ಧರ್ಮಸ್ಥಳದಲ್ಲಿ ನಡೆದ ಮಹಾ ಮೃತ್ಯುಂಜಯ ಯಾಗದ ಪ್ರಸಾದ ಪ್ರಧಾನಿಗೆ ತಲುಪಿಸಿದ ಶಾಸಕ ಹರೀಶ್​ ಪೂಂಜಾ

Monday, January 31st, 2022
Harish Poonja

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹಿತಕ್ಕಾಗಿ ಹಾರೈಸಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗ ನೆರವೇರಿಸಿ ಇದೀಗ ಆ ಯಾಗದ ಪ್ರಸಾದ ನೇರವಾಗಿ ಪ್ರಧಾನಿಯವರನ್ನೇ ತಲುಪಿದೆ. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಖುದ್ದಾಗಿ ಈ ಪ್ರಸಾದವನ್ನು ಕೊಂಡೊಯ್ದು ಪ್ರಧಾನಿ ಮೋದಿಯವರಿಗೆ ಹಸ್ತಾಂತರಿಸಿದ್ದಾರೆ. ಅಷ್ಟೇ ಅಲ್ಲ ಯಾಗದಲ್ಲಿ ಮುಖ್ಯವಾಗಿ ಪಾಲ್ಗೊಂಡಿದ್ದ ಪುರೋಹಿತವೃಂದ ಕೂಡ ಶಾಸಕರೊಂದಿಗೆ ತೆರಳಿ ಮೋದಿಯವರಿಗೆ ಆಶೀರ್ವದಿಸಿದೆ. ಪ್ರಧಾನಿಯವರಿಗೆ ದೀರ್ಘಾಯಸ್ಸು ಕೋರಿ ಹಾಗೂ ಅವರ ಆರೋಗ್ಯವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮೃತ್ಯುಂಜಯ ಯಾಗವನ್ನು […]

ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬದ ದಿನ ಪೊಕೋಡಾ ತಯಾರಿಸಿ ಮಾರಾಟ ಮಾಡಿದ ಯುವ ಕಾಂಗ್ರೆಸ್‌ ಕಾರ್ಯಕರ್ತರು

Friday, September 17th, 2021
Youth Congress

ಮಂಗಳೂರು  :   ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಘಟಕದ ವತಿಯಿಂದ  ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ಪ್ರಧಾನ ಮಂತ್ರಿ ಮೋದಿ ಹುಟ್ಟು ಹಬ್ಬವನ್ನು ಪೊಕೋಡಾ ತಯಾರಿಸಿ ಮಾರಾಟ ಮಾಡಿ ಪ್ರತಿಭಟಿಸಿಸುವ ಮೂಲಕ ಆಚರಿಸಿದರು. ವಿದ್ಯಾವಂತರೆಲ್ಲ ರಸ್ತೆ ಬದಿಯಲ್ಲಿ ಪಕೋಡ ಮಾರಿ ನಿರುದ್ಯೋಗ ನಿವಾರಣೆ ಆಗಲಿ ಎಂದು ಪ್ರತಿಭಟನೆ ನಡೆಸಿದ್ದಾರೆ. ನರೇಂದ್ರ ಮೋದಿ ಸರಕಾರದ ಕಾಲದಲ್ಲಿ ಹೆಚ್ಚಿದ ನಿರುದ್ಯೋಗ ಮತ್ತು ಬೆಲೆಯೇರಿಕೆಯಾಗಿದೆ  ಎಂದು ಅವರು ಧಿಕ್ಕಾರ ಘೋಷಣೆ ಕೂಗಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, […]

ಕೊಚ್ಚಿ – ಮಂಗಳೂರು ನೈಸರ್ಗಿಕ ಅನಿಲ ಕೊಳವೆಮಾರ್ಗ ದೇಶಕ್ಕೆ ಸಮರ್ಪಿಸಿದ ಪ್ರಧಾನಿ

Tuesday, January 5th, 2021
Narendra Modi

ನವದೆಹಲಿ : ಕೊಚ್ಚಿ ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಒಂದು ದೇಶ ಒಂದು ಅನಿಲ ಜಾಲ ರೂಪಿಸುವುದರತ್ತ ಈ ಸಮಾರಂಭವು ಮಹತ್ವದ ಮೈಲುಗಲ್ಲು ಆಗಿತ್ತು. ಕರ್ನಾಟಕ, ಕೇರಳದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕ ಮತ್ತು ಕೇರಳವನ್ನು ನೈಸರ್ಗಿಕ […]

