ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಅಗಲಿದ ಪತ್ರಕರ್ತ ಮನೋಹರ ಪ್ರಸಾದ್ ಗೆ ಶ್ರದ್ಧಾಂಜಲಿ

Saturday, March 2nd, 2024
journalist

ಮಂಗಳೂರು : ಬಹುಮುಖ ಪ್ರತಿಭೆಯ ಪತ್ರಕರ್ತ ಮನೋಹರ ಪ್ರಸಾದ್ ಜಿಲ್ಲಾಡಳಿತ ಹಾಗೂ ಪತ್ರಕರ್ತರ ನಡುವಿನ ಕೊಂಡಿಯಾಗಿದ್ದರು ಎಂದು ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ತಿಳಿಸಿದ್ದಾರೆ. ಅವರು ಅಗಲಿದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ರವರಿಗೆ ನಗರದ ಪತ್ರಿಕಾಭವನದಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ ಕ್ಲಬ್,ಪತ್ರಿಕಾ ಭವನಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ನುಡಿನಮನದ ಮೂಲಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು. ಮನೋಹರ ಪ್ರಸಾದ್ ಪತ್ರ ಕರ್ತರು ಮಾತ್ರವಲ್ಲದೆ ಓರ್ವ ಉತ್ತಮ ನಿರೂಪಕರಾಗಿದ್ದರು.ಅವರು ತಮ್ಮ ನಿರೂಪಣೆಯ […]

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕೆ.ಟಿ ಶೈಲಾಜಾ ಭಟ್

Wednesday, February 9th, 2011
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆ

ಮಂಗಳೂರು,ಫೆ.08: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ 2011-12ರ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ಕೆ.ಟಿ ಶೈಲಾಜಾ ಭಟ್  ಅವರು ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧರ್ಮಸ್ಥಳ ಕ್ಷೇತ್ರದ ಬಿಜೆಪಿ ಸದಸ್ಯೆ ಧನಲಕ್ಷ್ಮೀ ಜನಾರ್ಧನ್.ಡಿ ಇವರು ಅಯ್ಕೆಯಾಗಿದ್ದಾರೆ . ಚುನಾವಣಾಧಿಕಾರಿ   ಎಂ.ವಿ. ಜಯಂತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಹಾಯಕ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ  ಅವರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ  ಅಧ್ಯಕ್ಷ ಹಾಗೂ ಉಪಾಧ್ಯಕ್ಷ  ಚುನಾವಣೆ ನಡೆಯಿತು. ಒಟ್ಟು 35 ಸದಸ್ಯ ಬಲದ ದ.ಕ.ಜಿಲ್ಲಾ ಪಂಚಾಯತ್‌ನಲ್ಲಿ ಬಿಜೆಪಿ […]

ಜನಗಣತಿ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಅಪರ ಜಿಲ್ಲಾಧಿಕಾರಿ

Wednesday, February 2nd, 2011
ಪ್ರಭಾಕರ ಶರ್ಮಾ

ಮಂಗಳೂರು : ಫೆಬ್ರವರಿ 9 ರಿಂದ ಫೆಬ್ರವರಿ 28 ರವರೆಗೆ ಭಾರತ ಜನಗಣತಿ-2011 ನಡೆಯಲಿದ್ದು, ಎಲ್ಲ ಇಲಾಖೆಗಳ ಸಹಕಾರವನ್ನು ಜನಗಣತಿ ನಿರ್ದೇಶಾನಲಯ ಕೋರಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಪ್ರಭಾಕರ ಶರ್ಮಾ ಅವರು ಹೇಳಿದರು. ಅವರಿಂದು ಜನಗಣತಿ ನಿರ್ದೇಶಾನಲಯದ ಸೂಚನೆಯಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದರು. ಜನಗಣತಿಯ ಉದ್ದೇಶ ಕೇವಲ ಜನಸಂಖ್ಯಾ ಮಾಹಿತಿಯನ್ನು ಸಂಗ್ರಹಿಸುವವುದಷ್ಟೇ ಅಲ್ಲ; ಜನಗಣತಿ ಸಂಖ್ಯಾಶಾಸ್ತ್ರ, ಆರ್ಥಿಕ ಚಟುವಟಿಕೆ, ಸಾಕ್ಷರತೆ ಮತ್ತು ಶಿಕ್ಷಣ ಮತ್ತು ಕುಟುಂಬಗಳಿಗೆ ಲಭ್ಯವಿರುವ ಸೌಲಭ್ಯಗಳು, ನಗರೀಕರಣ, […]

`ಅನಧಿಕೃತ ನಿರ್ಮಾಣ ಸ್ವ ಇಚ್ಛೆಯಿಂದ ತೆರವಿಗೆ ಡಿಸೆಂಬರ್ 15ರ ಗಡುವು’

Monday, November 29th, 2010
ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್

ಮಂಗಳೂರು : ಸುಪ್ರೀಂ ಕೋರ್ಟ್ ಆದೇಶದನ್ವಯ ಜನಪರವಾಗಿ ತೆಗೆದುಕೊಂಡಿರುವ ಅನಧಿಕೃತ ಧಾರ್ಮಿಕ ನಿರ್ಮಾಣಗಳ ತೆರವು ಕಾರ್ಯಾಚರಣೆಯನ್ನು ಸಂಬಂಧಪಟ್ಟವರು ಸ್ವ ಇಚ್ಛೆಯಿಂದ ಕೈಗೊಳ್ಳಲು ಡಿಸೆಂಬರ್ 15ರವರೆಗೆ ಜಿಲ್ಲಾಡಳಿತ ಕಾಲಾವಕಾಶ ನೀಡಿದೆ. ಇಂದು ಈ ಸಂಬಂಧ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರ ನೇತೃತ್ವದಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜನಪರ ನಿರ್ಧಾರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಈಗಾಗಲೇ ಜಿಲ್ಲಾ  ಮತ್ತು ತಾಲೂಕು ಮಟ್ಟದಲ್ಲಿ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿತ್ತು.ಈ ಸಭೆಗಳಿಗೆ ಧಾರ್ಮಿಕ ಮುಖಂಡರು ಹಾಜರಾಗಿದ್ದು, ಸ್ಥಳೀಯರಲ್ಲಿ […]