ಸಿ.ಟಿ ರವಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ. ಶನಿವಾರ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಆದರೆ ಸಿ.ಟಿ ರವಿ ರಾಜೀನಾಮೆ ಇನ್ನೂ ಅಂಗೀಕಾರಗೊಂಡಿಲ್ಲ. ಪಕ್ಷ ಸಂಘಟನೆಯ ಹಿನ್ನೆಲೆಯಲ್ಲಿ ಇನ್ನು ಮುಂದೆ ಹೆಚ್ಚಿನ ಸಮಯವನ್ನು ನೀಡಬೇಕಾಗಿರುವುದರಿಂದ ಸಚಿವ […]

ವೈದ್ಯಕೀಯ ಕಾಲೇಜಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಭೇಟಿ

Saturday, January 4th, 2020
medical-collage

ಮಡಿಕೇರಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರು ಗುರುವಾರ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿದರು. ಭೇಟಿ ಸಮಯದಲ್ಲಿ ಸಂಸ್ಥೆಯ ಕಟ್ಟಡ ನಿರ್ಮಾಣ ಕಾಮಗಾರಿ, ವಿವಿಧ ವಿಭಾಗಗಳ ವೀಕ್ಷಣೆ ಮಾಡಿ ಕುಂದುಕೊರತೆಗಳ ಬಗ್ಗೆ ಚರ್ಚಿಸಿದರು. ಭೇಟಿ ಸಮಯದಲ್ಲಿ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ ಮತ್ತು ವಿಭಾಗದ […]