ಉಡುಪಿ ಶ್ರೀ ಅದಮಾರು ಮಠದಿಂದ ಪ್ರಧಾನ ಮಂತ್ರಿ ಕೊರೋನ ಪರಿಹಾರ ನಿಧಿಗೆ 55,55,555.00 ರೂ ದೇಣಿಗೆ

Friday, April 17th, 2020
Adamaru

ಉಡುಪಿ : ಶ್ರೀ ಅದಮಾರು ಮಠದಲ್ಲಿ, ಭಾರತದ ಪ್ರಧಾನ ಮಂತ್ರಿಯವರ ಕೊರೋನ ಸಂತ್ರಸ್ತರ ನಿಧಿಗೆ ಅದಮಾರು ಮಠ ಹಾಗೂ ಮಠದ ಶಿಕ್ಷಣ ಸಂಸ್ಥೆಗಳ ವತಿಯಿಂದ 55,55,555.00 ( ಐವತ್ತೈದು ಲಕ್ಷದ ಐವತ್ತೈದು ಸಾವಿರದ ಐನೂರಐವತ್ತೈದು) ರೂಪಾಯಿಗಳನ್ನು ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಜಗದೀಶ್, ಉಡುಪಿ ಶಾಸಕರಾದ ರಘುಪತಿ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಇವರ ಮುಕಾಂತರ ನೀಡಿದರು. ಕಾಲ ಕಾಲಕ್ಕೆ ಮಳೆ ಬರಬೇಕು […]

ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಆಯ್ಕೆ

Friday, November 10th, 2017
alvas

ಮೂಡುಬಿದಿರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ ವಿವಿಧ ಕೋರ್ಸ್‌ಗಳನ್ನು ನಡೆಸಲು ಮಿಜಾರು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಆಯ್ಕೆಯಾಗಿದೆ. 300 ಸೀಟ್‌ಗಳನ್ನು ಈ ಕೋರ್ಸ್ ಗಳಿಗೆ ನಿಗದಿಪಡಿಸಲಾಗಿದೆ. ಸಿ.ಎನ್.ಸಿ ಆಪರೇಟರ್ , ತಾಂತ್ರಿಕ ಐಟಿ ಸಂಯೋಜಕ , ಟೆಕ್ನಿಷಿಯನ್, ಫಿಟ್ಟರ್ ಮತ್ತಿತರ ವೃತ್ತಿಪರ ಕೋರ್ಸ್‌ಗಳನ್ನು ನಡೆಸಬಹುದಾಗಿದೆ. ವಿದ್ಯಾರ್ಥಿಗಳಲ್ಲಿ ಮತ್ತು ಪ್ರಸಕ್ತ ಉದ್ಯೋಗಸ್ಥರಿಗೆ ಅಗತ್ಯ ತರಬೇತಿ ಮತ್ತು ಆರ್ಥಿಕ ಸಹಾಯವನ್ನು ಒದಗಿಸಿ ಕೌಶಲ್ಯಾಭಿವೃದ್ಧಿ ಮಾಡುವುದೇ ಈ ಯೋಜನೆಯ ಪ್ರಮುಖ ಉದ್ದೇಶ ಎಂದು ಸಂಯೋಜನಾಧಿಕಾರಿ ಪ್ರೊ. […]

