ಎಸ್​ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ

Sunday, July 19th, 2020
sdm dharwad

ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಸತ್ತೂರಿನ ಎಸ್ಡಿಎಂ ಆಸ್ಪತ್ರೆಯಲ್ಲಿ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೊಂದು ಪ್ರಯೋಗಾಲಯ ಪ್ರಾರಂಭವಾಗುತ್ತಿರುವುದು ನೆರವಾಗಲಿದೆ. ಕೊರೊನಾ ವಾರಿಯರ್ಗಳಾಗಿರುವ […]

ದ.ಕ. ಜಿಲ್ಲೆಯಲ್ಲಿ ರವಿವಾರ 97 ಮಂದಿಗೆ ಕೊರೋನ ಪಾಸಿಟಿವ್ ದೃಢ

Sunday, June 28th, 2020
corona virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ 97 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಜಿಲ್ಲೆಯಲ್ಲಿ ಈ ದಿನ ಅತಿಹೆಚ್ಚು ಕೇಸ್‌ಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ರವಿವಾರ ಒಂದೇ ದಿನ ಮೂವರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆಯಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದೆ. ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರುವುದು ಕೊರೋನವು ಸಮುದಾಯಕ್ಕೆ ಹಬ್ಬುತ್ತಿರುವ ಲಕ್ಷಣವೇ ಎನ್ನುವ ಆತಂಕ ಮನೆ ಮಾಡಿದೆ. ಕೊರೋನವು ಸರಣಿ ರೂಪದಲ್ಲಿ ವ್ಯಾಪಕಗೊಳ್ಳುತ್ತಿರುವುದು ಸಾರ್ವಜನಿಕ ಕಳವಳಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ರವಿವಾರ […]

ಕೋರೋನಾ ಪ್ರಕರಣಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6ನೇ ಸ್ಥಾನಕ್ಕಿಳಿದಿದೆ

Monday, April 13th, 2020
Corona case

ಮಂಗಳೂರು : ಕೋರೋನಾ ಪ್ರಕರಣಗಳಲ್ಲಿ ಬೆಂಗಳೂರು, ‌ಮೈಸೂರು ನಂತರ 3 ನೇ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯು ಇದೀಗ 6ನೇ ಸ್ಥಾನಕ್ಕಿಳಿದಿದೆ. ಜಿಲ್ಲೆಯ ಮಟ್ಟಿಗೆ ಇದು ಸಮಾಧಾನಕರ ಸಂಗತಿ. ಆದರೂ, ಇನ್ನೂ ಬಹಳಷ್ಟು ಜಾಗರೂಕರಾಗಿರಬೇಕಿದೆ.  ಜಿಲ್ಲೆಯಲ್ಲಿ 12 ಪ್ರಕರಣಗಳಲ್ಲಿ 8 ಮಂದಿ ಗುಣಮುಖರಾಗಿದ್ದಾರೆ. ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಸೋಮವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 26 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇನ್ನೂ 24 ಮಂದಿಯ ವರದಿಗಾಗಿ ಕಾಯಲಾಗುತ್ತಿದೆ. ಜ್ವರದ ಹಿನ್ನೆಲೆಯಲ್ಲಿ 7 ಮಂದಿಯ ಮೇಲೆ ನಿಗಾ ಇಡಲಾಗಿದೆ. […]