ಗುರುವಾಯನಕೆರೆ: ರಾಜ್ಯಮಟ್ಟದ ಸಮಾಲೋಚನಾ ಸಭೆ

Friday, November 10th, 2017
gurvaynkere

ಮಂಗಳೂರು: ’ಮಂಜುನಾಥಸ್ವಾಮಿ ಹೆಸರಿನಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿರುವುದೇ ದೊಡ್ಡ ಸೇವೆ ಎಂದು ವೀರೇಂದ್ರ ಹೆಗ್ಗಡೆಯವರು ಪ್ರಚಾರ ಮಾಡುತ್ತಿರುವುದನ್ನೇ ಸತ್ಯವೆಂದು ನಂಬಿ ಪ್ರಧಾನ ಮಂತ್ರಿಗಳು ಅವರನ್ನು ಉಜಿರೆಯಲ್ಲಿ ಭಾರೀ ಹೊಗಳಿದ್ದು ಸರಿಯಲ್ಲ. ಇವರ ಮೈಕ್ರೋಫೈನಾನ್ಸ್ ಕಾರ್ಪೊರೇಟ್‌ಗಿಂತ ಅಪಾಯಕಾರಿ. ಇದರ ವಿರುದ್ಧ ರಾಜ್ಯದ 30 ಜಿಲ್ಲೆಗಳಲ್ಲಿಯೂ ಜಾಗೃತಿ ಮೂಡಿಸಲು ನಮ್ಮ ಒಕ್ಕೂಟದ ಮತ್ತು ಪ್ರಜಾಧಿಕಾರ ವೇದಿಕೆ-ಕರ್ನಾಟಕದ ನೂರಾರು ಎನ್‌ಜಿಒಗಳು ನಿರ್ಧರಿಸಿದೆ ಎಂದು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ-ಕರ್ನಾಟಕ (ಫೆವಾರ್ಡ್-ಕೆ)ದ ಉಪಾಧ್ಯಕ್ಷ ಎಸ್.ಕುಮಾರ್ ಹೇಳಿದರು. ಜಂಟಿ ಕ್ರಿಯಾ ಸಮಿತಿ, […]

ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿ ಅಭಿಯಾನ :ಸಂಸದ ನಳಿನ್

Wednesday, October 11th, 2017
mudra yojan

ಮಂಗಳೂರು: ಅ.16ರಂದು ನಗರದ ಪುರಭವನದಲ್ಲಿ ಪ್ರಧಾನ ಮಂತ್ರಿಯವರ ಮುದ್ರಾ ಯೋಜನೆ ಕುರಿತಂತೆ ಸಮಗ್ರ ಮಾಹಿತಿಯನ್ನು ನೀಡುವ ಜತೆಗೆ ಕೇಂದ್ರ ಸರಕಾರದ ವಿವಿಧ ಸಾಲ ಸೌಲಭ್ಯಗಳ ಕುರಿತಂತೆ ಮಾಹಿತಿ ಒದಗಿಸುವ ವಿಶೇಷ ಅಭಿಯಾನ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದ ಕೌಶಲಾಭಿವೃದ್ಧಿ ಸಚಿವ ಅನಂತ ಹೆಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ದ.ಕ. ಜಿಲ್ಲೆಯಲ್ಲಿ ಮುದ್ರಾ ಯೋಜನೆಯಡಿ ಈಗಾಗಲೇ 59,408 ಫಲಾನುಭವಿಗಳಿಗೆ 748.95 ಕೋಟಿ […]

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತವಾಗಿ ಗ್ಯಾಸ್ ಸ್ಟೌವ್ ಮತ್ತು ರೆಗ್ಯುಲೇಟರ್

Wednesday, January 11th, 2017
utkhader

ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ರಾಜ್ಯ ಸರ್ಕಾರ ಉಚಿತವಾಗಿ ಗ್ಯಾಸ್ ಸ್ಟೌವ್ ಮತ್ತು ರೆಗ್ಯುಲೇಟರ್ ನೀಡಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಈ ಕುರಿತು ಮಾತನಾಡಿ,’ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಒಂದು ಸಿಲಿಂಡರ್ ಸೌಲಭ್ಯವುಳ್ಳ ಅಡುಗೆ ಅನಿಲ ಸಂಪರ್ಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಉತ್ತಮ ಗುಣಮಟ್ಟದ ಸ್ಟೌವ್ ಮತ್ತು ರೆಗ್ಯುಲೇಟರ್ ನೀಡಲಿದೆ’ ಎಂದರು. ಕರ್ನಾಟಕದಲ್ಲಿ ಉಜ್ವಲ ಯೋಜನೆಯಡಿ […]